ನಮಸ್ಕಾರ ಸ್ನೇಹಿತರೆ, ನೀವೇನಾದರೂ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ ಮೂಲಕ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುವ ಪಂಚಾಯತ್ ರಾಜ್ ಆಯುಕ್ತಾಲಯವು ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
RDPR Recruitment 2026
ಯುವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ಕನ್ನಡ ಭಾಷೆಯನ್ನು ಓದಲು ಹಾಗೂ ಮಾತನಾಡಲು ಮತ್ತು ಇಂಗ್ಲೀಷ್ ಭಾಷಾ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅಥವಾ ಖುದ್ದಾಗಿ ಸಂಬಂಧಿತ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇಲ್ಲಿ ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹಾಗೂ ಯಂಗ್ ಪ್ರೊಫೆಶನಲ್ಸ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಜೂನ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ |
| ಹುದ್ದೆಗಳ ಹೆಸರು | ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹಾಗೂ ಯಂಗ್ ಪ್ರೊಫೆಶನಲ್ಸ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | 3 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಉದ್ಯೋಗ ಸ್ಥಳ | ಬೆಂಗಳೂರು |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-06-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಪ್ರಸ್ತುತ ಸಾಲಿನಲ್ಲಿ ಒಟ್ಟು 3 ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹಾಗೂ ಯಂಗ್ ಪ್ರೊಫೆಶನಲ್ಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಗ್ರಾಮೀಣಾಭಿವೃದ್ಧಿ, ಸಮಾಜ ಕಾರ್ಯ, ಸಮಾಜ ಶಾಸ್ತ್ರ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿದ ಕನಿಷ್ಠ 30 – 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಯ ಸಂಖ್ಯೆ |
| ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ | 1 ಹುದ್ದೆ |
| ಯಂಗ್ ಪ್ರೊಫೆಶನಲ್ಸ್ | 2 ಹುದ್ದೆ |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
ಪಂಚಾಯತ್ ರಾಜ್ ಆಯುಕ್ತಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವವನ್ನು ಹೊಂದಿರಬೇಕು.
- ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್:
- ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸಮಾಜ ಕಾರ್ಯ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ಧಿ ಅಥವಾ ಇತರೆ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
- ಇದರೊಂದಿಗೆ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷದಿಂದ 8 ವರ್ಷಗಳ ಕಾಲ ಕ್ಷೇತ್ರ ಮಟ್ಟದಲ್ಲಿ ಅನುಭವವನ್ನು ಹೊಂದಿರಬೇಕು.
- ಯಂಗ್ ಪ್ರೊಫೆಶನಲ್ಸ್:
- ಯಂಗ್ ಪ್ರೊಫೆಶನಲ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸಮಾಜ ಕಾರ್ಯ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ಧಿ ಅಥವಾ ಇತರೆ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
- ಆರೋಗ್ಯ ಶಿಕ್ಷಣ, ಮಕ್ಕಳು ಮತ್ತು ಮಹಿಳೆಯರು, ವಿಶೇಷ ಚೇತನ, ಹಿರಿಯ ನಾಗರಿಕರಿಗೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕಾರ್ಯ ನಿರ್ವಹಿಸುವ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವಂತೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು
- ಯಂಗ್ ಪ್ರೊಫೆಶನಲ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಯಂಗ್ ಪ್ರೊಫೆಶನಲ್ಸ್ ಹಾಗೂ ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಇಮೇಲ್ ಮೂಲಕ ಅಥವಾ ಖುದ್ದಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,000/- ವೇತನವನ್ನು ನೀಡಲಾಗುತ್ತದೆ.
- ಯಂಗ್ ಪ್ರೊಫೆಷನಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 75,000/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲು ತಮ್ಮ ಸ್ವವಿವರಗಳನ್ನು ಒಳಗೊಂಡ ರೆಸೂಮ್ ಅನ್ನು ಸಿದ್ಧಪಡಿಸಿಕೊಳ್ಳಬೇಕು.
- ನಂತರ ರೆಸೂಮ್ ಜೊತೆಗೆ ಶೈಕ್ಷಣಿಕ ಅಂಕಪಟ್ಟಿ, ಅನುಭವ ಪ್ರಮಾಣಪತ್ರ, ವಯಸ್ಸಿನ ದೃಢೀಕರಣ ಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.
- ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು ಸ್ಕ್ಯಾನ್ ಮಾಡಿ [email protected] ಇಮೇಲ್ ವಿಳಾಸಕ್ಕೆ ಕಳುಹಿಸಿ.
- ಖುದ್ದಾಗಿ ಅರ್ಜಿ ಸಲ್ಲಿಸುವವರು ಅಗತ್ಯ ದಾಖಲೆಗಳನ್ನು ಲಗತ್ತಿಸಿದ ಅರ್ಜಿ ಪ್ರತಿಯನ್ನು ಒಂದು ಲಕೋಟೆಗೆ ಹಾಕಿ, ತಮ್ಮ ಆಯ್ಕೆಯ ಹುದ್ದೆಯ ಹೆಸರನ್ನು ಬರೆದು ಈ ಕೆಳಗೆ ತಿಳಿಸಿದ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ: “ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು – 560 009″
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ. ನಂತರ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಹಾಗೂ ಮೌಖಿತ ಸಂದರ್ಶನವನ್ನು ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಪ್ರಕಟಿಸಿದ ದಿನಾಂಕ | 27-05-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 30-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಸಮಯ | 06-06-2026 (ಸಂಜೆ 5:30 ರ ವರೆಗೆ ) |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಪಂಚಾಯತ್ ರಾಜ್ ಕಾರ್ಯಾಲಯವು ಪ್ರಸ್ತುತ ಸಾಲಿನಲ್ಲಿ ಸಬ್ಜೆಕ್ಟ್ ಮ್ಯಾಟರ್ ಎಕ್ಸ್ಪರ್ಟ್ ಹಾಗೂ ಯಂಗ್ ಪ್ರೊಫೆಶನಲ್ಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಪೂರೈಸುತ್ತೇವೆಯೋ? ಇಲ್ಲವೋ ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Driver Application: ರೂ. 67,600 ವೇತನ! KSLSA ಡ್ರೈವರ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ 2026! ಜೂನ್ 25 ಕೊನೆಯ ದಿನಾಂಕ
- GramPanchayat: ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2026! ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು
- NIMHANS: ರೂ. 80,000/- ವೇತನ! ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಟೆಕ್ನಿಕಲ್ ಸಪೋರ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
- ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026: ಈಗಲೇ ಅರ್ಜಿ ಸಲ್ಲಿಸಿ । Agriculture Department Recruitment 2026
- KMF GUMUL ನೇಮಕಾತಿ : ಕಲಬುರಗಿ ಹಾಲು ಒಕ್ಕೂಟದಲ್ಲಿ 50 ಹುದ್ದೆಗಳಿಗೆ ಅರ್ಜಿಸಲ್ಲಿಕೆ ಪ್ರಾರಂಭ! KMF GUMUL Recruitment 2026