ನಮಸ್ಕಾರ ಸ್ನೇಹಿತರೆ, ನೀವೇನಾದರೂ ಜಸ್ಟ್ SSLC ಅಲ್ಲಿ ಪಾಸ್ ಆಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ?ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಪ್ರತಿಷ್ಠತ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Driver Recruitment 2026
SSLC ಅಲ್ಲಿ ಪಾಸ್ ಆಗಿ ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ ಮೇ 25 ರಿಂದ ಆರಂಭಗೊಂಡಿದ್ದು, ಜೂನ್ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ |
| ಹುದ್ದೆಗಳ ಹೆಸರು | ಡ್ರೈವರ್ (ಸ್ಟಾಫ್ ಕಾರ್) |
| ಹುದ್ದೆಗಳ ಸಂಖ್ಯೆ | 2 ಹುದ್ದೆಗಳು |
| ಉದ್ಯೋಗ ಸ್ಥಳ | ಕೊಚ್ಚಿ ಅಥವಾ ಸಿಎಸ್ಎಲ್ ಪ್ರಾಜೆಕ್ಟ್ ಸೈಟ್ ಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಬಗ್ಗೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 2 ಡ್ರೈವರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ SSLC ಪೂರ್ಣಗೊಳಿಸಿದ ಹಾಗೂ ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಾಗೆಯೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಯ ಸಂಕ್ಷಿಪ್ತ ವಿವರ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಒಟ್ಟು ಎರಡು ಡ್ರೈವರ್ (ಸ್ಟಾಫ್ ಕಾರ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಎರಡು ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ ಅವುಗಳ ವಿವರ ಈ ಕೆಳಕಂಡಂತಿದೆ.
| ವಿವಿಧ ವರ್ಗಗಳು | ಹುದ್ದೆಗಳ ಸಂಖ್ಯೆ |
| ಸಾಮಾನ್ಯ ವರ್ಗ | 1 ಹುದ್ದೆ |
| ಇತರೆ ಹಿಂದುಳಿದ ವರ್ಗ | 1 ಹುದ್ದೆ |
ಶೈಕ್ಷಣಿಕ ಅರ್ಹತೆ:
- ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಕಡ್ಡಾಯವಾಗಿ ಲಘು ವಾಹನ ಚಾಲನಾ ಪರವಾನಾಗಿ ಹೊಂದಿರಬೇಕು.
- ಜೊತೆಗೆ ಕಡ್ಡಾಯವಾಗಿ 10 ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು. ಇವುಗಳಲ್ಲಿ, ಕನಿಷ್ಠ ಒಂದು ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳ ಕಾರು ಚಾಲಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 9-06-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 55 ವರ್ಷ ಮೀರಿರಬಾರದು (ಅಭ್ಯರ್ಥಿಗಳು 10-06-1971 ರಂದು ಅಥವಾ ನಂತರ ಜನಿಸಿರಬೇಕು).
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಜಿ ಶುಲ್ಕ:
ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕ್ ಬಳಸಿ ಪಾವತಿಸಬೇಕಾಗುತ್ತದೆ.
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ. 200/-
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷ ಮಾಸಿಕ ರೂ. 27,000/- ವೇತನವನ್ನು ನೀಡಲಾಗುತ್ತದೆ. ನಂತರದ ವರ್ಷದಲ್ಲಿ ವೇತನವನ್ನು ಹೆಚ್ಚಳ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಕೆರಿಯರ್ ವಿಭಾಗದಲ್ಲಿ CSL A ಅಥವಾ ಕೊಚ್ಚಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಮೂಲ ದಾಖಲೆಗಳನ್ನು ಹಾಕಿ ಒನ್ ಟೈಮ್ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
- ಮುಖಪುಟದಲ್ಲಿರುವ 2026 ರ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಡ್ರೈವರ್ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ಓಪನ್ ಮಾಡಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಈ ಒಂದು ಪರೀಕ್ಷೆಗೆ ಒಟ್ಟು 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಒಂದು ಪರೀಕ್ಷೆಯಲ್ಲಿ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 50% ಹಾಗೂ ಒಬಿಸಿ ಅಭ್ಯರ್ಥಿಗಳು ಕನಿಷ್ಠ 45% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳಿಗೆ ಅನುಗುಣವಾಗಿ ರಾಂಕ್ ಲಿಸ್ಟ್ ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 25-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09-06-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 09-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕೊಚ್ಚಿನ್ ಶಿಪ್ಯಾರ್ಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಡ್ರೈವರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC ಪೂರ್ಣಗೊಳಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ ಎಂದು ಖಚಿತಪಡಿಸಿಕೊಂಡು ನಂತರ ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಕೊಚ್ಚಿನ್ ಶಿಪ್ಯಾರ್ಡ್ ಡ್ರೈವರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇದೆ.
09-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- GramPanchayat: ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2026! ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು
- DC Office: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಭರ್ಜರಿ ನೇಮಕಾತಿ! ಯಾವುದೇ ಅರ್ಜಿ ಶುಲ್ಕವಿಲ್ಲ + ಲಿಖಿತ ಪರೀಕ್ಷೆ ಇಲ್ಲ
- KSRLPS: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
- KEA Application: ರೂ. 1,55,200/- ವೇತನ ವಿವಿಧ ಇಲಾಖೆಗಳ ಅಡಿಯಲ್ಲಿ ಇಂಜಿನಿಯರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 04 ಕೊನೆಯ ದಿನಾಂಕ
- KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ