ನಮಸ್ಕಾರ ಸ್ನೇಹಿತರೆ, ನೀವೇನಾದರೂ ತಾಂತ್ರಿಕ ಪದವಿ ಪೂರ್ಣಗೊಳಿಸಿ, ನೀವು ಹೊಂದಿರುವ ಶೈಕ್ಷಣಿಕ ಅರ್ಹತೆಗೆ ಸೂಕ್ತವಾದ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಭಾರತದ ಪ್ರತಿಷ್ಠಿತ ಹಡಗು ನಿರ್ಮಾಣ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆನ್ನುವ ಕನಸು ನಿಮಗಿದಿಯಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್!
Udupi CSL Recruitment 2026
ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಪ್ರತಿಷ್ಠಿತ ಸಂಸ್ಥೆಯಾಗಿರುವ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಸಂಸ್ಥೆಯು ತನ್ನ ಮಲ್ಪೆ ಘಟಕದಲ್ಲಿ ಖಾಲಿ ಇರುವ 20 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಹಾಗೂ ಐಟಿಐ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 18-05-2026 ರಿಂದ ಆರಂಭಗೊಂಡು 17-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (UCSL) |
| ಹುದ್ದೆಯ ಹೆಸರು | ಅಪ್ರೆಂಟಿಸ್ |
| ಹುದ್ದೆಯ ಸಂಖ್ಯೆ | 20 ಹುದ್ದೆಗಳು |
| ಉದ್ಯೋಗ ಸ್ಥಳ | ಮಲ್ಪೆ – ಉಡುಪಿ |
| ಶೈಕ್ಷಣಿಕ ಅರ್ಹತೆ | ಐಟಿಐ, ಡಿಪ್ಲೊಮಾ ಹಾಗೂ ಬಿಇ/ ಬಿಟೆಕ್ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ವಿವಿಧ ವಿಭಾಗಗಳ ಅಡಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಮೆಕ್ಯಾನಿಕಲ್ ಇಂಜಿನಿಯರಿಂಗ್ (ಡಿಪ್ಲೊಮಾ) | 01 ಹುದ್ದೆ |
| ಎಲೆಕ್ಟ್ರಿಕಲ್ ಇಂಜಿನಿಯರ್ (ಡಿಪ್ಲೊಮಾ) | 02 ಹುದ್ದೆಗಳು |
| ಮೆಕ್ಯಾನಿಕಲ್ ಇಂಜಿನಿಯರಿಂಗ್ (ಪದವಿ) | 02 ಹುದ್ದೆಗಳು |
| ಎಲೆಕ್ಟ್ರಿಕಲ್ ಇಂಜಿನಿಯರ್ (ಪದವಿ) | 02 ಹುದ್ದೆಗಳು |
| ಡಿಸೈಲ್ ಮೆಕ್ಯಾನಿಕ್ಸ್/ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ಸ್/ ಬೆಂಚ್ ಫಿಟ್ಟರ್ | 03 ಹುದ್ದೆಗಳು |
| ಪ್ಲಮ್ಬರ್ | 04 ಹುದ್ದೆಗಳು |
| ಎಲೆಕ್ಟ್ರಿಷಿಯನ್ | 06 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಮೆಕ್ಯಾನಿಕಲ್ ಇಂಜಿನಿಯರಿಂಗ್ (ಡಿಪ್ಲೊಮಾ):
ಮೆಕ್ಯಾನಿಕಲ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (ಡಿಪ್ಲೊಮಾ):
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಮೆಕ್ಯಾನಿಕಲ್ ಇಂಜಿನಿಯರಿಂಗ್ (ಪದವಿ) :
ಮೆಕ್ಯಾನಿಕಲ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (ಪದವಿ):
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನ ಪದವಿ ಪೂರ್ಣಗೊಳಿಸಿರಬೇಕು.
- ಐಟಿಐ ಟ್ರೇಡ್ ಅಪ್ರೆಂಟಿಸ್:
ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ನೇಮಕಾತಿ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಯ ಕುರಿತು ಉಲ್ಲೇಖಿಸಿಲ್ಲ.
ವಯೋಮಿತಿ ಸಡಿಲಿಕೆ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಪ್ರಸ್ತುತ ಸಾಲಿನಲ್ಲಿ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ವಯೋಮಿತಿ ಸಡಿಲಿಕೆಯ ಕುರಿತು ಮಾಹಿತಿಯನ್ನು ನೀಡಿಲ್ಲ.
ಅರ್ಜಿ ಶುಲ್ಕ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ವರ್ಗಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ.
- ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000/- ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.
- ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 13,200/- ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.
- ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,600/- ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು UCSL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ, ಅಲ್ಲಿ ನೀಡಲಾದ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದರೆ, ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುತ್ತದೆ. ಈ ಅಭ್ಯರ್ಥಿಗಳು ತಾವು ಸಹಿ ಮಾಡಿದ ಅಪ್ಲಿಕೇಶನ್ ಫಾರ್ಮ್, ಶೈಕ್ಷಣಿಕ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ವಯಸ್ಸಿನ ಪುರಾವೆಗಳ ಜೆರಾಕ್ಸ್ ಪ್ರತಿಯೊಂದಿಗೆ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
- ಅಂತಿಮ ಆಯ್ಕೆ:
ದಾಖಲಾತಿ ಪರೀಶೀಲನೆಯನ್ನು ಯಶಸ್ವಿಯಾಗಿ ಮುಗಿಸಿದ ನಂತರ, ಮೆರಿಟ್ ಪಟ್ಟಿ ಹಾಗೂ ಮೀಸಲಾತಿ ನಿಯಮಗಳ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-06-2026 |
ಪ್ರಮುಖ ಲಿಂಕುಗಳು:
| ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಐಟಿಐ ಗ್ರ್ಯಾಜುಯೆಟ್ ಅಂಡ್ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ವಿವಿಧ ವಿಭಾಗಗಳ ಅಡಿಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕ 17-06-2026 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು
- SSC CGL: ರೂ. 1,51,100/- ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ 12,256 ಹುದ್ದೆಗಳ ಬೃಹತ್ ನೇಮಕಾತಿ । ಜೂನ್ 22 ಕೊನೆಯ ದಿನಾಂಕ
- KEA: ರೂ. 1,55,200/- ವೇತನ! ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರ್ಜರಿ ನೇಮಕಾತಿ । ಜೂನ್ 04 ಕೊನೆಯ ದಿನಾಂಕ
- UPSC: ರೂ. 2,25,000/- ವೇತನ! ಭಾರತೀಯ ರಕ್ಷಣಾ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026! ಜೂನ್ 9 ಕೊನೆಯ ದಿನಾಂಕ
- SBI Application: SBI ನಲ್ಲಿ 7150 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಯಾವುದೇ ಪದವಿದಾರರಿಗೆ ಭರ್ಜರಿ ಅವಕಾಶ
- Air Force Job: ರೂ. 1,77,500/- ವೇತನ! ಭಾರತೀಯ ವಾಯುಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ