Hostel: ರೂ. 23,000/- ಸಹಾಯಧನ! 6th ಯಿಂದ PUC ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!

Hostel: ಹಾಸ್ಟೇಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರವು ಆರನೇ ತರಗತಿಯಿಂದ ದ್ವಿತೀಯ PUC ವರೆಗಿನ ಹಾಸ್ಟೇಲ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಭಾರಿ ಆರ್ಥಿಕ ನೆರವನ್ನು ನೀಡಲು ಮುಂದಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಇದು ದೊಡ್ಡ ಆಸರೆ ಆಗಲಿದೆ.

ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಎಲ್ಲರಂತೆಯೇ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ನಲ್ಲಿ ಉಚಿತವಾಗಿ ಊಟ ಹಾಗೂ ಇತರೆ ವಸತಿ ಸೌಲಭ್ಯಗಳು ಸಿಗುವ ಜೊತೆಗೆ ಸರ್ಕಾರದಿಂದ ರೂ. 23,000/- ವರೆಗೆ ಸಹಾಯಧನವನ್ನು ನೀಡಲಾಗುತ್ತಿದೆ.

ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಗಳ ಹೊರೆಯನ್ನು ಬಹು ಮಟ್ಟಿಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಯಾವುದೇ ಚಿಂತೆಗಳಿಲ್ಲದೆ, ಸಂಪೂರ್ಣ ಗಮನವನ್ನು ವಿದ್ಯಾಭ್ಯಾಸದ ಕಡೆಗೆ ಹರಿಸಲು ಸಾಧ್ಯವಾಗುತ್ತದೆ. ಇದರಿಂದಾಗಿ ಉತ್ತಮ ಸಾಧನೆ ಮಾಡುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಕೊಳ್ಳಬಹುದಾಗಿದೆ.

ಹಾಗಿದ್ದರೆ ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಕೇವಲ ಒಂದು ವರ್ಷಕ್ಕೆ ಮಾತ್ರ ಅನ್ವಹಿಸುತ್ತದೆಯೇ? ಅರ್ಹತಾ ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

Hostel

ಯೋಜನೆಯ ಅವಲೋಕನ:

ಯೋಜನೆಯ ಹೆಸರು ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸಹಾಯಧನ ಯೋಜನೆ
ಅರ್ಹ ವಿದ್ಯಾರ್ಥಿಗಳು ಹಾಸ್ಟೇಲ್ ನಲ್ಲಿರುವ ಆರನೇ ತರಗತಿಯಿಂದ ದ್ವಿತೀಯ PUC ವೆರೆಗಿನ ವಿದ್ಯಾರ್ಥಿಗಳು
ಸಿಗುವ ಸಹಾಯಧನದ ಮೊತ್ತ ಒಟ್ಟು ರೂ. 23,000/-
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಯೋಜನೆಯ ಉದ್ದೇಶ:

  • ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಅಗತ್ಯವಾದ ನೆರವನ್ನು ನೀಡುವುದು.
  • ಸರ್ಕಾರವು ಸಹಾಯಧನವನ್ನು ಒದಗಿಸುವ ಮೂಲಕ ಹಾಸ್ಟೇಲ್ ವಿದ್ಯಾರ್ಥಿಗಳ ದೈನಂದಿನ ಜೀವನದ ಖರ್ಚುಗಳನ್ನು ನಿಭಾಯಿಸಲು ಅನುವು ಮಾಡಿಕೊಡುವುದು.
  • ವಿದ್ಯಾರ್ಥಿಗಳು ಅರ್ಧದಲ್ಲೇ ಶಿಕ್ಷಣವನ್ನು ನಿಲ್ಲಿಸುವುದನ್ನು ತಡೆದು ಶಾಲಾ ಮತ್ತು ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ವಿದ್ಯಾಭ್ಯಾಸ ಮುಂದುವರಿಸುವಂತೆ ಪ್ರೋತ್ಸಾಹಿಸುವುದು
  • ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ಸೃಷ್ಟಿಸುವುದು
  • ವಿದ್ಯಾರ್ಥಿಗಳ ಮನಸ್ಸಿನಲ್ಲಿ ಇರುವ ಹಣಕಾಸಿನ ಒತ್ತಡವನ್ನು ಕಡಿಮೆ ಮಾಡಿ ಅಧ್ಯಯನದ ಮೇಲೆ ಗಮನ ಕೇಂದ್ರೀಕರಿಸಲು ಸಹಾಯ ಮಾಡುವುದು
  • ಬಡ, ಮಧ್ಯಮ ವರ್ಗಗಳ ಹಾಗೂ ಆರ್ಥಿಕವಾಗಿ ದುರ್ಬಲದವಾಗಿರುವ ಪೋಷಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚದ ಹೊರೆಯನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರೆಸಲು ಅನುವು ಮಾಡಿಕೊಡುವುದು.

ಯೋಜನೆಯ ಪ್ರಯೋಜನ:

  • ಶಿಕ್ಷಣ ಮುಂದುವರಿಸಲು ನೆರವಾಗುತ್ತದೆ:

ಬಡ ಮತ್ತು ಮಾಧ್ಯಮ ವರ್ಗಗಳ ಸಾಕಷ್ಟು ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ತಮ್ಮ ಓದನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಈ ಒಂದು ಸಹಾಯಧನವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದು ಕಡಿಮೆ ಆಗುತ್ತದೆ.

  • ಆರ್ಥಿಕ ಭಾರ ಕಡಿಮೆಯಾಗುವುದು:

ಸರ್ಕಾರವೇ ಫ್ರೀ ಆಗಿ ಹಾಸ್ಟೇಲ್ ವ್ಯವಸ್ಥೆಯನ್ನು ಒದಿಗಿಸಿರುವುದರ ಜೊತೆಗೆ ರೂ. 23,000/- ವರೆಗೆ ಸಹಾಯಧವನ್ನು ಒದಗಿಸುವುದರಿಂದ ಪೋಷಕರ ಮೇಲೆ ಇರುವ ಆರ್ಥಿಕ ಒತ್ತಡವನ್ನು ಬಹುಮಟ್ಟಿಗೆ ಕಡಿಮೆ ಮಾಡುತ್ತದೆ.

  • ಉತ್ತಮ ಭವಿಷ್ಯದ ನಿರ್ಮಾಣಕ್ಕೆ ನೆರವು:

ಸರ್ಕಾರ ಸಹಾಯಧನ ಒದಗಿಸುವುದರಿಂದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವೆಚ್ಚವನ್ನು ಭರಿಸಲು ಆಗುವ ಆರ್ಥಿಕ ಒತ್ತಡವು ಕಡಿಮೆಯಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಓದಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ.

  • ಸಮಾನ ಶಿಕ್ಷಣ ಅವಕಾಶ:

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಸರಿಯಾದ ಸಾರಿಗೆ ಸೌಲಭ್ಯಗಳ ಕೊರತೆಯಿಂದ ಹಾಸ್ಟೇಲ್‌ಗಳಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮುಂದುವರಿಸಬೇಕಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರ ಭಾರಿ ಸಹಾಯಧನ ನೀಡುವುದರಿಂದ ಅವರ ಶೈಕ್ಷಣಿಕ ವೆಚ್ಚದ ಭಾರ ಕಡಿಮೆಯಾಗುತ್ತದೆ ಹಾಗೂ ಗ್ರಾಮೀಣ ಮತ್ತು ನಗರ ವಿದ್ಯಾರ್ಥಿಗಳ ನಡುವಿನ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಯೋಜನೆಯಡಿಯಲ್ಲಿ ಸಿಗುವ ಸಹಾಯಧನದ ವಿವರ:

  • ಆರನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 12,000/- ವರೆಗೆ ಸಹಾಯಧನವನ್ನು ನೀಡಲಾಗುತ್ತದೆ
  • ಹಾಗೂ 1st ಹಾಗೂ 2nd PUC ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 23,000/- ದ ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.

ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಯಾರು ಅರ್ಹರು?

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಸರ್ಕಾರದ ಅನುಮೋದಿತ ಅಥವಾ ಮಾನ್ಯತೆ ಪಡೆದ ಹಾಸ್ಟೇಲ್‌ನಲ್ಲಿ ವಾಸವಾಗಿರಬೇಕು.
  • ವಿದ್ಯಾರ್ಥಿಗಳು ಆರನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಓದುತ್ತಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು
  • ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಹಾಸ್ಟೇಲ್ ಪ್ರವೇಶ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಶೈಕ್ಷಣಿಕ ಪ್ರಮಾಣ ಪತ್ರ
  • ಪಾಸ್‌ಪೋರ್ಟ್ ಅಳತೆಯ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ಸಂಖ್ಯೆ
  • ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಹಾಸ್ಟೇಲ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಿಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಮುಖಪುಟದಲ್ಲಿ ಕಾಣುವ ಹಾಸ್ಟೇಲ್ ಸ್ಟೂಡೆಂಟ್ ಪ್ರೈಜ್ ಮನಿ ಫಾರ್ ಸ್ಟೂಡೆಂಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ ಹಾಗೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ವಿವರಗಳು ಹಾಗೂ ಅಪ್ಲೋಡ್ ಮಾಡಿರುವ ಎಲ್ಲಾ ಅಗತ್ಯ ದಾಖಲೆಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಸ್ವೀಕೃತಿ ಪತ್ರವನ್ನು ಪ್ರಿಂಟ್ ತೆಗೆದುಕೊಳ್ಳಿ.

ಅಂತಿಮ ತೀರ್ಮಾನ:


ಸರ್ಕಾರ ಜಾರಿಗೊಳಿಸಿರುವ ಈ ವಿಶೇಷ ಯೋಜನೆ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮಹತ್ವದ ನೆರವಾಗಲಿದೆ. ಹಾಸ್ಟೇಲ್‌ನಲ್ಲಿ ಉಚಿತ ವಸತಿ ಮತ್ತು ಊಟದ ಸೌಲಭ್ಯಗಳೊಂದಿಗೆ ರೂ. 23,000/- ವರೆಗೆ ಸಹಾಯಧನ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚದ ಒತ್ತಡ ಬಹಳಷ್ಟು ಕಡಿಮೆಯಾಗುತ್ತದೆ. ಇದರ ಫಲವಾಗಿ ವಿದ್ಯಾರ್ಥಿಗಳು ಹಣಕಾಸಿನ ಚಿಂತೆಯನ್ನು ಬದಿಗಿಟ್ಟು ತಮ್ಮ ಓದಿನತ್ತ ಹೆಚ್ಚಿನ ಗಮನ ಹರಿಸಿ, ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಕನಸಿನ ಭವಿಷ್ಯವನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತದೆ.


ಇತರೆ ಪ್ರಮುಖ ಲಿಂಕುಗಳು:

Leave a Comment