KBY: ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆ ಯೋಜನೆಯೇ “ಕಲಿಕಾ ಭಾಗ್ಯ ಯೋಜನೆ”.
Kalika Bhagya Scheme 2026
ಈ ಯೋಜನೆಯಡಿಯಲ್ಲಿ ಅರ್ಹ ಕಾರ್ಮಿಕರ ಮಕ್ಕಳಿಗೆ 1 ನೇ ತರಗತಿಯಿಂದ ಹಿಡಿದು ವೃತ್ತಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ವರೆಗೂ ಕೂಡ ಆರ್ಥಿಕ ಸಹಾಯಧನ ಲಭಿಸುತ್ತದೆ. ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ತರಗತಿಗೆ ಅನುಗುಣವಾಗಿ ರೂ. 2000/- ದಿಂದ ರೂ. 50,000/- ವರೆಗೆ ವಿದ್ಯಾರ್ಥಿವೇತನ ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಅಗತ್ಯ ದಾಖಲೆಗಳು ಯಾವುವು? ತರಗತಿ ಹಾಗೂ ಕೋರ್ಸ್ ಗೆ ಅನುಗುಣವಾಗಿ ಎಷ್ಟೆಷ್ಟು ಸಹಾಯಧನ ಲಭಿಸುತ್ತದೆ? ಯೋಜನೆಯ ಉದ್ದೇಶವೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ಯೋಜನೆಯ ಅವಲೋಕನ:
| ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ | ಕರ್ನಾಟಕ ಸರ್ಕಾರ |
| ಅನುಷ್ಠಾನ ಸಂಸ್ಥೆ | ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ |
| ಯೋಜನೆಯ ಹೆಸರು | ಕಲಿಕಾ ಭಾಗ್ಯ ಯೋಜನೆ |
| ಅರ್ಹ ಫಲಾನುಭವಿಗಳು | ನೋಂದಾಯಿತ ಕಾರ್ಮಿಕರ ಮಕ್ಕಳು |
| ವಿದ್ಯಾರ್ಥಿವೇತನದ ಮೊತ್ತ | ತರಗತಿ ಹಾಗೂ ಕೋರ್ಸ್ ಗೆ ಅನುಗುಣವಾಗಿ ರೂ. 2000/- ದಿಂದ 50,000/- |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಯೋಜನೆಯ ಉದ್ದೇಶ | ನೋಂದಾಯಿತ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸುವುದು |
ಕಲಿಕಾ ಭಾಗ್ಯ ಯೋಜನೆ ಎಂದರೇನು?
ಕಲಿಕಾ ಭಾಗ್ಯ ಯೋಜನೆ ಎನ್ನುವುದು ಕರ್ನಾಟಕ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಜಾರಿಗೆ ತರಲಾದ ವಿಶೇಷ ವಿದ್ಯಾರ್ಥಿವೇತನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ನೋಂದಾಯಿತ ಕಾರ್ಮಿಕರ ಮಕ್ಕಳು ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಬಡ ಕಾರ್ಮಿಕರ ಮಕ್ಕಳು ಹಣಕಾಸಿನ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರವು ಈ ಒಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ 1 ನೇ ತರಗತಿಯಿಂದ ಹಿಡಿದು ಪದವಿ, ಇಂಜಿನಿಯರಿಂಗ್, ವೈದ್ಯಕೀಯ, ಪಿ.ಹೆಚ್.ಡಿ ವರೆಗಿನ ಉನ್ನತ ವ್ಯಾಸಂಗಕ್ಕೆ ವರ್ಷಕ್ಕೆ ರೂ. 2000/- ದಿಂದ ಗರಿಷ್ಟ ರೂ. 50,000/- ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಯಾವುದೇ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ಪೋಷಕರು ಕಡ್ಡಾಯವಾಗಿ ಸಕ್ರಿಯವಾಗಿರುವ ಲೇಬರ್ ಕಾರ್ಡ್ ಗಳನ್ನು ಹೊಂದಿರಬೇಕು ಹಾಗೂ ಒಂದು ಕುಟುಂಬದ ಇಬ್ಬರು ಮಕ್ಕಳು ಮಾತ್ರ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಕಲಿಕಾ ಭಾಗ್ಯ ಯೋಜನೆಯ ಉದ್ದೇಶ:
- ಶಾಲಾ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು:
ಸರ್ಕಾರವು ಕಲಿಕಾ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಉತ್ಸಾಹಿತರಾಗುತ್ತಾರೆ. ಈ ಯೋಜನೆಯ ಮೂಲಕ ಹೆಚ್ಚು ಮಕ್ಕಳು ಶಾಲೆಗೆ ದಾಖಲಾಗುವುದನ್ನು ಪ್ರೋತ್ಸಾಹಿಸಲಾಗುತ್ತದೆ. ಇದರಿಂದಾಗಿ ಶಿಕ್ಷಣದ ವ್ಯಾಪ್ತಿಯು ವಿಸ್ತಾರವಾಗುತ್ತದೆ.
- ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸುವುದು:
ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ನೆರವನ್ನು ಒದಗಿಸಿ ಕುಟುಂಬದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
- ಸಮಾನಾವಕಾಶ ಕಲ್ಪಿಸುವುದು:
ಸಮಾಜದಲ್ಲಿ ಬಡ ಮತ್ತು ಹಿಂದುಳಿದ ಕಾರ್ಮಿಕರ ಕುಟುಂಬದ ಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯದಂತೆ ಅವರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲ ಮಕ್ಕಳಿಗೂ ಕೂಡ ಸಮಾನಾವಕಾಶ ಕಲ್ಪಿಸಿ ಸಾಮಾಜಿಕ ಅಸಮಾನತೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
- ವೃತ್ತಿಪರ ಕೋರ್ಸ್ ಗಳಿಗೆ ಪ್ರೋತ್ಸಾಹ ನೀಡುವುದು:
ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕೇವಲ ಪ್ರಾಥಮಿಕ ಹಾಗೂ ಶಾಲಾ ಹಂತದ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಡಿಪ್ಲೊಮಾ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹಾಯಧನವನ್ನು ಒದಗಿಸಿ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು.
ವಿದ್ಯರ್ಥಿವೇತನದ ವಿವರ:
| ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸ್ | ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತ |
| 1 ನೇ ತರಗತಿಯಿಂದ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 2000/- |
| 4 ನೇ ತರಗತಿಯಿಂದ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 3,000/- |
| 7 ನೇ ತರಗತಿಯಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 4,000/- |
| 9 ನೇ ತರಗತಿ, 10 ನೇ ತರಗತಿ ಹಾಗೂ 1st PUC ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 6,000/- |
| 2nd PUC ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 8,000/- |
| ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 7,000/- |
| ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 10,000/- |
| ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ಪದವಿ ಸೇರ್ಪಡೆಗೆ ರೂ. ರೂ. ನಂತರದ ವರ್ಷದಲ್ಲಿ ರೂ. 10,000/- |
| ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ | ರೂ. 20,000/- ದಿಂದ ರೂ. 50,000/- |
ಅರ್ಹತಾ ಮಾನದಂಡಗಳು:
- ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
- ಪೋಷಕರು ಕಡ್ಡಾಯವಾಗಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿತರಾಗಿರಬೇಕು.
- ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕಡ್ಡಾಯವಾಗಿ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿರಬೇಕು
- ಪೋಷಕರು ಹೊಂದಿರುವ ಲೇಬರ್ ಕಾರ್ಡ್ ಚಾಲ್ತಿಯಲ್ಲಿರಬೇಕು.
- ವಿದ್ಯಾರ್ಥಿಯು ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಾಖಲೆಗಳನ್ನು ನೀಡಬೇಕು.
- ವಿದ್ಯಾರ್ಥಿಗಳು 1 ನೇ ತರಗತಿಯಿಂದ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಒಬ್ಬ ನಂದಾಯಿತ ಕಾರ್ಮಿಕರ ಕುಟುಂಬದ ಇಬ್ಬರು ಮಕ್ಕಳು ಮಾತ್ರ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
- ವಿದ್ಯಾರ್ಥಿಗಳು ಹಿಂದಿನ ತರಗತಿ ಹಾಗೂ ಸೆಮಿಸ್ಟರ್ ಗಳಲ್ಲಿ ಪ್ರಥಮ ಪ್ರಯತ್ನದಲೇ ಪಾಸ್ ಆಗಿರಬೇಕು.
ಅಗತ್ಯ ದಾಖಲೆಗಳು:
- ಲೇಬರ್ ಕಾರ್ಡ್
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ವ್ಯಾಸಂಗ ಪ್ರಮಾಣಪತ್ರ
- ರೇಷನ್ ಕಾರ್ಡ್
- ವಿದ್ಯಾರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಹಿಂದಿನ ಶೈಕ್ಷಣಿಕ ಅಂಕಪಟ್ಟಿ
- ಹಾಗೂ ಇತರೆ ದಾಖಲೆಗಳು
ಕಲಿಕಾ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ನೋಂದಾಯಿತ ಕಾರ್ಮಿಕರ ಮಕ್ಕಳು ಕಲಿಕಾ ಭಾಗ್ಯ ಯೋಜನೆಗೆ ಅರ್ಜಿಯನ್ನು ಆನ್ಲೈನ್ ವಿಧಾನಗಳ ಮೂಲಕ ಸಲ್ಲಿಸಬಹುದಾಗಿದ್ದು, ಕಾರ್ಮಿಕರು ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಆನ್ಲೈನ್ ಮೂಲಕ:
- ಅರ್ಹ ಫಲಾನುಭವಿಗಳು ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಂತರ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಲಭ್ಯವಿರುವ ಶೈಕ್ಷಣಿಕ ಕಿಟ್ ಯೋಜನೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ಕೇಳಲಾಗುವ ಲೇಬರ್ ಕಾರ್ಡ್ ನಂಬರ್, ಆಧಾರ್ ಕಾರ್ಡ್ ನಂಬರ್ , ವಿದ್ಯಾರ್ಥಿಗಳ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ತರಗತಿ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಕಲಿಕಾ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ನೀವೇನಾದರು ಕಾರ್ಮಿಕರ ಮಕ್ಕಳಾಗಿದ್ದು, ನಿಮ್ಮ ಪೋಷಕರು ಹೊಂದಿರುವ ಲೇಬರ್ ಕಾರ್ಡ್ ಚಾಲ್ತಿಯಲ್ಲಿದ್ದರೆ ಇಂದೇ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Free ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ-ಸಾಕ್ಸ್, ಚಪ್ಪಲಿ, ಸ್ಟಡಿ ಕಿಟ್ ಹಾಗೂ ₹4,000/₹7,000 ಸಹಾಯಧನ ಯೋಜನೆ – ಸಂಪೂರ್ಣ ಮಾಹಿತಿ!
- Driver DL Scheme: ರೂ. 25,000 ಸಹಾಯಧನ! ಡ್ರೈವಿಂಗ್ ಲೈಸನ್ಸ್ ಹೊಂದಿರುವ ಚಾಲಕರಿಗೆ ಸರ್ಕಾರದಿಂದ ಹೊಸ ಯೋಜನೆ । ಇಂದೇ ಅಪ್ಲೈ ಮಾಡಿ
- DRPS: 10th ಹಾಗೂ PUC ಪಾಸ್ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ
- SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ