ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಇಲ್ಲಿ ಒಟ್ಟು 37 ಹುದ್ದೆಗಳು ಖಾಲಿ ಇದ್ದು, ಬಿಇ ಹಾಗೂ ಬಿಟೆಕ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
KEA Recruitment 2026
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ 21-05-2026 ದಿಂದಲೇ ಆರಂಭಗೊಂಡಿದ್ದು, 04-06-2026 ರ ವರೆಗೂ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅರ್ಜಿ ಶುಲ್ಕ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
| ಹುದ್ದೆಗಳ ಹೆಸರು | ಅಸಿಸ್ಟೆಂಟ್ ಇಂಜಿನಿಯರ್ |
| ಹುದ್ದೆಗಳ ಸಂಖ್ಯೆ | ಒಟ್ಟು 37 ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-06-2026 |
ಹುದ್ದೆಗಳ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | 1 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಯಾಂತ್ರಿಕ) (ಗ್ರೇಡ್-B) | 1 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | 1 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್) (ಗ್ರೇಡ್-B) | 1 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಯಾಂತ್ರಿಕ) (ಗ್ರೇಡ್-B) | 2 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | 3 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | 5 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) (ಗುತ್ತಿಗೆ) | 10 ಹುದ್ದೆಗಳು |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) | 13 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್, ತಂತ್ರಜ್ಞಾನ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್, ತಂತ್ರಜ್ಞಾನ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ , ತಂತ್ರಜ್ಞಾನ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ 40 ವರ್ಷದ ವರೆಗೆ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 750/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಅಂಗವಿಕಲ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ ರೂ. 500/-
- ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳಿಗೆ ರೂ. 250/-
ವೇತನ ಶ್ರೇಣಿ:
| ಹುದ್ದೆಗಳ ವಿವರ | ವೇತನ ಶ್ರೇಣಿ |
| ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | ₹83,700 – ₹1,55,200 |
| ಅಸಿಸ್ಟೆಂಟ್ ಇಂಜಿನಿಯರ್ (ಯಾಂತ್ರಿಕ) (ಗ್ರೇಡ್-B) | ₹53,250 – ₹1,15,460 |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | ₹53,250 – ₹1,15,460 |
| ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್) (ಗ್ರೇಡ್-B) | ₹53,250 – ₹1,15,460 |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) | ₹69,250 – ₹1,34,200 |
| ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೇಡ್-B) (ಗುತ್ತಿಗೆ) | ₹69,250 – ₹1,34,200 |
ಅಗತ್ಯ ದಾಖಲೆಗಳು:
- 10th ಮಾರ್ಕ್ಸ್ ಕಾರ್ಡ್
- ಇಂಜಿನಿಯರಿಂಗ್ ಪದವಿ ಪ್ರಮಾಣಪತ್ರ
- ನಿವಾಸ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಪ್ರಮಾಣಪತ್ರ
- ವಿಶೇಷ ಮೀಸಲಾತಿ ದಾಖಲೆಗಳು
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿಕೊಂಡು ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
- ಕನ್ನಡ ಭಾಷಾ ಪರೀಕ್ಷೆ (ಅನ್ವಹಿಸಿದರೆ)
- ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ | 20-05-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 21-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-06-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 05-09-2026 |
| ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ | ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ PDF ಲಿಂಕ್ (KK) | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ PDF ಲಿಂಕ್ (NHK) | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವಿಭಾಗಗಳ ಅಡಿಯಲ್ಲಿ ಒಟ್ಟು 37 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸಿವಿಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 04-06-2026 ರೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- UPSC: ರೂ. 2,25,000/- ವೇತನ! ಭಾರತೀಯ ರಕ್ಷಣಾ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026! ಜೂನ್ 9 ಕೊನೆಯ ದಿನಾಂಕ
- SBI Application: SBI ನಲ್ಲಿ 7150 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಯಾವುದೇ ಪದವಿದಾರರಿಗೆ ಭರ್ಜರಿ ಅವಕಾಶ
- Air Force Job: ರೂ. 1,77,500/- ವೇತನ! ಭಾರತೀಯ ವಾಯುಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ
- BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್
- NHAI: ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ 2026 | ಕೊನೆಯ ದಿನಾಂಕ ಜೂನ್ 15