ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನವನ್ನು ಆರಂಭಿಸಬೇಕೆನ್ನುವ ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ 2026 ನೇ ಸಾಲಿನಲ್ಲಿ ಮಹತ್ವದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
RRB Recruitment 2026
ರೈಲ್ವೆ ಇಲಾಖೆಯಲ್ಲಿ ಗೌರವಾನ್ವಿತ, ಸ್ಥಿರ ಹಾಗೂ ಅತ್ಯಾಕರ್ಷಕ ವೇತನವನ್ನು ಪಡೆಯುವ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಜಸ್ಟ್ SSLC ಅಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 15-05-2026 ರಿಂದ ಆರಂಭಗೊಂಡು ದಿನಾಂಕ 14-06-2026 ಕ್ಕೆ ಕೊನೆಗೊಳ್ಳುತ್ತದೆ.
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್ಲೈನ್ ಮೂಲಕ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRB ALP ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಪೂರ್ತಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ಚಿತ್ರಣ:
| ನೇಮಕಾತಿ ಸಂಸ್ಥೆಯ ಹೆಸರು | ರೈಲ್ವೆ ನೇಮಕಾತಿ ಮಂಡಳಿ |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಲೋಕೋ ಪೈಲೆಟ್ |
| ಒಟ್ಟು ಹುದ್ದೆಗಳ ಸಂಖ್ಯೆ | 11,127 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-06-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಭಾರತೀಯ ರೇಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ಸಾಲಿನಲ್ಲಿ ಒಟ್ಟು 11,127 ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಡಿಪ್ಲೊಮಾ ಇಂಜಿನಿಯರಿಂಗ್ ನಂತಹ ತಾಂತ್ರಿಕ ಶಿಕ್ಷಣದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಹುದ್ದೆಯ ವಿವರ:
ಭಾರತೀಯ ರೇಲ್ವೆ ನೇಮಕಾತಿ ಮಂಡಳಿಯು ವಿವಿಧ ವಲಯಗಳಿಗೆ ಅನುಗುಣವಾಗಿ ಹುದ್ದೆಗಳನ್ನು ಹಂಚಿಕೆ ಮಾಡಿದ್ದು ಅವುಗಳ ವಿವರ ಈ ಕೆಳಕಂಡಂತಿದೆ.
| ವಲಯವಾರು ಹುದ್ದೆಗಳ ಹಂಚಿಕೆ | ಹುದ್ದೆಗಳ ಸಂಖ್ಯೆ |
| ಪೂರ್ವ ಕರಾವಳಿ ರೈಲ್ವೆ | 1625 ಹುದ್ದೆಗಳು |
| ದಕ್ಷಿಣ ಪೂರ್ವ ರೈಲ್ವೆ | 1531 ಹುದ್ದೆಗಳು |
| ಮಧ್ಯ ರೈಲ್ವೆ | 1400 ಹುದ್ದೆಗಳು |
| ಈಶಾನ್ಯ ಗಡಿ ರೈಲ್ವೆ | 1276 ಹುದ್ದೆಗಳು |
| ಉತ್ತರ ರೈಲ್ವೆ | 740 ಹುದ್ದೆಗಳು |
| ಪೂರ್ವ ಮಧ್ಯ ರೈಲ್ವೆ | 700 ಹುದ್ದೆಗಳು |
| ದಕ್ಷಿಣ ಮಧ್ಯ ರೈಲ್ವೆ | 674 ಹುದ್ದೆಗಳು |
| ಪೂರ್ವ ರೈಲ್ವೆ | 608 ಹುದ್ದೆಗಳು |
| ಉತ್ತರ ಪಶ್ಚಿಮ ರೈಲ್ವೆ | 600 ಹುದ್ದೆಗಳು |
| ಪಶ್ಚಿಮ ಮಧ್ಯ ರೈಲ್ವೆ | 541 ಹುದ್ದೆಗಳು |
| ಉತ್ತರ ಮಧ್ಯ ರೈಲ್ವೆ | 457 ಹುದ್ದೆಗಳು |
| ದಕ್ಷಿಣ ರೈಲ್ವೆ | 250 ಹುದ್ದೆಗಳು |
| ಪಶ್ಚಿಮ ರೈಲ್ವೆ | 214 ಹುದ್ದೆಗಳು |
| ದಕ್ಷಿಣ ಪೂರ್ವ ಮಧ್ಯ ರೈಲ್ವೆ | 200 ಹುದ್ದೆಗಳು |
| ದಕ್ಷಿಣ ಪಶ್ಚಿಮ ರೈಲ್ವೆ | 200 ಹುದ್ದೆಗಳು |
| ಈಶಾನ್ಯ ರೈಲ್ವೆ | 105 ಹುದ್ದೆಗಳು |
| ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ | 6 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ತಾಂತ್ರಿಕ ಶಿಕ್ಷಣವನ್ನು ಹೊಂದಿರಬೇಕು.
- ಅಭ್ಯರ್ಥಿಗಳು SSLC ಅಥವಾ ಮೆಟ್ರಿಕ್ಯುಲೇಷನ್ ಶಿಕ್ಷಣದ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಸಂಬಂಧಿತ ಟ್ರೇಡ್ ನಲ್ಲಿ ಡಿಪ್ಲೊಮಾ, ಐಟಿಐ ಅಥವಾ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ವೈದ್ಯಕೀಯ ಮಾನದಂಡಗಳನ್ನು ಪೂರೈಸಿರಬೇಕು.
ವಯೋಮಿತಿ ವಿವರ:
ಭಾರತೀಯ ರೇಲ್ವೆ ಮಂಡಳಿಯ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅರ್ಜಿ ಶುಲ್ಕದ ಕುರಿತು ಸಂಪೂರ್ಣ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ.
ವೇತನ ಶ್ರೇಣಿ:
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನಿಗದಿಪಡಿಸಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ ಮಾಸಿಕ ರೂ. 19,900/- ನೀಡಲಾಗುತ್ತದೆ. ಇವುಗಳ ಜೊತೆಗೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಹಾಗೂ ಇನ್ನಿತರ ಭತ್ಯೆಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
ಅಗತ್ಯ ದಾಖಲೆಗಳು:
- ಐಡಿ ಪ್ರೂಫ್
- ಜನ್ಮ ದಿನಾಂಕ ಪ್ರಮಾಣಪತ್ರ
- ಶೈಕ್ಷಣಿಕ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಜಾತಿ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ರೈಲ್ವೆ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮೂಲ ದಾಖಲೆಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಅಭ್ಯರ್ಥಿಗಳ ವಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಶೈಕ್ಷಣಿಕ ಅಂಕಪಟ್ಟಿ, ಶೈಕ್ಷಣಿಕ ಪ್ರಮಾಣಪತ್ರ ಹಾಗೂಈ ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 15-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ಸಾಲಿನಲ್ಲಿ 10000+ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಸಂಸ್ಥೆಯಡಿಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- SBI: ರೂ. 80,000/- ವೇತನ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೃಹತ್ ನೇಮಕಾತಿ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
- GESCOM: ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 5 ಕೊನೆಯ ದಿನಾಂಕ
- Udupi Cochin: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಸ್ಟೋರ್ ಕೀಪರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 4 ಕೊನೆಯ ದಿನಾಂಕ
- NIMHANS: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026 | ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- DCC Bank: ಜನರಲ್ ಮ್ಯಾನೇಜರ್ ಹುದ್ದೆಗಳ ಬೃಹತ್ ನೇಮಕಾತಿ 2026! 19-05-2026 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ