ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಪ್ರತಿನಿಧಿಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಡಿಜಿಟಲ್ ಜಗತ್ತಿನಲ್ಲಿ ನಾಗರೀಕರ ಸುರಕ್ಷತೆಯನ್ನು ಬಲಪಡಿಸಲು ಹಾಗೂ ವೇಗವಾಗಿ ಹರಡುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
KSP Recruitment 2026
ನೆಟ್ವರ್ಕ್ ಮಾನಿಟರಿಂಗ್, ಡಿಜಿಟಲ್ ಫಾರೆನ್ಸಿಕ್, ಸೈಬರ್ ಸುರಕ್ಷತೆ ಹಾಗೂ ತಾಂತ್ರಿಕ ವಿಶ್ಲೇಷಣೆಯಲ್ಲಿ ಪರಿಣಿತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಹುದ್ದೆಯು ಒಪ್ಪಂದ ಆಧಾರಿತವಾಗಿದ್ದು, ಅತ್ಯಾಕರ್ಷಕ ವೇತನ ಹಾಗೂ ವೃತ್ತಿಪರ ಅನುಭವವನ್ನು ಒದಗಿಸಲಿದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಧುನಿತ ತಂತ್ರಜ್ಞಾನದೊಂದಿಗೆ ಕೆಲಸ ಮಾಡಲು ಅವಕಾಶ ದೊರೆಯಲಿದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಇಮೇಲ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕ) |
| ಹುದ್ದೆಯ ಹೆಸರು | ಡಿಜಿಟಲ್ ಫಾರೆನ್ಸಿಸ್ ಅನಾಲಿಸ್ಟ್, ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ |
| ಹುದ್ದೆಯ ಸಂಖ್ಯೆ | ಒಟ್ಟು 11 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಉದ್ಯೋಗ ಸ್ಥಳ | ಬೆಂಗಳೂರು ನಗರ |
| ನೇಮಕಾತಿ ವಿಧಾನ | ಆಫ್ಲೈನ್ ಅಂಚೆ ಮೂಲಕ |
ಹುದ್ದೆಯ ಸಂಕ್ಷಿಪ್ತ ವಿವರ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಳಿಸಿರುವಂತೆ ತಾಂತ್ರಿಕ ಹುದ್ದೆಗಳ ವರ್ಗಿಕರಣ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಹೆಸರು |
| ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ | 8 ಹುದ್ದೆಗಳು |
| ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ | 3 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಕಂಪ್ಯೂಟರ್ ಸೈನ್ಸ್, ಡಿಜಿಟಲ್ ಫಾರೆನ್ಸಿಕ್, ಮಾಹಿತಿ ತಂತ್ರಜ್ಞಾನ ಅಥವಾ ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಬಿಇ, ಬಿಟೆಕ್, ಎಂ.ಸಿ.ಎ ಅಥವಾ ಸಂಬಂಧಿತ ತಾಂತ್ರಿಕ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ಒಂದು ವಿಷಯದ ಕುರಿತು ಸಂಪೂರ್ಣ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ವಯೋಮಿತಿ ವಿವರ:
ಸಾಮಾನ್ಯವಾಗಿ ಒಪ್ಪಂದದ ಆಧಾರದ ಮೇಲೆ ನಡೆಯು ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಕರ್ನಾಟಕ ಪೊಲೀಸ್ ಇಲಾಖೆಯ ನಿಯಮಾನುಸಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇದಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದಾರೆಯೇ? ಇಲ್ಲವೇ? ಎಂದು ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಿ.
ಸಾಮಾನ್ಯವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಗೊಳ್ಳುವ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸುವುದಿಲ್ಲ.
ವೇತನ ಶ್ರೇಣಿ:
- ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ ಹಾಗೂ ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಇದು ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿರುವುದರಿಂದ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವ ಹಾಗೂ ತಾಂತ್ರಿಕ ಕೌಶಲ್ಯಗಳ ಆಧಾರದ ಮೇಲೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ನಿವಾಸ ಪ್ರಮಾಣಪತ್ರ
- ಐಡಿ ಪ್ರೂಫ್
- ಅನುಭವ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹಾಗೂ ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎರಡು ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಂಚೆ ಮೂಲಕ:
- ಆಸಕ್ತ ಅಭ್ಯರ್ಥಿಗಳು ಮೊದಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ದಾಖಲೆಗಳನ್ನು ಅರ್ಜಿ ಪ್ರತಿಯೊಂದಿಗೆ ಲಗತ್ತಿಸಿ. ಅಪ್ಲಿಕೇಶನ್ ಫಾರ್ಮ್ ಮೇಲೆ ನಿಮ್ಮ ಇತ್ತೀಚೀನ ಫೋಟೋವನ್ನು ಅಂಟಿಸಿ.
- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.
- ವಿಳಾಸ: ನಂ.01, ಇನ್ಫೆಂಟ್ರಿ ರಸ್ತೆ, ಪೊಲೀಸ್ ಆಯುಕ್ತರ ಕಚೇರಿ, ಬೆಂಗಳೂರು – 560001
ಇಮೇಲ್ ಮೂಲಕ:
- ಅಭ್ಯರ್ಥಿಗಳು ತಮ್ಮ ಇತ್ತೀಚಿನ ರೆಸೂಮ್, ಭರ್ತಿ ಮಾಡಿದ ಅರ್ಜಿ, ಅಗತ್ಯ ದಾಖಲೆಗೆಳೆಲ್ಲವನ್ನು ಸ್ಕ್ಯಾನ್ ಮಾಡಿ ಒಂದು ಪಿಡಿಎಫ್ ರೂಪದಲ್ಲಿ ಇಲಾಖೆಯ ಅಧಿಕೃತ ಇಮೇಲ್ ವಿಳಾಸಕ್ಕೆ [email protected] ಕ್ಕೆ ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್
- ತಾಂತ್ರಿಕ ಕೌಶಲ್ಯ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 14-05-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 18-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 24-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಒಟ್ಟಾರೆಯಾಗಿ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್, ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ನೆನಪಿರಲಿ ಇನ್ನು ಕೇವಲ 5 ದಿನಗಳಷ್ಟೇ ಕಾಲಾವಕಾಶವಿದೆ.
ಇತರೆ ಪ್ರಮುಖ ಲಿಂಕುಗಳು:
- KRCL: ರೂ. 47,220/- ವೇತನ! ಕೊಂಕಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ
- IAF: ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ 2026! ಜೂನ್ 1 ಕೊನೆಯ ದಿನಾಂಕ
- RRB: ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳ ಬೃಹತ್ ನೇಮಕಾತಿ 2026! SSLC + ITI ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- SBI: ರೂ. 80,000/- ವೇತನ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೃಹತ್ ನೇಮಕಾತಿ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ