ನಮಸ್ಕಾರ ಸ್ನೇಹಿತರೆ, ನೀವೇನಾದರೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿನ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಪ್ರಸ್ತುತ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ತಮ್ಮ ಇಲಾಖೆಯಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.
NHAI Recruitment in Kannada
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದ ಹುದ್ದೆಯಾಗಿರುವುದರಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು NHAI ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 15-05-2026 ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-06-2026 ಆಗಿದೆ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ |
| ಹುದ್ದೆಯ ಹೆಸರು | ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್) |
| ಹುದ್ದೆಯ ಸಂಖ್ಯೆ | ಒಟ್ಟು 60 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ಪ್ರಕ್ರಿಯೆ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ ಅವುಗಳ ವಿವರ ಈ ಕೆಳಕಂಡಂತಿದೆ.
| ವಿವಿಧ ವರ್ಗಗಳ ಅಭ್ಯರ್ಥಿಗಳು | ಹುದ್ದೆಗಳ ಸಂಖ್ಯೆ |
| ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ | 26 ಹುದ್ದೆಗಳು |
| ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ | 16 ಹುದ್ದೆಗಳು |
| ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ | 9 ಹುದ್ದೆಗಳು |
| ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ | 4 ಹುದ್ದೆಗಳು |
| ಆರ್ಥಿಕವಾಗಿ ದುರ್ಬಲ ವರ್ಗಗಳ ಅಭ್ಯರ್ಥಿಗಳಿಗೆ | 5 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 15-06-2026 ಕ್ಕೆ ಅನ್ವಯವಾಗುವಂತೆ ಲೆಕ್ಕಹಾಕಲಾಗುತ್ತದೆ. ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ವಿವರ:
NHAI ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 5 ವರ್ಷ
- PwBD (ಸಾಮಾನ್ಯ ವರ್ಗ) ಅಭ್ಯರ್ಥಿಗಳಿಗೆ: 10 ವರ್ಷ
- PwBD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
- PwBD (SC/ ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಡೆಪ್ಯುಟಿ ಮ್ಯಾನೇಜರ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವೇತನ ಆಯೋಗದ ಅನ್ವಯ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅಗತ್ಯ ದಾಖಲೆಗಳು:
- ಸಿವಿಲ್ ಇಂಜಿನಿಯರಿಂಗ್ ಪದವಿ ಪ್ರಮಾಣಪತ್ರ
- ಪ್ರತಿ ಸೆಮಿಸ್ಟರ್ ಅಂಕಪಟ್ಟಿ
- ನಿವಾಸ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- GATE ಸ್ಕೋರ್ ಕಾರ್ಡ್
- ಜನ್ಮ ದಿನಾಂಕ ದೃಢೀಕರಣ ಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಮೊದಲು NHAI ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಬೌಟ್ ಅಸ್ – ರಿಕ್ರೂಟ್ಮೆಂಟ್ – ವೇಕೆನ್ಸಿ – ಕರಂಟ್ ವಿಭಾಗಕ್ಕೆ ಹೋಗಿ.
- ನಂತರ ಡೆಪ್ಯುಟಿ ಮ್ಯಾನೇಜರ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- GATE ಸಿವಿಲ್ ಇಂಜಿನಿಯರಿಂಗ್ ನಲ್ಲಿ ಸ್ಕೋರ್ ಮಾಡಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಹೆಚ್ಚು ಸ್ಕೋರಿಂಗ್ ಮಾಡಿದ ಅಭ್ಯರ್ಥಿಗಳನ್ನು ಅರ್ಹ ಅಭ್ಯರ್ಥಿಗಳೆಂದು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಇಬ್ಬರು ಅಭ್ಯರ್ಥಿಗಳು ಕೂಡ ಸೇಮ್ ಸ್ಕೋರಿಂಗ್ ಮಾಡಿದ್ದರೆ, ಮೊದಲು ಜನಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಗಮನಿಸಿ:
ಅಭ್ಯರ್ಥಿಗಳು ಆಯ್ಕೆಯಾದ ನಂತರ, ರೂ. 5,00,000 ಮೌಲ್ಯದ ಬಾಂಡ್ ಗೆ ಸಹಿ ಹಾಕಬೇಕು. ನಂತರ ಅಭ್ಯರ್ಥಿಗಳನ್ನು ಕನಿಷ್ಠ 3 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ನಿಗದಿತ ಅವಧಿ ಮುಗಿಯುವ ಮೊದಲೇ ಕೆಲಸವನ್ನು ಕಳೆದುಕೊಂಡರೆ ರೂ. 5,00,000 ಮೌಲ್ಯದ ಬಾಂಡ್ ಅನ್ನು NHAI ಗೆ ಹಿಂದಿರುಗಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 15-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳು ಗೇಟ್ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಗಳಿಸಿದ ಸ್ಕೋರ್ ಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- KSP: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ! । ಕೊನೆಯ ದಿನಾಂಕ ಮೇ 24
- KRCL: ರೂ. 47,220/- ವೇತನ! ಕೊಂಕಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ
- IAF: ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ 2026! ಜೂನ್ 1 ಕೊನೆಯ ದಿನಾಂಕ
- RRB: ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳ ಬೃಹತ್ ನೇಮಕಾತಿ 2026! SSLC + ITI ಅಭ್ಯರ್ಥಿಗಳಿಗೆ ಸುವರ್ಣಾವಕಾಶ