BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಅತ್ಯದ್ಭುತ ಅವಕಾಶವನ್ನು ಕಲ್ಪಿಸಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 5000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BOB Recruitment in Kannada

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸುವ ಜೊತೆಗೆ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 19-05-2026 ಕ್ಕೆ ಆರಂಭಗೊಂಡಿದೆ.

ಅರ್ಜಿ ಸಲ್ಲಿಸಲು ದಿನಾಂಕ 08-06-2026 ವರೆಗೆ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಈ ಎಲ್ಲ ಮಾಹಿತಿಯನ್ನು ಸ್ಪಷ್ಟವಾಗಿ ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

BOB

ಹುದ್ದೆಯ ಕಿರು ಚಿತ್ರಣ:

ನೇಮಕಾತಿ ಸಂಸ್ಥೆಯ ಹೆಸರು ಬ್ಯಾಂಕ್ ಆಫ್ ಬರೋಡ
ಹುದ್ದೆಯ ಹೆಸರು ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ ಒಟ್ಟು 5000 ಹುದ್ದೆಗಳು
ಉದ್ಯೋಗ ಸ್ಥಳ ಭಾರತದಾದ್ಯಂತ
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ ಮೂಲಕ ಮಾತ್ರ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಬ್ಯಾಂಕ್ ಆಫ್ ಬರೋಡ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 5000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ, ಕನಿಷ್ಠ 20 ವರ್ಷದಿಂದ ಗರಿಷ್ಟ 28 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಇದು ಒಂದು ವರ್ಷದ ಪ್ರಾಯೋಗಿಕ ತರಬೇತಿಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಅತ್ಯಾಕರ್ಷಕ ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಬ್ಯಾಂಕ್ ಆಫ್ ಬರೋಡ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 5000 ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಅಪ್ರೆಂಟಿಸ್ (ಪರಿಶಿಷ್ಟ ಪಂಗಡ)441 ಹುದ್ದೆಗಳು
ಅಪ್ರೆಂಟಿಸ್ (ಆರ್ಥಿಕವಾಗಿ ಹಿಂದುಳಿದ ವರ್ಗ)486 ಹುದ್ದೆಗಳು
ಅಪ್ರೆಂಟಿಸ್ (ಪರಿಶಿಷ್ಟ ಜಾತಿ)717 ಹುದ್ದೆಗಳು
ಅಪ್ರೆಂಟಿಸ್ (ಇತರೆ ಹಿಂದುಳಿದ ವರ್ಗ)1208 ಹುದ್ದೆಗಳು
ಅಪ್ರೆಂಟಿಸ್ (ಸಾಮಾನ್ಯ ವರ್ಗ)2148 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಬ್ಯಾಂಕ್ ಆಫ್ ಬರೋಡ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದರಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷವನ್ನು ಹಾಗೂ ಗರಿಷ್ಟ 28 ವರ್ಷವನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಹೀಗಿದೆ.

  • ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
  • SC/ ST ಅಭ್ಯರ್ಥಿಗಳಿಗೆ: 5 ವರ್ಷ
  • PwBD (ಸಾಮಾನ್ಯ ವರ್ಗ) ಅಭ್ಯರ್ಥಿಗಳಿಗೆ : 10 ವರ್ಷ
  • PwBD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
  • PwBD (ST / SC) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿವರ ವರ್ಗಗಳ ಅಭ್ಯರ್ಥಿಗಳಿಗೆ ವಿಭಿನ್ನವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ. 200 + GST

ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ. 600 + GST

ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪುರುಷ ಅಭ್ಯರ್ಥಿಗಳಿಗೆ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ. 800 + GST

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಪ್ರಾಯೋಗಿಕ ತರಬೇತಿಯಲ್ಲಿ ಪ್ರತಿ ತಿಂಗಳು ರೂ. 15,000 ಸ್ಟೈಫಂಡ್ ನೀಡಲಾಗುತ್ತದೆ.

ಅಗತ್ಯ ದಾಖಲೆಗಳು:

  • ಪದವಿ ಅಂಕಪಟ್ಟಿ
  • ಪದವಿ ಪ್ರಮಾಣಪತ್ರ
  • ನಿವಾಸ ಪ್ರಮಾಣಪತ್ರ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಮೊದಲು ಸರ್ಕಾರದ ಅಧಿಕೃತ ಅಪ್ರೆಂಟಿಸ್ ಶಿಪ್ ಪೋರ್ಟಲ್ NATS https://nats.education.gov.in/ ಅಥವಾ NAPS https://www.apprenticeshipindia.gov.in/ ಪೋರ್ಟಲ್ ಮೂಲಕ ನಲ್ಲಿ ಇ- ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ.
  • ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಕೆರಿಯರ್ ವಿಭಾಗವನ್ನು ತೆರೆದು ರಿಕ್ರೂಟ್ಮೆಂಟ್ ಫಾರ್ ಅಪ್ರೆಂಟಿಸ್ ಶಿಪ್ ಲಿಂಕ್ ಆಯ್ಕೆ ಮಾಡಿಕೊಂಡು ಅಪ್ಲೈ ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಪರೀಕ್ಷೆ:

ಒಟ್ಟು 100 ಅಂಕಗಳ ವಸ್ತುನಿಷ್ಠ ಮಾದರಿಯ ಆನ್ಲೈನ್ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಯಾವುದೇ ನೆಗೆಟಿವ್ ಅಂಕಗಳಿರುವುದಿಲ್ಲ ಹಾಗೂ ಅಭ್ಯರ್ಥಿಗಳು ತಮ್ಮ ಮೊಬೈಲ್, ಟ್ಯಾಬ್ಲೆಟ್ ಅಥವಾ ಲ್ಯಾಪ್ಟಾಪ್ ಬಳಸಿ ರಿಮೋಟ್ ಪ್ರೊಕ್ಟೋರ್ಡ್ ಮಾದರಿಯಲ್ಲಿ ಬೇರೆಯಬಹುದಾಗಿದೆ.

  • ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ:

ಆನ್ಲೈನ್ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ತಾವು ಅರ್ಜಿ ಸಲ್ಲಿಸುವ ರಾಜ್ಯದ ಅಧಿಕೃತ ಸ್ಥಳೀಯ ಭಾಷೆಯನ್ನು ಓದಲು, ಬೆರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. ಅಭ್ಯರ್ಥಿಗಳು 10 ಮತ್ತು 12 ನೇ ತರಗತಿಯಲ್ಲಿ ಸ್ಥಳೀಯ ಭಾಷೆಯನ್ನು ಒಂದು ವಿಷಯವಾಗಿ ಓದಿದ್ದರೆ ಭಾಷಾ ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ19-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ08-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಬ್ಯಾಂಕ್ ಆಫ್ ಬರೋಡ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 5000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಒನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment