KPCL: ರೂ. 65,000/- ವೇತನ! ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಭರ್ಜರಿ ನೇಮಕಾತಿ 2026 । ಜೂನ್ 22 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಸ್ವಾಮ್ಯದಲ್ಲಿರುವ ಈ ಒಂದು ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

KPCL Recruitment 2026


ಇಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕಾನೂನು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 22-06-2026 ವರೆಗೆ ಅವಕಾಶ ನೀಡಲಾಗಿದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಗಳನ್ನು ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಕರ್ನಾಟಕ ವಿದ್ಯುತ್ ನಿಗಮ ನಿಯಮಿತ
ಹುದ್ದೆಯ ಹೆಸರು ಅಸಿಸ್ಟೆಂಟ್ ಲೀಗಲ್ ಆಫೀಸರ್
ಹುದ್ದೆಯ ಸಂಖ್ಯೆ ಒಟ್ಟು 2 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ ಇಮೇಲ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-06-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಒಟ್ಟು 2 ಹುದ್ದೆಗಳು ಖಾಲಿ ಇದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ 3/ 5 ವರ್ಷಗಳ ಕಾನೂನು ಪದವಿ ಪೂರ್ಣಗೊಳಿಸಿದ ಕನಿಷ್ಠ 28 ವರ್ಷದಿಂದ ಗರಿಷ್ಟ 56 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಒಂದು ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆರಂಭಿಕ ಹಂತದಲ್ಲಿ 6 ತಿಂಗಳ ಅವಧಿಗೆ ಸೀಮಿತವಾಗಿರುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅಧಿಕಾರ ಅವಧಿಯನ್ನು ವಿಸ್ತರಿಸಲಾಗುತ್ತದೆ.

ಹುದ್ದೆಯ ವಿವರ:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಲೀಗಲ್ ಆಫೀಸರ್ 2 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಅಸಿಸ್ಟೆಂಟ್ ಲೀಗಲ್ ಆಫೀಸರ್:

  • ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 3 ವರ್ಷ ಅಥವಾ 5 ವರ್ಷಗಳ ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕಾನೂನು ಪದವಿಯಲ್ಲಿ ಎಲ್ಲ ಸೆಮಿಸ್ಟರ್ ಗಳ ಸರಾಸರಿ ಅಂದಾಜಿನ ಪ್ರಕಾರ ಕನಿಷ್ಠ 40% ಅಂಕಗಳನ್ನು ಗಳಿಸಿರಬೇಕು.
  • ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಜೊತೆಗೆ ನೋಂದಣಿ ದಿನಾಂಕ ಹಾಗೂ ಸಂಖ್ಯೆ ಇರುವ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಐಡಿ ಕಾರ್ಡ್ ಅನ್ನು ಹೊಂದಿರಬೇಕು.
  • ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದಲ್ಲಿ ಅಥವಾ ಉಚ್ಚ ನ್ಯಾಯಾಲಯದಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಆಂಗ್ಲ ಭಾಷೆಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಹಾಗೂ ಬೆರಳಚ್ಚು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

  • ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ವಯೋಮಿತಿಯನ್ನು ಹೊಂದಿರಬೇಕು.
    • ಅಭ್ಯರ್ಥಿಗಳು ಕನಿಷ್ಠ 28 ವರ್ಷದಿಂದ ಗರಿಷ್ಟ 56 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಅಭ್ಯರ್ಥಿಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯನ್ನು ನಿಗದಿಪಡಿಸಿರುವುದರಿಂದ, ಪ್ರತಿ ವರ್ಗಗಳಿಗೆ ಅನುಗುಣವಾಗಿ ಯಾವುದೇ ವಯೋಮಿತಿ ಸಡಿಲಿಕೆಯ ಬಗ್ಗೆ ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಿಲ್ಲ.

ಅರ್ಜಿ ಶುಲ್ಕ:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 65,000/- ವೇತನವನ್ನು ನೀಡಲಾಗುತ್ತದೆ. ಹಾಗೂ ಇದರೊಂದಿಗೆ TA ಹಾಗೂ DA ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಫ್ಲಿಕೇಷನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ಮೇಲೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ
  • ನಂತರ ಈ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ [email protected] ಇಮೇಲ್ ವಿಳಾಸಕ್ಕೆ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗವಹಿಸುವಾಗ ತಮ್ಮ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ 12-06-2026
ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೀಗಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದು, ಕಾನೂನು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ನೀವೇನಾದರೂ ಈ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೆ ಇಂದೇ ಇಮೇಲ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment