CISF: ರೂ. 92,300/- ವೇತನ! ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿ 2026 । ಜುಲೈ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀನು ಹೊಂದಿರುವ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಸೂಕ್ತವಾದ ಉದ್ಯೋಗಕ್ಕಾಗಿ ಕಾಯುತ್ತಿದ್ದಿರಾ? ಹಾಗಿದ್ದಿರೆ ನಿಮ್ಮ ಪಾಲಿಗೆ ಉತ್ತಮ ಅವಕಾಶ ಬಂದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು 2026 ನೇ ಸಾಲಿನಲ್ಲಿ ಖಾಲಿ ಇರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

CISF Paramedical Recruitment 2026


ಇಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 8 ರಿಂದ ಆರಂಭಗೊಂಡಿದ್ದು, ಜುಲೈ 7 ಕ್ಕೆ ಕೊನೆಗೊಳ್ಳುತ್ತದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ, ಉದ್ಯೋಗ ಭದ್ರತೆ ಜೊತೆಗೆ ಇತರೆ ಸರ್ಕಾರಿ ಸೌಲಭ್ಯಗಳು ಲಭಿಸುತ್ತದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

CISF

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಹುದ್ದೆಯ ಹೆಸರು ಪ್ಯಾರಾ ಮೆಡಿಕಲ್ ಸಿಬ್ಬಂದಿ
ಹುದ್ದೆಯ ಸಂಖ್ಯೆ ಒಟ್ಟು 24 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-07-2026

ಹುದ್ದೆಯ ವಿವರ:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಪ್ರಸ್ತುತ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಎಎಸ್ಐ (ಫಾರ್ಮಸಿಸ್ಟ್) 18 ಹುದ್ದೆಗಳು
ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್)1 ಹುದ್ದೆ
ಎಎಸ್ಐ (ಲ್ಯಾಬ್ ಟೆಕ್ನಿಷಿಯನ್)5 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಂಸ್ಥೆಯಲ್ಲಿ ಖಾಲಿ ಇರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಎಎಸ್ಐ (ಫಾರ್ಮಸಿಸ್ಟ್):

ಎಎಸ್ಐ (ಫಾರ್ಮಸಿಸ್ಟ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿರಬೇಕು.

  • ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್):

ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಎಕ್ಸ್-ರೇ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

  • ಎಎಸ್ಐ (ಲ್ಯಾಬ್ ಟೆಕ್ನಿಷಿಯನ್):

ಎಎಸ್ಐ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 7-7-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದಕ್ಕೆ ಅನುಗುಣವಾಗುವಂತೆ ವಯೋಮಿತಿ ವಿವರ ಈ ಕೆಳಕಂಡಂತಿದೆ.

ಎಎಸ್ಐ (ಫಾರ್ಮಸಿಸ್ಟ್), ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್), ಎಎಸ್ಐ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗಳನ್ನು ನೀಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ ಹಾಗೂ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ. 100/-
  • ಎಸ್ಸಿ, ಎಸ್ಟಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ವೇತನ ಶ್ರೇಣಿ:

ಪ್ಯಾರಾ ಮೆಡಿಕಲ್ ಸಿಬ್ಬಂದಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200/- ದಿಂದ ರೂ. 92,300/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಂತರ ಅಫ್ಲಿಕೇಷನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಎಲ್ಲ ವಿವರಗಳನ್ನು ಹಾಗೂ ದಾಖಲೆಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಆಯ್ಕೆ ಪ್ರಕ್ರಿಯೆಯ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಅಥವಾ OMR ಶೀಟ್ ಮಾದರಿ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯು ಸಾಮಾನ್ಯ ಜ್ಞಾನ, ತಾಂತ್ರಿಕ ವಿಷಯಗಳು ಹಾಗೂ ಸಾಮಾನ್ಯ ಅರಿವಿನ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಟ್ಟು 100 ಅಂಕಗಳಿಗೆ ಈ ಒಂದು ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶಗಳನ್ನು ನೀಡಲಾಗಿದೆ.

  • ದೈಹಿಕ ಗುಣಮಟ್ಟ ಪರೀಕ್ಷೆ:

ಲಿಖಿತ ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆಗೆ ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳ ದೇಹದ ಅಳತೆಗಳನ್ನು ಮಾಡಲಾಗುತ್ತದೆ.

ಪುರುಷರು ಕನಿಷ್ಠ 165 ಸೆಂ.ಮೀ ಎತ್ತರ ಇರಬೇಕು ಹಾಗೂ ಮಹಿಳೆಯರು ಕನಿಷ್ಠ 155 ಸೆಂ.ಮೀ ಎತ್ತರ ಇರಬೇಕು. ಜೊತೆಗೆ ಎಲ್ಲ ಅಭ್ಯರ್ಥಿಗಳು ತಮ್ಮ ವಯಸ್ಸಿಗೆ ಅನುಗುಣವಾಗಿ ತೂಕವನ್ನು ಹೊಂದಿರಬೇಕು. ಪುರುಷರ ಚೆಸ್ಟ್ ಕನಿಷ್ಠ 77 ಸೆಂ.ಮೀ ಇರಬೇಕು ಹಾಗೂ ಕನಿಷ್ಠ 5 ಸೆಂ.ಮೀ ಹಿಗ್ಗಿಸುವ ಸಾಮರ್ಥ್ಯ ಇರಬೇಕು.

  • ದಾಖಲಾತಿ ಪರಿಶೀಲನೆ:

ಅಭ್ಯರ್ಥಿಗಳ ದೈಹಿಕ ಗುಣಮಟ್ಟ ಪರೀಕ್ಷೆ ನಡೆಸುವ ದಿನಾಂಕದಂದೇ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.

  • ಮೂಲ ವೃತ್ತಿಪರ ಅರ್ಹತಾ ಪರೀಕ್ಷೆ:

ಇದು ಕೇವಲ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ನಿಮ್ಮ ವೃತ್ತಿಗೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಶೀಲಿಸಲಾಗುತ್ತದೆ.

  • ವೈದ್ಯಕೀಯ ಪರೀಕ್ಷೆ:

ಈ ಎಲ್ಲ ಹಂತಗಳಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಅಂತಿಮವಾಗಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳ ದೈಹಿಕ ಆರೋಗ್ಯವನ್ನು ಪರಿಶೀಲಿಸಿ ಫಿಟ್ನೆಸ್ ಸರ್ಟಿಫಿಕೇಟ್ ಗಳನ್ನು ನೀಡಲಾಗುತ್ತದೆ.

ನಂತರ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳಿಗೆ ಅನುಗುಣವಾಗಿ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-07-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 07-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಪ್ರಸ್ತುತ ಸಾಲಿನಲ್ಲಿ ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕು ಎಂದು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಪಿಯೂಸಿ, ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment