Metro: ರೂ. 2,06,250 ವೇತನ! ಬೆಂಗಳೂರು ಮೆಟ್ರೋದಲ್ಲಿ ಭರ್ಜರಿ ಉದ್ಯೋಗಾವಕಾಶ 2026 । ಜೂನ್ 30 ಕೊನೆಯ ದಿನಾಂಕ

Metro: ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಉದ್ಯೋಗ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮ್ಮ ಈ ಒಂದು ಕನಸನ್ನು ನನಸು ಮಾಡಿಕೊಳ್ಳಲು ಇದೊಂದು ಸುವರ್ಣಾವಕಾಶ! ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನಲ್ಲಿ ಕಂಪನಿ ಸೆಕ್ರೆಟರಿ, ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BMRCL Recruitment 2026


ಕಂಪನಿ ಸೆಕ್ರೆಟರಿ ಹುದ್ದೆಗೆ ಕಾನೂನು ಪದವಿಯನ್ನು ಪೂರ್ಣಗೊಳಿಸುವ ಅಭ್ಯರ್ಥಿಗಳು ಅರ್ಹರಾಗಿದ್ದು, ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗೆ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ವಯೋಮಿತಿ ವಿವರ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

Metro

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್
ಹುದ್ದೆಯ ಹೆಸರು ಕಂಪನಿ ಸೆಕ್ರೆಟರಿ, ಡೆಪ್ಯೂಟಿ ಚೀಫ್ ಇಂಜಿನಿಯರ್
ಹುದ್ದೆಯ ಸಂಖ್ಯೆ 2 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026

ಹುದ್ದೆಯ ವಿವರ:

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಕಂಪನಿ ಸೆಕ್ರೆಟರಿ 1 ಹುದ್ದೆ
ಡೆಪ್ಯೂಟಿ ಚೀಫ್ ಇಂಜಿನಿಯರ್ 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಕಂಪನಿ ಸೆಕ್ರೆಟರಿ:

ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯತ್ವವವನ್ನು ಹೊಂದಿರಬೇಕು. ಜೊತೆಗೆ ಇದರೊಂದಿಗೆ ಕಾನೂನು ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗೆ ಸಂಬಂಧಿಸಿದಂತೆ ಕನಿಷ್ಠ 15 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು. ಈ ಅನುಭವದಲ್ಲಿ ಕನಿಷ್ಠ 7 ವರ್ಷಗಳ ಕಾಲ ಕಂಪನಿ ಸೆಕ್ರೆಟರಿ ಆಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

  • ಡೆಪ್ಯೂಟಿ ಚೀಫ್ ಇಂಜಿನಿಯರ್:

ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ ಅಥವಾ ಬಿಟೆಕ್ ಪದವಿ ಪಡೆದಿರಬೇಕು.

ಸಾರ್ವಜನಿಕ ವಲಯದ ಉದ್ಯಮಗಳು, ಮೆಟ್ರೋ ರೈಲು ಸಂಸ್ಥೆಗಳು, ಬೃಹತ್ ಮೂಲ ಸೌಕರ್ಯ ಕಂಪನಿಗಳಲ್ಲಿ 14 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಇದರಲ್ಲಿ ಲಿಫ್ಟ್ ಮತ್ತು ಎಸ್ಕಲೇಟರ್ ಗಳ ವಿನ್ಯಾಸ, ಸ್ಥಾಪನೆ ಹಾಗೂ ನಿರ್ವಹಣೆ ವಿಭಾಗದಲ್ಲಿ ಸೂಕ್ತ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

  • ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ವಯೋಮಿತಿಯನ್ನು ಹೊಂದಿರಬೇಕು.
    • ಗುತ್ತಿಗೆ ಆಧಾರದ ಅಭ್ಯರ್ಥಿಗಳಿಗೆ: ಗರಿಷ್ಟ 45 ವರ್ಷ
    • ನಿಯೋಜನೆ ಆಧಾರದ ಅಭ್ಯರ್ಥಿಗಳಿಗೆ: ಗರಿಷ್ಟ 56 ವರ್ಷ

ವಯೋಮಿತಿ ಸಡಿಲಿಕೆ:

  • ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ, ಸಕ್ಷಮ ಪ್ರಾಧಿಕಾರದ ಅನುಮೋದನೆಯಂತೆ ಅರ್ಹ ಅಭ್ಯರ್ಥಿಗಳಿಗೆ ಗರಿಷ್ಟ 62 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಿ. ನಂತರ ಅರ್ಜಿ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಸಂಬಂದಿತ ಇಲಾಖೆಗೆ ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

  • ಕಂಪನಿ ಸೆಕ್ರೆಟರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 2,06,250 ವೇತನವನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ವಾಹನ ಭತ್ಯೆ, ಜಿಪಿಎಸ್, ಜಿಪಿಎ ಸೇರಿದಂತೆ ಇನ್ನಿತರ ಸೌಲಭ್ಯಗಳು ಲಭ್ಯವಾಗುತ್ತದೆ.
    • ನಿಯೋಜನೆ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಪೋಷಕ ಸಂಸ್ಥೆಯ ವೇತನ ಮತ್ತು ಭತ್ಯೆ ಅನ್ವಹಿಸುತ್ತದೆ.
  • ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 1,64,000 ವೇತನವನ್ನು ನೀಡಲಾಗುತ್ತದೆ. ರೊಂದಿಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ವಾಹನ ಭತ್ಯೆ, ಜಿಪಿಎಸ್, ಜಿಪಿಎ ಸೇರಿದಂತೆ ಇನ್ನಿತರ ಸೌಲಭ್ಯಗಳು ಲಭ್ಯವಾಗುತ್ತದೆ.
    • ನಿಯೋಜನೆ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಪೋಷಕ ಸಂಸ್ಥೆಯ ವೇತನ ಮತ್ತು ಭತ್ಯೆ ಅನ್ವಹಿಸುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ.
  • ನಂತರ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಂತರ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಆನ್ಲೈನ್ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು, ಅಪ್ಲಿಕೇಶನ್ ಫಾರ್ಮ್ ಮೇಲೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಅಭ್ಯರ್ಥಿಗಳ ಸಹಿ ಹಾಕಬೇಕು
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರವನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಇವುಗಳನ್ನು ಒಂದು ಲಕೋಟೆಗೆ ಹಾಕಿ ಈ ಕೆಳಗೆ ನೀಡಲಾದ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:

“ಜನರಲ್ ಮ್ಯಾನೇಜರ್,

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್,

3 ನೇ ಮಹಡಿ,

ಬಿಎಂಟಿಸಿ ಕಾಪ್ಲೆಕ್ಸ್, ಕೆ.ಹೆಚ್ ರಸ್ತೆ

ಶಾಂತಿ ನಗರ, ಬೆಂಗಳೂರು – 560027

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಚೇರಿಗೆ ಪೋಸ್ಟ್ ಮೂಲಕ ಸಲ್ಲಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪರಿಶೀಲಿಸಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

ನಂತರ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು, ಸ್ಥಳ ಮತ್ತು ಸಮಯವನ್ನು SMS ಮೂಲಕ ಅಥವಾ ಇಮೇಲ್ ಮೂಲಕ ತಿಳಿಸಲಾಗುತ್ತದೆ.

  • ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಕ್ಷಮ ಪ್ರಾಧಿಕಾರವು ರಚಿಸಿರುವ ವಿಶೇಷ ಸಮೀತಿಯು ಸಂದರ್ಶನವನ್ನು ನಡೆಸುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಹಾಗೂ ಅರ್ಹತೆಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026
ಸಹಿ ಮಾಡಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ 04-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಕಂಪನಿ ಸೆಕ್ರೆಟರಿ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಡೆಪ್ಯೂಟಿ ಚೀಫ್ ಇಂಜಿನಿಯರ್ ಹಾಗೂ ಕಂಪನಿ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ಲೇಖನವನ್ನು ನೀಡಲಾಗುತ್ತದೆ. ಇಲ್ಲಿ ಕೇವಲ ಎರಡು ಹುದ್ದೆಗಳು ಖಾಲಿ ಇರುವುದರಿಂದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment