KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸಂಶೋಧನೆ ಅಥವಾ ಬೋಧಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆನ್ನುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಬೀದರ್ ನ ಕರ್ನಾಟಕ ವೆಟರ್ನರಿ, ಅನಿಮಲ್ ಮತ್ತು ಫಿಶರೀಸ್ ಸೈನ್ಸಸ್ ಯೂನಿವರ್ಸಿಟಿಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

KVAFSU Recruitment 2026

ಸಂಬಂಧಪಟ್ಟ ವಿಷಯದಲ್ಲಿ ಬ್ಯಾಚುಲರ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜೊತೆಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷಾ ಜ್ಞಾನವನ್ನು ಕೂಡ ಹೊಂದಿರಬೇಕಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 22-05-2026 ರಿಂದ ಆರಂಭಗೊಂಡಿದ್ದು, 20-06-2026 ಕೊನೆಯ ದಿನಾಂಕವಾಗಿದೆ.

ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನ ಹಾಗೂ ಪ್ರಾಣಿ ವಿಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅವುಗಳ ಕುರಿತು ಸಂಕ್ಷಿಪ್ತ ಮಾಹಿತಿಗಾಗಿ ಪ್ರಸ್ತುತ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಹುದ್ದೆಯ ವಿವರಣಾತ್ಮಕ ನೋಟ:

ಸಂಸ್ಥೆಯ ಹೆಸರು ಕರ್ನಾಟಕ ವೆಟರ್ನರಿ, ಅನಿಮಲ್ ಮತ್ತು ಫಿಶರೀಸ್ ಸೈನ್ಸಸ್ ಯೂನಿವರ್ಸಿಟಿ, ಬೀದರ್
ಹುದ್ದೆಗಳ ಹೆಸರು ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆಗಳು 96 ಹುದ್ದೆಗಳು
ಉದ್ಯೋಗ ಸ್ಥಳ ಬೀದರ್ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-06-2026

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಪ್ರೊಫೆಸರ್ (ಕಲ್ಯಾಣ ಕರ್ನಾಟಕ ವೃಂದ)14 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ಕಲ್ಯಾಣ ಕರ್ನಾಟಕ ವೃಂದ)18 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ (ಕಲ್ಯಾಣ ಕರ್ನಾಟಕ ವೃಂದ)25 ಹುದ್ದೆಗಳು
ಪ್ರೊಫೆಸರ್ (ಉಳಿಕೆ ಮೂಲ ವೃಂದ)6 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ಉಳಿಕೆ ಮೂಲ ವೃಂದ)4 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ (ಉಳಿಕೆ ಮೂಲ ವೃಂದ)29 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪ್ರೊಫೆಸರ್ ಹುದ್ದೆ:
    • ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದಿರಬೇಕು.
    • ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ (SC/ST ಅಭ್ಯರ್ಥಿಗಳಿಗೆ 50%) ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
    • ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ Ph.D ಪದವಿಯನ್ನು ಹೊಂದಿರಬೇಕು.
    • ರಾಷ್ಟೀಯ ಮಟ್ಟದ ಸಂಸ್ಥೆಯಲ್ಲಿ ಕನಿಷ್ಠ 10 ವರ್ಷಗಳ ಭೋದನಾ/ ಸಂಶೋಧನಾ/ ವಿಸ್ತರಣಾ ಅನುಭವವನ್ನು ಹೊಂದಿರಬೇಕು.
  • ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ:
    • ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದಿರಬೇಕು.
    • ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ (SC/ST ಅಭ್ಯರ್ಥಿಗಳಿಗೆ 50%) ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
    • ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ರಾಷ್ಟೀಯ ಅರ್ಹತಾ ಪರೀಕ್ಷೆಯಲ್ಲಿ (NET) ಉತ್ತೀರ್ಣರಾಗಿರಬೇಕು. (ನಿಯಮಾವಳಿ ಪ್ರಕಾರ Ph.D ಪದವಿ ಪಡೆದಿರುವ ಅಭ್ಯರ್ಥಿಗಳಿಗೆ NET ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗುತ್ತದೆ)
  • ಅಸೋಸಿಯೇಟ್ ಪ್ರೊಫೆಸರ್ ಹುದ್ದೆ:
    • ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದಿರಬೇಕು.
    • ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ (SC/ST ಅಭ್ಯರ್ಥಿಗಳಿಗೆ 50%) ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
    • ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ Ph.D ಪದವಿಯನ್ನು ಹೊಂದಿರಬೇಕು.
    • ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಶೋಧನಾ ಸಂಸ್ಥೆಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಸಮಾನವಾದ ಹುದ್ದೆಯಲ್ಲಿ ಕನಿಷ್ಠ 8 ವರ್ಷಗಳ ಭೋದನಾ/ ಸಂಶೋಧನಾ/ ವಿಸ್ತರಣಾ ಅನುಭವವನ್ನು ಹೊಂದಿರಬೇಕು.

ಎಲ್ಲಾ ಹುದ್ದೆಗಳಿಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಅಥವಾ ತೃತೀಯ ಭಾಷೆಗಳಾಗಿ ಓದಿರಬೇಕು. ಇಲ್ಲದಿದ್ದರೆ, ಅಭ್ಯರ್ಥಿಗಳು 150 ಅಂಕಗಳ ಕನ್ನಡ ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ತಿಳಿಸಿರುವ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: 40 ವರ್ಷ
  • ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳಿಗೆ: 43 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ: 45 ವರ್ಷ

ಸರ್ಕಾರದ ನಿಯಮಗಳ ಪ್ರಕಾರ ಸೇನಾ ನಿರತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕಗಳ ವಿವರ:

  • ಸಾಮಾನ್ಯ ಹಾಗೂ ಇತರೆ ಹಿಂದುಳಿದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 1,000
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ: ರೂ. 500

ವೇತನ ಶ್ರೇಣಿ:

  • ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,44,200/- ದಿಂದ ರೂ. 2,18,200/-
  • ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 57,700/- ದಿಂದ ರೂ. 1,82,400/-
  • ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,31,400/- ದಿಂದ ರೂ. 2,17,100/-

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಬಂಧಿಪಟ್ಟ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನೇಮಕಾತಿ ವಿಭಾಗಕ್ಕೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ, ಅಲ್ಲಿ ನೀಡಲಾದ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಮಾಹಿತಿಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.
  • ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ22-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-06-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಸ್ತುತ ಸಾಲಿನಲ್ಲಿ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸಂಶೋಧನಾ ಹಾಗೂ ಭೋದನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಕರ್ನಾಟಕ ವೆಟರ್ನರಿ, ಅನಿಮಲ್ ಮತ್ತು ಫಿಶರೀಸ್ ಸೈನ್ಸಸ್ ಯೂನಿವರ್ಸಿಟಿ, ಬೀದರ್

ಒಟ್ಟು 96 ಹುದ್ದೆಗಳು ಖಾಲಿ ಇದೆ.

ಇಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುತ್ತಿದೆ.

20-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಇತರೆ ಪ್ರಮುಖ ಲಿಂಕುಗಳು

Leave a Comment