KEA: ರೂ. 83,700/- ವೇತನ! SDA – FDA ಹುದ್ದೆಗಳ ಬೃಹತ್ ನೇಮಕಾತಿ 2026! ಕೊನೆಯ ದಿನಾಂಕ 03-06-2026

ನಮಸ್ಕಾರ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿಯನ್ನು ಹೊರಡಿಸಿದ್ದು, ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್, ಹಾಗೂ ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

KEA Recruitment 2026

ಇಲ್ಲಿ ಒಟ್ಟು 6 SDA ಹಾಗೂ FDA ಹುದ್ದೆಗಳು ಖಾಲಿ ಇದ್ದು, PUC ಅಥವಾ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ ಅಂದರೆ ದಿನಾಂಕ 20-05-2026 ರಿಂದ ಆರಂಭಗೊಂಡು 03-06-2026 ಕ್ಕೆ ಕೊನೆಗೊಳ್ಳುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ SDA ಹಾಗೂ FDA ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಿದ್ದು, ಇವುಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

KEA

ಹುದ್ದೆಯ ವಿವರಣಾತ್ಮಕ ನೋಟ:

ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಫಸ್ಟ್ ಡಿವಿಷನ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ ಒಟ್ಟು 6 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಉದ್ಯೋಗ ಸ್ಥಳ ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-06-2026

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಫಸ್ಟ್ ಡಿವಿಷನ್ ಅಸಿಸ್ಟೆಂಟ್ 02 ಹುದ್ದೆಗಳು
ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ 04 ಹುದ್ದೆಗಳು
  • ಪ್ರಥಮ ದರ್ಜೆ ಸಹಾಯಕ ಒಟ್ಟು 2 ಹುದ್ದೆಗಳಲ್ಲಿ 1 ಹುದ್ದೆಯನ್ನು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಿದರೆ ಇನ್ನು 1 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.
  • ದ್ವಿತೀಯ ದರ್ಜೆ ಸಹಾಯಕ ಒಟ್ಟು 4 ಹುದ್ದೆಗಳಲ್ಲಿ 1 ಹುದ್ದೆಯನ್ನು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ, 1 ಹುದ್ದೆಗಳನ್ನು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ 2 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆ:

  • ಫಸ್ಟ್ ಡಿವಿಷನ್ ಅಸಿಸ್ಟೆಂಟ್:

ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

  • ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್:

ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ PUC ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 03-06-2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಹೀಗಿದೆ.

  • ಒಬಿಸಿ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
  • SC/ ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ: 5 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ. 500/-
  • ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ. 750/-
  • ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/-

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

  • ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 44,425/- ರೂ. 83,700/-
  • ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100/- ರೂ. 67,600/-

ಅಗತ್ಯ ದಾಖಲೆಗಳು:

  • ಪದವಿ ಅಂಕಪಟ್ಟಿ
  • PUC ಅಂಕಪಟ್ಟಿ
  • ಪದವಿ ಪ್ರಮಾಣಪತ್ರ
  • ನಿವಾಸ ಪ್ರಮಾಣಪತ್ರ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಕ್ಲಿಕ್ ಮಾಡಿ SDA- FDA ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
  • ಹೊಸ ಬಳಕೆದಾರರಾಗಿದ್ದರೆ, ನ್ಯೂ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮೂಲ ವಿವರಗಳನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಪರೀಕ್ಷೆ:

SDA ಹಾಗೂ FDA ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯನ್ನು ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

  • ಕನ್ನಡ ಭಾಷಾ ಪರೀಕ್ಷೆ:

ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ ನಂತರ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು SSLC, PUC ಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆಮಾಡಿಕೊಂಡಿದ್ದರೆ ಇಂತಹ ಅಭ್ಯರ್ಥಿಗಳಿಗೆ ಈ ಹಂತದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ20-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ04-06-2026 ಸಂಜೆ 4 ಗೆಂಟೆಯ ಒಳಗೆ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಿಮಗೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment