Panchayat Raj: ಪಂಚಾಯತ್ ರಾಜ್ ಇಲಾಖೆಯಲ್ಲಿ FDA, ಮ್ಯಾನೇಜರ್ ಹುದ್ದೆಗಳ ನೇಮಕಾತಿ! ಯಾವುದೇ ಅರ್ಜಿ ಶುಲ್ಕ + ಪರೀಕ್ಷೆ ಇಲ್ಲ

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! ಸಾಮಾನ್ಯವಾಗಿ ಸರ್ಕಾರಿ ಉದ್ಯೋಗ ಪಡೆಯುವ ಅಭ್ಯರ್ಥಿಗಳು ಸ್ವರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದೀಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

Panchayat Raj Recruitment 2026


ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ಮ್ಯಾನೇಜರ್, ಫಸ್ಟ್ ಡಿವಿಷನ್ ಅಸಿಸ್ಟೆಂಟ್, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ತಾತ್ಕಾಲಿಕ ಹಾಗೂ ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಹಾಗಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳೇನು? ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

Panchayat Raj

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಯ ಹೆಸರು ಮ್ಯಾನೇಜರ್, ಫಸ್ಟ್ ಡಿವಿಷನ್ ಅಸಿಸ್ಟೆಂಟ್, ಅಕೌಂಟ್ಸ್ ಅಸಿಸ್ಟೆಂಟ್
ಹುದ್ದೆಯ ಸಂಖ್ಯೆ ಒಟ್ಟು 4 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯವು ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮ್ಯಾನೇಜರ್, ಫಸ್ಟ್ ಡಿವಿಷನ್ ಅಸಿಸ್ಟೆಂಟ್, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯನ್ನು ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಮ್ಯಾನೇಜರ್ 1 ಹುದ್ದೆ
ಫಸ್ಟ್ ಡಿವಿಷನ್ ಅಸಿಸ್ಟೆಂಟ್ 1 ಹುದ್ದೆ
ಅಕೌಂಟ್ಸ್ ಅಸಿಸ್ಟೆಂಟ್ 2 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಮ್ಯಾನೇಜರ್:

ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.

ಇದರೊಂದಿಗೆ 5 ವರ್ಷಗಳ ಕಾಲ ಸಿಬ್ಬಂದಿ ನಿರ್ವಹಣೆ ಹಾಗೂ ಆಡಳಿತ ಶಾಖೆ ಮೇಲ್ವಿಚಾರಣೆ ಕೆಲಸವನ್ನು ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲು ಆದ್ಯತೆ ನೀಡಲಾಗುತ್ತದೆ.

  • ಫಸ್ಟ್ ಡಿವಿಷನ್ ಅಸಿಸ್ಟೆಂಟ್:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರುವುದರ ಜೊತೆಗೆ ರಾಜ್ಯ ಸರ್ಕಾರ ಅಥವಾ ಸಂಸ್ಥೆಯಲ್ಲಿ ಸಿಬ್ಬಂದಿ ಅಥವಾ ಆಡಳಿತ ವಿಭಾಗದಲ್ಲಿ 5 ವರ್ಷಗಳ ಕಾಲ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ರಾಜ್ಯ ಸರ್ಕಾರದ ಸೇವೆಯಲ್ಲಿ ಸಿ ಗುಂಪಿನಲ್ಲಿ ನಿವೃತ್ತರಾದ ಸಿಬ್ಬಂದಿಗೂ ಕೂಡ ಆದ್ಯತೆ ನೀಡಲಾಗುತ್ತದೆ.

  • ಅಕೌಂಟ್ಸ್ ಅಸಿಸ್ಟೆಂಟ್:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ನೋಂದಾಯಿತ ಸಂಘ ಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಲೆಕ್ಕ ನಿರ್ವಹಣೆ ಮಾಡಿದ ಅನುಭವವನ್ನು ಹೊಂದಿರಬೇಕು ಅಥವಾ ರಾಜ್ಯ ಲೆಕ್ಕಪತ್ರ ಇಲಾಖೆ ಅಥವಾ ಸಹಕಾರ ಇಲಾಖೆಯ ಆಡಿಟ್ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದರ ನೌಕರರಾಗಿರಬೇಕು.

ವಯೋಮಿತಿ ವಿವರ:

  • ಮ್ಯಾನೇಜರ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸುವ ನೇರ ನೇಮಕಾತಿ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಮ್ಯಾನೇಜರ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸುವ ನಿವೃತ್ತ ನೌಕರರು ಕನಿಷ್ಠ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ನಿವೃತ್ತರಾದ ನೌಕರರು ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಮ್ಯಾನೇಜರ್, ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

  • ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,000/- ವೇತನವನ್ನು ನೀಡಲಾಗುತ್ತದೆ.
  • ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 22,000/- ವೇತನವನ್ನು ಪಡೆದುಕೊಳ್ಳಬಹುದಾಗಿದೆ.
  • ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಫ್ಲಿಕೇಷನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ಮೇಲೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರವನ್ನು ಲಗತ್ತಿಸಿ
  • ಇವುಗಳನ್ನು ಒಂದು ಲಕೋಟೆಗೆ ಹಾಕಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುತ್ತೀರಾ ಎಂದು ಲಕೋಟೆಯ ಮೇಲೆ ಬರೆದು ಈ ಕೆಳಗೆ ನೀಡಲಾದ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:

“ಮ್ಯಾನೇಜರ್,

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,

ಮೊದಲ ಮಹಡಿ, ಅಭಯ ಕಾಪ್ಲೆಕ್ಸ್,

ಕೊಳಗೇರಿ ಅಭಿವೃದ್ದಿ ಮಂಡಳಿ ಕಟ್ಟಡ,

ನಂ. 55, ರಿಸಲ್ದಾರ್ ರಸ್ತೆ,

ಶೇಷಾದ್ರಿಪುರಂ, ಬೆಂಗಳೂರು – 560020″

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇಲಾಖೆಯ ಸಿಬ್ಬಂದಿಗಳು ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಿ, ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

ಕೊನೆಯದಾಗಿ ಸಂದರ್ಶನದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 10-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು FDA ಮ್ಯಾನೇಜರ್ ಹಾಗೂ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಹಾಗೂ ಲಿಖಿತ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment