ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಕಂಡುಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯವು ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಹೊಂದಿರದ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
DC Office Job Recruitment 2026
ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದೆ ಹಾಗೂ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿರುತ್ತದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ನಗರ ಸ್ಥಳೀಯ ಸಂಸ್ಥೆಗಳು |
| ಹುದ್ದೆಯ ಹೆಸರು | ಲೋಡರ್ ಮತ್ತು ಕ್ಲೀನರ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 77 ಹುದ್ದೆಗಳು |
| ಉದ್ಯೋಗ ಸ್ಥಳ | ಹಾವೇರಿ ಜಿಲ್ಲೆ, ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಹುದ್ದೆಯ ವಿವರ:
ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯವು, ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಇಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಲೋಡರ್ | 60 ಹುದ್ದೆಗಳು |
| ಕ್ಲೀನರ್ | 17 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.
- ಶೈಕ್ಷಣಿಕ ಅರ್ಹತೆ:
- ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯವಿಲ್ಲ.
- ಭಾಷಾ ಜ್ಞಾನ:
- ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಮಾತನಾಡಲು ಬರಬೇಕು.
- ಅನುಭವ:
- ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ, ಗುತ್ತಿಗೆ, ಹೊರಗೊತ್ತಿಗೆ ಆಧಾರದ ಮೇಲೆ ಪ್ರಸ್ತುತ ಲೋಡರ್ ಅಥವಾ ಕ್ಲೀನರ್ ಆಗಿ ಕಾರ್ಯ ನಿರ್ವಹಿಸುತ್ತಿರಬೇಕು.
- ನೇಮಕಾತಿ ನಿಯಮಗಳು ಜಾರಿಗೆ ಬಂದಿರುವ ದಿನಾಂಕದಂದು ಪ್ರಸ್ತುತ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಪೂರ್ಣಗೊಳಿಸಿ ಮುಂದುವರೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ವಿವರ:
- ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಹಾಗೂ ಅಭ್ಯರ್ಥಿಗಳು ಗರಿಷ್ಟ 55 ವರ್ಷ ವಯೋಮಿತಿಯನ್ನು ಮೀರಿರಬಾರದು. ಈ ವಯೋಮಿತಿಯನ್ನು ಮೀರಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ:
ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯವು ಲೋಡರ್ ಹಾಗೂ ಕ್ಲೀನರ್ ಹುದ್ದೆಗಳ ಭರ್ತಿಗೆ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಿಲ್ಲ ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ನೇರ ನೇಮಕಾತಿ ಮೂಲಕ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮಾಸಿಕ ರೂ. 27,000/- ದಿಂದ 46,675/- ವರೆಗೆ ವೇತನವನ್ನು ಪಡೆದುಕೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಮೂಲ ವೇತನದ ಜೊತೆಗೆ ಸರ್ಕಾರಿ ನೌಕರರಿಗೆ ಸಿಗುವ ಇತರೆ ಸೌಲಭ್ಯಗಳು ದೊರೆಯುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಹಾವೇರಿ ಜಿಲ್ಲೆಯ ಆಯಾ ಪುರಸಭೆ, ನಗರ ಸಭೆ ಅಥವಾ ಪಟ್ಟಣ ಪಂಚಾಯತಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆಯಿರಿ.
- ಅಪ್ಲಿಕೇಶನ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರವನ್ನು ಸರಿಯಾಗಿ ಭರ್ತಿ ಮಾಡಿ.
- ನಂತರ ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಕನ್ನಡ ಭಾಷಾ ಜ್ಞಾನ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ
- ಅಪ್ಲಿಕೇಶನ್ ಮೇಲೆ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ರಾಣೆಬೆನ್ನೂರು, ಹಾವೇರಿ, ಹಾನಗಲ್ಲ, ಬ್ಯಾಡಗಿ, ಬಂಕಾಪುರ, ಹಿರೇಕೆರೂರು, ಸವಣೂರು, ಶಿಗ್ಗಾಂವ್, ರಟ್ಟಿ ಹಳ್ಳಿ ಅಥವಾ ಗುತ್ತಲ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಸಂಬಂಧಿತ ಕಚೇರಿಗೆ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಲೋಡರ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ವಿಶೇಷವಾಗಿ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಈ ಒಂದು ನೇಮಕಾತಿ ಪ್ರಕ್ರಿಯೆಯು ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಾಗೂ ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುತ್ತದೆ.
ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ಸೇವಾ ಹಿರಿತನದ ಆಧಾರದ ಮೇಲೆ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್‌ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕದ ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯವು, ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯವಿಲ್ಲ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Central Bank : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026: 4,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
- KPCL: ರೂ. 65,000/- ವೇತನ! ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಭರ್ಜರಿ ನೇಮಕಾತಿ 2026 । ಜೂನ್ 22 ಕೊನೆಯ ದಿನಾಂಕ
- Metro: ರೂ. 2,06,250 ವೇತನ! ಬೆಂಗಳೂರು ಮೆಟ್ರೋದಲ್ಲಿ ಭರ್ಜರಿ ಉದ್ಯೋಗಾವಕಾಶ 2026 । ಜೂನ್ 30 ಕೊನೆಯ ದಿನಾಂಕ
- RRB: ರೈಲ್ವೆ ಇಲಾಖೆಯಲ್ಲಿ 6565 ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026! ITI, ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- SSC Application: ರೂ. 81,100/ ವೇತನ! ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ಬೃಹತ್ ನೇಮಕಾತಿ 2026 । ಪದವೀಧರರಿಗೆ ಸುವರ್ಣಾವಕಾಶ!