ನಮಸ್ಕಾರ ಸ್ನೇಹಿತರೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ ಮೂಲಕ ಒಟ್ಟು 845 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
UPSC Recruitment in Kannada
ಅಖಿಲ ಭಾರತದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಒಂದು ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 20-05-2026 ರಿಂದ ಆರಂಭಗೊಂಡಿದ್ದು, 09-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಭಾರತೀಯ ಭೂ ಸೇನೆ, ವಾಯುಪಡೆ ಹಾಗೂ ನೌಕಾದಳದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಪ್ರಸ್ತುತ ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅವುಗಳನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ |
| ಹುದ್ದೆಯ ಹೆಸರು | ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ |
| ಹುದ್ದೆಗಳ ಸಂಖ್ಯೆ | ಒಟ್ಟು 845 ಹುದ್ದೆಗಳು |
| ಉದ್ಯೋಗ ಸ್ಥಳ | ಭಾರತದಾದ್ಯಂತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಶೈಕ್ಷಣಿಕ ಅರ್ಹತೆ | ದ್ವಿತೀಯ ಪಿಯುಸಿ ಅಥವಾ ಯಾವುದೇ ಪದವಿ |
ಹುದ್ದೆಯ ಸಂಕ್ಷಿಪ್ತ ವಿವರ:
ರಕ್ಷಣಾ ಇಲಾಖೆಯ ವಿವಿಧ ವಿಭಾಗಗಳ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ. ಈ ಹುದ್ದೆಗಳನ್ನು ಅಕಾಡೆಮಿವಾರು ವರ್ಗೀಕರಣ ಮಾಡಲಾಗಿದೆ.
- ರಾಷ್ಟೀಯ ರಕ್ಷಣಾ ಅಕಾಡೆಮಿ (NDA):
| ಅಕಾಡೆಮಿ ಹೆಸರು | ಹುದ್ದೆಗಳ ಸಂಖ್ಯೆ |
| ರಾಷ್ಟೀಯ ರಕ್ಷಣಾ ಅಕಾಡೆಮಿ (ಭೂ ಸೇನೆ) | 208 ಹುದ್ದೆಗಳು |
| ರಾಷ್ಟೀಯ ರಕ್ಷಣಾ ಅಕಾಡೆಮಿ (ವಾಯುಪಡೆ) | 120 ಹುದ್ದೆಗಳು |
| ರಾಷ್ಟೀಯ ರಕ್ಷಣಾ ಅಕಾಡೆಮಿ (ನೌಕಾಪಡೆ) | 42 ಹುದ್ದೆಗಳು |
| ರಾಷ್ಟೀಯ ರಕ್ಷಣಾ ಅಕಾಡೆಮಿ (ನೌಕಾ ಅಕಾಡೆಮಿ) | 24 ಹುದ್ದೆಗಳು |
2. ಕಂಬೈನ್ಡ್ ಡಿಫೆನ್ಸ್ ಸರ್ವಿಸ್ (CDS):
| ಅಕಾಡೆಮಿ ಹೆಸರು | ಹುದ್ದೆಗಳ ಸಂಖ್ಯೆ |
| ಭಾರತೀಯ ಸೇನಾ ಅಕಾಡೆಮಿ | 100 ಹುದ್ದೆಗಳು |
| ಭಾರತೀಯ ನೌಕಾ ಅಕಾಡೆಮಿ | 26 ಹುದ್ದೆಗಳು |
| ವಾಯುಪಡೆ ಅಕಾಡೆಮಿ | 32 ಹುದ್ದೆಗಳು |
| ಅಧಿಕಾರಿಗಳ ತರಬೇತಿ ಅಕಾಡೆಮಿ | 275 ಹುದ್ದೆಗಳು |
| ಮಹಿಳಾ ಅಧಿಕಾರಿಗಳ ತರಬೇತಿ ಅಕಾಡೆಮಿ | 18 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ರಾಷ್ಟೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ, ಬಿಇ, ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು.
- ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ, ಹನ್ನೆರಡನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಗಳ ವಯೋಮಿತಿಯನ್ನು 01-08-2025 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನ ನಿಯಮಾನುಸಾರ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ರಾಷ್ಟ್ರಿಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡಮಿ ಪರೀಕ್ಷೆಗೆ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ರೂ. 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.
- ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆಗಳಿಗೆ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನ ವಿವರ ಶ್ರೇಣಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಪ್ರಮುಖ ಶ್ರೇಣಿಗಳು | ವೇತನ ಶ್ರೇಣಿ |
| ಲೆಫ್ಟಿನೆಂಟ್ | ₹56,100 – ₹1,77,500 |
| ಕ್ಯಾಪ್ಟನ್ | ₹61,300 – ₹1,93,900 |
| ಮೇಜರ್ | ₹69,400 – ₹2,07,200 |
| ಲೆಫ್ಟಿನೆಂಟ್ ಕರ್ನಲ್ | ₹1,21,200 – ₹2,12,400 |
| ಕರ್ನಲ್ | ₹1,30,600 – ₹2,15,900 |
| ಬ್ರಿಗೇಡಿಯರ್ | ₹1,39,600 – ₹2,17,600 |
| ಮೇಜರ್ ಜನರಲ್ | ₹1,44,200 – ₹2,18,200 |
| HAG+ ಸ್ಕೇಲ್ | ₹2,05,400 – ₹2,24,400 |
| ಸೇನಾ ಕಮಾಂಡರ್/ ಲೆಫ್ಟಿನೆಂಟ್ ಜನರಲ್ | ₹2,25,000 |
| ಸೇನಾ ಮುಖ್ಯಸ್ಥರು (COAS) | ₹2,25,000 |
ಅಗತ್ಯ ದಾಖಲೆಗಳು:
- ಪದವಿ ಅಂಕಪಟ್ಟಿ
- 10th ಮಾರ್ಕ್ಸ್ ಕಾರ್ಡ್
- 12nd ಮಾರ್ಕ್ಸ್ ಕಾರ್ಡ್
- ಶೈಕ್ಷಣಿಕ ಪ್ರಮಾಣಪತ್ರ
- ನಿವಾಸ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಎಕ್ಸಾಮಿನೇಷನ್ ಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- SSB ಸಂದರ್ಶನ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 20-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09-06-2026 |
| ಪರೀಕ್ಷೆ ನಡೆಯುವ ದಿನಾಂಕ | 13-09-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ಭಾರತ ರಕ್ಷಣಾ ಪಡೆಗಳಾದ ವಾಯುಪಡೆ, ನೌಕಾಸೇನೆ ಹಾಗೂ ನೌಕಾಪಡೆಗಳಲ್ಲಿ ಉತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 09-06-2026 ರಂದು ಅಥವಾ ಮುಂಚಿತವಾಗಿ ಅರ್ಜಿ ಸಲ್ಲಿಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- SBI Application: SBI ನಲ್ಲಿ 7150 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಯಾವುದೇ ಪದವಿದಾರರಿಗೆ ಭರ್ಜರಿ ಅವಕಾಶ
- Air Force Job: ರೂ. 1,77,500/- ವೇತನ! ಭಾರತೀಯ ವಾಯುಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ
- BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್
- NHAI: ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ 2026 | ಕೊನೆಯ ದಿನಾಂಕ ಜೂನ್ 15
- KSP: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ! । ಕೊನೆಯ ದಿನಾಂಕ ಮೇ 24