ಭಾರತೀಯ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನವನ್ನು ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಭಾರತ ಸರಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತನ್ನ ಸಂಸ್ಥೆಯ ಮೆಕ್ಯಾನಿಕಲ್ ಹಾಗೂ ಪ್ರಾಜೆಕ್ಟ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡುಕೊಳ್ಳಲಾಗುತ್ತದೆ.
KRCL Recruitment in Kannada
ಈ ಒಂದು ಸಂಸ್ಥೆಯು ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್, ಕ್ವಾಲಿಟಿ ಇನ್ಸ್ಪೆಕ್ಟರ್ ಆಫೀಸ್ ಬಾಯ್, ಡ್ರೈವರ್ ಸೇರಿದಂತೆ ಒಟ್ಟು 132 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
10 ನೇ ತರಗತಿಯಿಂದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ವೇತನ ಎಷ್ಟು? ಹಾಗೂ ಹುದ್ದೆಗೆ ಸಂಬಂಧಿಸಿದ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಕಿರು ಚಿತ್ರಣ:
| ನೇಮಕಾತಿ ಸಂಸ್ಥೆಯ ಹೆಸರು | ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ |
| ಹುದ್ದೆಯ ಹೆಸರು | ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್, ಡ್ರೈವರ್, ಆಫೀಸ್ ಬಾಯ್, ಕ್ವಾಲಿಟಿ ಇನ್ಸ್ಪೆಕ್ಟರ್ ಸೇರಿದಂತೆ ಇನ್ನಿತರ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 132 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಉದ್ಯೋಗ ಸ್ಥಳ | ಅಖಿಲ ಭಾರತ |
| ನೇಮಕಾತಿ ವಿಧಾನ | ನೇರ ನೇಮಕಾತಿ |
ಹುದ್ದೆಯ ಸಂಕ್ಷಿಪ್ತ ವಿವರ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಒಟ್ಟು 132 ಹುದ್ದೆಗಳನ್ನು ಈ ಕೆಳಗೆ ನೀಡಿರುವಂತೆ ಹಂಚಿಕೆ ಮಾಡಲಾಗಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಹೈಡ್ರಾ ಆಪರೇಟರ್ | 2 ಹುದ್ದೆಗಳು |
| ವೆಹಿಕಲ್ ಡ್ರೈವರ್ | 4 ಹುದ್ದೆಗಳು |
| ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ | 11 ಹುದ್ದೆಗಳು |
| ಲಿಸ್ಟರ್/ ಫೋರ್ಕ್ ಲಿಫ್ಟ್ ಆಪರೇಟರ್ | 14 ಹುದ್ದೆಗಳು |
| ಕ್ವಾಲಿಟಿ ಇನ್ಸ್ಪೆಕ್ಟರ್ | 15 ಹುದ್ದೆಗಳು |
| ಟೆಕ್ನಿಷಿಯನ್ (ಇಒಟಿ ಆಪರೇಟರ್) | 16 ಹುದ್ದೆಗಳು |
| ಟೆಕ್ನಿಷಿಯನ್ (ವೆಲ್ಡರ್) | 16 ಹುದ್ದೆಗಳು |
| ಟೆಕ್ನಿಷಿಯನ್ (ಫಿಟ್ಟರ್) | 22 ಹುದ್ದೆಗಳು |
| ಆಫೀಸ್ ಬಾಯ್/ ಹೆಲ್ಪರ್ | 32 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಹೈಡ್ರಾ ಆಪರೇಟರ್:
- ಹೈಡ್ರಾ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ತಾಂತ್ರಿಕ ಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರಬೇಕು.
- ಹೈಡ್ರಾ ಕ್ರೇನ್ ಕಾರ್ಯಾಚರಣೆಯಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. \
- ಹೈಡ್ರಾ ಆಪರೇಟರ್ ಆಗಿ ನೇಮಕಗೊಂಡ 3 ತಿಂಗಳ ಒಳಗೆ ಚಾಲ್ತಿಯಲ್ಲಿರುವ ಹೈಡ್ರಾ ಚಾಲನಾ ಪರವಾನಗಿ ಸಲ್ಲಿಸಬೇಕು.
- ವೆಹಿಕಲ್ ಡ್ರೈವರ್:
- ವೆಹಿಕಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಕನಿಷ್ಠ 2 ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು.
- ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್:
- ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪ್ರೊಡಕ್ಷನ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಮ್ಯಾನುಫ್ಯಾಕ್ಚರಿಂಗ್, ಆಟೋಮೊಬೈಲ್, ಮೆಕಾಟ್ರಾನಿಕ್ಸ್, ಮೆಟಲರ್ಜಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಕನಿಷ್ಠ 1 ವರ್ಷಗಳ ತಾಂತ್ರಿಕ ಅನುಭವವನ್ನು ಹೊಂದಿರಬೇಕು.
- ಲಿಸ್ಟರ್/ ಫೋರ್ಕ್ ಲಿಫ್ಟ್ ಆಪರೇಟರ್:
- ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
- ಫೋರ್ಕ್ ಲಿಫ್ಟ್ ಅಥವಾ ಲಿಸ್ಟರ್ ಚೆಕ್ ಕಾರ್ಯಾಚರಣೆಯಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
- ಲಿಸ್ಟರ್/ ಫೋರ್ಕ್ ಲಿಫ್ಟ್ ಆಗಿ ನೇಮಕಗೊಂಡ 3 ತಿಂಗಳ ಒಳಗೆ ಚಾಲ್ತಿಯಲ್ಲಿರುವ ಫೋರ್ಕ್ ಲಿಫ್ಟ್ ಚಾಲನಾ ಪರವಾನಗಿ ಸಲ್ಲಿಸಬೇಕು.
- ಕ್ವಾಲಿಟಿ ಇನ್ಸ್ಪೆಕ್ಟರ್:
- ಕ್ವಾಲಿಟಿ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪ್ರೊಡಕ್ಷನ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಮ್ಯಾನುಫ್ಯಾಕ್ಚರಿಂಗ್, ಆಟೋಮೊಬೈಲ್, ಮೆಕಾಟ್ರಾನಿಕ್ಸ್, ಮೆಟಲರ್ಜಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪೂರ್ಣ ಸಮಯದ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
- ತಪಾಸಣೆ ಮತ್ತು ನಿಯಂತ್ರಣ ವಿಭಾಗದಲ್ಲಿ ಕನಿಷ್ಠ 1 ವರ್ಷಗಳ ಅನುಭವವನ್ನು ಹೊಂದಿರಬೇಕು.
- ಟೆಕ್ನಿಷಿಯನ್ (ಇಒಟಿ ಆಪರೇಟರ್):
- ಟೆಕ್ನಿಷಿಯನ್ (ಇಒಟಿ ಆಪರೇಟರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಐಟಿಐ ಪ್ರಮಾಣಪತ ಹೊಂದಿರಬೇಕು.
- SSLC ಪೂರ್ಣಗೊಳಿಸಿದ ಅಭ್ಯರ್ಥಿಗಳು ಕನಿಷ್ಠ 4 ವರ್ಷಗಳ ಇಒಟಿ ಕ್ರೇನ್ ಆಪರೇಟ್ ಮಾಡಿದ ಅನುಭವವನ್ನು ಹೊಂದಿರಬೇಕು ಅಥವಾ
- ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ಇಒಟಿ ಕ್ರೇನ್ ಆಪರೇಟ್ ಮಾಡಿದ ಅನುಭವವನ್ನು ಹೊಂದಿರಬೇಕು.
- ಟೆಕ್ನಿಷಿಯನ್ (ವೆಲ್ಡರ್):
- ಟೆಕ್ನಿಷಿಯನ್ (ವೆಲ್ಡರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ವೆಲ್ಡಿಂಗ್ ಕೋರ್ಸ್ ಪೂರ್ಣಗೊಳಿಸಿರಬೇಕು ಅಥವಾ ವೆಲ್ಡರ್ ಅರ್ಹತಾ ಪ್ರಮಾಣಪತ್ರ ಹೊಂದಿರಬೇಕು.
- ಮೆಕ್ಯಾನಿಕಲ್ ವಿಭಾಗದಲ್ಲಿ ಕನಿಷ್ಠ 1 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಟೆಕ್ನಿಷಿಯನ್ (ಫಿಟ್ಟರ್):
- ಟೆಕ್ನಿಷಿಯನ್ (ಫಿಟ್ಟರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಫಿಟ್ಟರ್ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
- ಮೆಕ್ಯಾನಿಕಲ್ ಉದ್ಯಮ ವಲಯದಲ್ಲಿ ಕನಿಷ್ಠ 1 ವರ್ಷಗಳ ಪ್ರಾಯೋಗಿಕ ಅನುಭವವನ್ನು ಹೊಂದಿರಬೇಕು.
- ಆಫೀಸ್ ಬಾಯ್/ ಹೆಲ್ಪರ್:
- ಕನಿಷ್ಠ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಕಚೇರಿಯನ್ನು ಸ್ವಚ್ಚತೆ ಮಾಡಲು, ನಿರ್ವಹಣೆ ಮಾಡಲು ದೈಹಿಕವಾಗಿ ಸದೃಢರಾಗಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
- SC/ ST ಅಭ್ಯರ್ಥಿಗಳಿಗೆ: 5 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಆಯ್ಕೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.
ವೇತನ ಶ್ರೇಣಿ:
- ಆಫೀಸ್ ಬಾಯ್/ ಹೆಲ್ಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,700 ರಿಂದ ರೂ. 29,300 ವೇತನವನ್ನು ನೀಡಲಾಗುತ್ತದೆ.
- ಟೆಕ್ನಿಷಿಯನ್ (ಇಒಟಿ ಆಪರೇಟರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,100 ದಿಂದ ರೂ. 30,900 ವೇತನವನ್ನು ನೀಡಲಾಗುತ್ತದೆ.
- ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 41,380 ದಿಂದ ರೂ. 47,220 ವೇತನವನ್ನು ನೀಡಲಾಗುತ್ತದೆ.
- ಇತರೆ ತಾಂತ್ರಿಕ ಹಾಗೂ ಚಾಲಕ ಹುದ್ದೆಗಳಿಗೂ ಕೊಡ ಇದೇ ರೀತಿಯಲ್ಲಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
- ಇವುಗಳ ಜೊತೆಗೆ ಮನೆ ಬಾಡಿಗೆಯ ಭತ್ಯೆ, ತುಟ್ಟಿ ಭತ್ಯೆ, ಸಾರಿಗೆ ಭತ್ಯೆ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯಗಳು ದೊರೆಯುತ್ತದೆ.
ಅಗತ್ಯ ದಾಖಲೆಗಳು:
- SSLC ಅಂಕಪಟ್ಟಿ
- ಐಟಿಐ / ಡಿಪ್ಲೊಮಾ/ ಇಂಜಿನಿಯರಿಂಗ್ ಪ್ರಮಾಣಪತ್ರ
- ಐಟಿಐ / ಡಿಪ್ಲೊಮಾ/ ಪದವಿ ಅಂಕಪಟ್ಟಿ
- ನಿವಾಸ ಪ್ರಮಾಣಪತ್ರ
- ಐಡಿ ಪ್ರೂಫ್
- ಅನುಭವ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಚಾಲನಾ ಪರವಾನಗಿ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಮೊದಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ದಾಖಲೆಗಳನ್ನು ಅರ್ಜಿ ಪ್ರತಿಯೊಂದಿಗೆ ಲಗತ್ತಿಸಿ. ಅಪ್ಲಿಕೇಶನ್ ಫಾರ್ಮ್ ಮೇಲೆ ನಿಮ್ಮ ಇತ್ತೀಚೀನ ಫೋಟೋವನ್ನು ಅಂಟಿಸಿ.
- ನಿಗದಿಪಡಿಸಿದ ನಿರ್ದಿಷ್ಟ ದಿನಾಂಕದಂದು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯ ಒಳಗೆ ಸಂದರ್ಶನ ಸ್ಥಳಕ್ಕೆ ಭೇಟಿ ನೀಡಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ.
- ಸಂದರ್ಶನ ನಡೆಯುವ ಸ್ಥಳದ ವಿಳಾಸ: “ಅಡ್ಮಿನಿಸ್ಟ್ರೇಟಿವ್ ಬ್ಯುಲ್ಡಿಂಗ್, ವ್ಯಾಗನ್ ರಪೈರ್ ವರ್ಕ್ಶಾಪ್, ಆಟೋನಗರ್, ವದ್ಲಾಪುಡಿ, ಗಜುವಾಕ, ವಿಶಾಖಪಟ್ಟಣಂ, ಆಂಧ್ರಪ್ರದೇಶ”
ಆಯ್ಕೆ ಪ್ರಕ್ರಿಯೆ:
- ದಾಖಲಾತಿ ಪರಿಶೀಲನೆ:
- ಸಂದರ್ಶನ
- ತಾಂತ್ರಿಕ ಕೌಶಲ್ಯ ಮೌಲ್ಯಮಾಪನ
- ಅನುಭವ ಹಾಗೂ ಅರ್ಹತೆಯ ಆಧಾರದ ಮೇಲೆ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಹುದ್ದೆಗಳ ಹೆಸರು | ಸಂದರ್ಶನ ನಡೆಯುವ ದಿನಾಂಕ ದಿನಾಂಕ |
|---|---|
| ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ | 08-06-2026 |
| ಕ್ವಾಲಿಟಿ ಇನ್ಸ್ಪೆಕ್ಟರ್ | 09-06-2026 |
| ಟೆಕ್ನಿಷಿಯನ್ (ವೆಲ್ಡರ್), ಟೆಕ್ನಿಷಿಯನ್ (ಇಒಟಿ ಆಪರೇಟರ್) | 10-06-2026 |
| ಟೆಕ್ನಿಷಿಯನ್ (ಫಿಟ್ಟರ್), ವೆಹಿಕಲ್ ಡ್ರೈವರ್, ಲಿಸ್ಟರ್ ಮತ್ತು ಹೈಡ್ರಾ ಆಪರೇಟರ್ | 11-06-2026 |
| ಆಫೀಸ್ ಬಾಯ್, ಹೆಲ್ಪರ್ | 12-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕೊಂಕಣ ರೇಲ್ವೆ ಕಾರ್ಪೋರೇಶನ್ ಲಿಮಿಟೆಡ್ ವತಿಯಿಂದ ಪ್ರಕಟಿಸಲಾದ ಈ ನೇಮಕಾತಿ ಅಧಿಸೂಚನೆ ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ವಿಶೇಷವಾಗಿ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ಇನ್ನಷ್ಟು ಅನುಕೂಲಕರವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ
- IAF: ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ 2026! ಜೂನ್ 1 ಕೊನೆಯ ದಿನಾಂಕ
- RRB: ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳ ಬೃಹತ್ ನೇಮಕಾತಿ 2026! SSLC + ITI ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- SBI: ರೂ. 80,000/- ವೇತನ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೃಹತ್ ನೇಮಕಾತಿ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
- GESCOM: ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 5 ಕೊನೆಯ ದಿನಾಂಕ