ಸಾವಿರಾರು ನಿರುದ್ಯೋಗಿ ಯುವಕರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಡೇಟಾ ಎಂಟ್ರಿ ಆಪರೇಟರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
KSRLPS Recruitment 2026
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಭ್ಯರ್ಥಿಗಳಿಗೆ 11-05-2026 ರಿಂದ 31-05-2026 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಒಂದು ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆ |
| ಹುದ್ದೆಗಳ ಹೆಸರು | ಡೇಟಾ ಎಂಟ್ರಿ ಆಪರೇಟರ್, ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ ಹಾಗೂ ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 5 ಹುದ್ದೆಗಳು |
| ಉದ್ಯೋಗ ಸ್ಥಳ | ವಿಜಯನಗರ – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-05-2026 |
ಹುದ್ದೆಯ ವಿವರ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಒಟ್ಟು 5 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಡೇಟಾ ಎಂಟ್ರಿ ಆಪರೇಟರ್ | 1 ಹುದ್ದೆ |
| ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ | 1 ಹುದ್ದೆ |
| ಸ್ಟರ್ ಸೂಪರ್ವೈಸರ್ | 3 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಡೇಟಾ ಎಂಟ್ರಿ ಆಪರೇಟರ್:
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್:
ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಕ್ಲಸ್ಟರ್ ಸೂಪರ್ವೈಸರ್:
ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 01-06-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಿರಬಾರದು. ಕನಿಷ್ಠ ವಯೋಮಿತಿಯನ್ನು ನೇಮಕಾತಿ ನಿಯಮಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆಯ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
- ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,500/- ವೇತನವನ್ನು ನೀಡಲಾಗುತ್ತದೆ.
- ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000/- ವೇತನವನ್ನು ನೀಡಲಾಗುತ್ತದೆ.
- ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KSRLPS ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಿಮ್ಮ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಮುಖಪುಟದಲ್ಲಿರುವ 2026 ರ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ವೈಯಕ್ತಿಕ ವಿವರ ಹಾಗೂ ಶೈಕ್ಷಣಿಕ ವಿವರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಡೇಟಾ ಎಂಟ್ರಿ ಆಪರೇಟರ್, ಕ್ಲಸ್ಟರ್ ಸೂಪರ್ವೈಸರ್ ಹಾಗೂ ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜ್ಮೆಂಟ್ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಾಗುತ್ತದೆ.
ಅಂತಿಮವಾಗಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 11-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆ 2026 ನೇ ಸಾಲಿನಲ್ಲಿ ಡೇಟಾ ಎಂಟ್ರಿ ಆಪರೇಟರ್, ಕ್ಲಸ್ಟರ್ ಸೂಪರ್ವೈಸರ್ ಹಾಗೂ ಇನ್ನಿತರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಗ್ರಾಮೀಣ ಅಭುವೃದ್ದಿ ಇಲಾಖೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹತೆಗಳನ್ನು ಖಚಿತಪಡಿಸಿಕೊಂಡು ದಿನಾಂಕ 31-05-2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
KSRLPS ಡೇಟಾ ಎಂಟ್ರಿ ಆಪರೇಟರ್, ಕ್ಲಸ್ಟರ್ ಸೂಪರ್ವೈಸರ್ ಹಾಗೂ ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ
KSRLPS ನಲ್ಲಿ ಒಟ್ಟು 05 ಹುದ್ದೆಗಳು ಖಾಲಿ ಇದೆ.
ಇಲ್ಲ, ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
31-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- KEA Application: ರೂ. 1,55,200/- ವೇತನ ವಿವಿಧ ಇಲಾಖೆಗಳ ಅಡಿಯಲ್ಲಿ ಇಂಜಿನಿಯರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 04 ಕೊನೆಯ ದಿನಾಂಕ
- KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ
- Udupi CSL: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026! ITI, Diploma ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- SSC CGL: ರೂ. 1,51,100/- ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ 12,256 ಹುದ್ದೆಗಳ ಬೃಹತ್ ನೇಮಕಾತಿ । ಜೂನ್ 22 ಕೊನೆಯ ದಿನಾಂಕ
- KEA: ರೂ. 1,55,200/- ವೇತನ! ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರ್ಜರಿ ನೇಮಕಾತಿ । ಜೂನ್ 04 ಕೊನೆಯ ದಿನಾಂಕ