ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗದ ಕನಸು ಕಾಣುತ್ತಿರುವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯವು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
DC Office Job Recruitment 2026
ಇಲ್ಲಿ ಒಟ್ಟು 169 ಹುದ್ದೆಗಳು ಖಾಲಿ ಇದ್ದು, ಇಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 30-05-2026 ರ ವೆರೆಗೂ ಅವಕಾಶವನ್ನು ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತೆ.
ಪ್ರಸ್ತುತ ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿಕ್ಕಬಳ್ಳಾಪುರ ಜಿಲ್ಲೆ |
| ಹುದ್ದೆಯ ಹೆಸರು | ಪೌರಕಾರ್ಮಿಕ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 169 ಹುದ್ದೆಗಳು |
| ಉದ್ಯೋಗ ಸ್ಥಳ | ಚಿಕ್ಕಬಳ್ಳಾಪುರ ಜಿಲ್ಲೆ- ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-05-2026 |
ಹುದ್ದೆಯ ವಿವರ:
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಜಿಲ್ಲೆಯ ಒಟ್ಟು 4 ನಗರ ಸ್ಥಳೀಯ ಸಂಸ್ಥೆಯಲ್ಲಿ ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ನಗರಸಭೆ, ಚಿಕ್ಕಬಳ್ಳಾಪುರ | 28 ಹುದ್ದೆಗಳು |
| ನಗರಸಭೆ ಶಿಡ್ಲುಘಟ್ಟ | 36 ಹುದ್ದೆಗಳು |
| ನಗರಸಭೆ, ಗೌರಿಬಿದನೂರು | 46 ಹುದ್ದೆಗಳು |
| ನಗರಸಭೆ, ಚಿಂತಾಮಣಿ | 59 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯವಿಲ್ಲ.
- ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡವನ್ನು ಮಾತನಾಡಲು ಬರಬೇಕು.
- ಅಭ್ಯರ್ಥಿಗಳು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ದಿನಗೂಲಿ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷಗಳ ಕಾಲ ಲೋಡರ್ಸ್ ಆಗಿ, ಪೌರಕಾರ್ಮಿಕರಾಗಿ, ಯುಜಿಡಿ ಹೆಲ್ಪರ್ ಆಗಿ, ಕ್ಲೀನರ್ ಆಗಿ ಅಥವಾ ಹೆಲ್ಪರ್ ಆಗಿ ಕೆಲಸಮಾಡಿದ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಹಾಗೂ ನೇಮಕಾತಿ ಸಂಸ್ಥೆಯ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಜಿ ಶುಲ್ಕ:
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಪಟ್ಟ ಇಲಾಖೆಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ ವೇತನ ಕಾಯ್ದೆಯನ್ವಯ ಮಾಸಿಕ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ PF ಹಾಗೂ ಇ.ಎಸ್.ಐ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಚಿಕ್ಕಬಳ್ಳಾಪುರ, ಗೌರಿಬಿದನೂರು, ಚಿಂತಾಮಣಿ ಅಥವಾ ಶಿಡ್ಲಘಟ್ಟ ನಗರಸಭೆ ಕಚೇರಿಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆಯಿರಿ.
- ನಂತರ ಅಪ್ಲಿಕೇಶನ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರವನ್ನು ಸರಿಯಾಗಿ ಭರ್ತಿ ಮಾಡಿ.
- ನಂತರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಕನ್ನಡ ಭಾಷಾ ಜ್ಞಾನ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಸಂಬಂಧಿತ ಕಚೇರಿಗೆ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಜಿಲ್ಲೆಯ ನಗರ ಸಭೆ, ಪುರ ಸಭೆಗಳಲ್ಲಿ ದಿನಗೂಲಿ, ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಹೆಚ್ಚು ವರ್ಷಗಳ ಸೇವಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಸೇವೆಯಲ್ಲಿರುವಾಗ ಮರಣ ಹೊಂದಿದ ಕಾರ್ಮಿಕರ ಕುಟುಂಬದವರಿಗೂ ಕೂಡ ಆದ್ಯತೆ ನೀಡಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ವೈದ್ಯಾಧಿಕಾರಿಗಳಿಂದ ಪಡೆದ ಆರೋಗ್ಯ ದೃಢೀಕರಣ ಪತ್ರ ಹಾಗೂ ನೋಟರಿ ಅಫಿಡವಿಟ್ ಅನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 28-04-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಸ್ತುತ ಸಾಲಿನಲ್ಲಿ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಿರುದ್ಯೋಗಿ ಯುವಕರಿಗೆ ಉತ್ತಮ ಅವಕಾಶವಾಗಿದೆ. ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕೂಡ ಸರ್ಕಾರಿ ವಲಯದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 30-05-2026 ರೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಒಟ್ಟು 169 ಹುದ್ದೆಗಳು ಖಾಲಿ ಇದೆ.
ಇಲ್ಲ, ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
30-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- KSRLPS: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
- KEA Application: ರೂ. 1,55,200/- ವೇತನ ವಿವಿಧ ಇಲಾಖೆಗಳ ಅಡಿಯಲ್ಲಿ ಇಂಜಿನಿಯರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 04 ಕೊನೆಯ ದಿನಾಂಕ
- KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ
- Udupi CSL: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026! ITI, Diploma ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- SSC CGL: ರೂ. 1,51,100/- ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ 12,256 ಹುದ್ದೆಗಳ ಬೃಹತ್ ನೇಮಕಾತಿ । ಜೂನ್ 22 ಕೊನೆಯ ದಿನಾಂಕ