RDWSD: ಶಿವಮೊಗ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜೂನ್ 30 ಕೊನೆಯ ದಿನಾಂಕ

ನಿರುದ್ಯೋಗಿ ಯುವಕ ಯುವತಿಯರಿಗೆ ಭರ್ಜರಿ ಉದ್ಯೋಗಾವಕಾಶ! ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

RDWSD Recruitment 2026


ಸಾರ್ವಜನಿಕ ಆರೋಗ್ಯ ಮತ್ತು ಕುಡಿಯುವ ನೀರಿನ ಗುಣಮಟ್ಟ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಸಂಬಂದಿಸಿದ ನೇಮಕಾತಿ ಪ್ರಕ್ರಿಯೆಯು ಒಪ್ಪಂದದ ಆಧಾರದ ಮೇಲೆ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜೂನ್ 30 ರ ವರೆಗೆ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.

RDWSD

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಶಿವಮೊಗ್ಗ
ಹುದ್ದೆಯ ಹೆಸರು ಸೀನಿಯರ್ ಮೈಕ್ರೋಬಯಾಲಜಿಸ್ಟ್
ಹುದ್ದೆಯ ಸಂಖ್ಯೆ 1 ಹುದ್ದೆ
ಉದ್ಯೋಗ ಸ್ಥಳ ಶಿವಮೊಗ್ಗ – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30-06-2026
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಶಿವಮೊಗ್ಗ ಗ್ರಾಮೀಣ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸ್ನಾತಕೋತ್ತರ ಪದವಿ ಅಥವಾ ಎಂಎಸ್ಸಿ ಮೈಕ್ರೋಬಯಾಲಜಿಯಲ್ಲಿ ಉತ್ತೀರ್ಣರಾಗಿರುವ ಜೊತೆಗೆ ಸಂಬಂಧಿತ ಕುಡಿಯುವ ನೀರು ಪರೀಕ್ಷಾ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರುವ 45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಶಿವಮೊಗ್ಗ ಜಿಲ್ಲಾ ಗ್ರಾಮೀಣ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಕೆಳಕಂಡಂತಿದೆ.

ಹುದ್ದೆಯ ವಿವರ ಹುದ್ದೆಗಳ ಸಂಖ್ಯೆ
ಸೀನಿಯರ್ ಮೈಕ್ರೋಬಯಾಲಜಿಸ್ಟ್01 ಹುದ್ದೆ

ಶೈಕ್ಷಣಿಕ ಅರ್ಹತೆ:

ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಅಭ್ಯರ್ಥಿಗಳು ಪದವಿ ಅಥವಾ ಬಿಎಸ್ಸಿ ಮೈಕ್ರೋಬಯಾಲಜಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ಕುಡಿಯುವ ನೀರು ಪರೀಕ್ಷಾ ಕ್ಷೇತ್ರದಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
  • ಅಥವಾ ಅಭ್ಯರ್ಥಿಗಳು ಪದವಿ ಅಥವಾ ಬಿಎಸ್ಸಿ ಬಯೋಕೆಮಿಸ್ಟ್ರಿ/ ಎನ್ವಿರೋನ್ಮೆಟಲ್ ಸೈನ್ಸ್/ ಬಯೋಟೆಕ್ನಾಲಜಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
  • ಅಥವಾ ಸ್ನಾತಕೋತ್ತರ ಪದವಿ ಅಥವಾ ಎಂಎಸ್ಸಿ ಮೈಕ್ರೋಬಯಾಲಜಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ಕುಡಿಯುವ ನೀರು ಪರೀಕ್ಷಾ ಕ್ಷೇತ್ರದಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.
  • ಅಥವಾ ಸ್ನಾತಕೋತ್ತರ ಪದವಿ ಅಥವಾ ಎಂಎಸ್ಸಿ ಬಯೋಕೆಮಿಸ್ಟ್ರಿ/ ಎನ್ವಿರೋನ್ಮೆಟಲ್ ಸೈನ್ಸ್/ ಬಯೋಟೆಕ್ನಾಲಜಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ10 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 45 ವರ್ಷದ ಒಳಗೆ ಇರಬೇಕು.

ವಯೋಮಿತಿ ಸಡಿಲಿಕೆ ವಿವರ:

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಅಭ್ಯರ್ಥಿಗಳ ವಯೋಮಿತಿಯ ಕುರಿತು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿಲ್ಲ ಹಾಗಾಗಿ ಎಲ್ಲ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 45 ವರ್ಷದೊಳಗೆ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಕುರಿತು ಮಾಹಿತಿ ನೀಡಿಲ್ಲ ಹಾಗಾಗಿ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 31,000/- ವೇತನವನ್ನು ನೀಡಲಾಗುತ್ತದೆ. ಈ ಒಂದು ನೇಮಕಾತಿ ಪ್ರಕ್ರಿಯೆಯು ಹೊರಗುತ್ತಿಗೆ ಆಧಾರದ ಮೇಲೆ ನಡೆಯುವುದರಿಂದ ಅಭ್ಯರ್ಥಿಗಳು ಕಾರ್ಯಕ್ಷಮತೆ ಆಧಾರದ ಮೇಲೆ ವೇತನವನ್ನು ನವೀಕರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಶಿವಮೊಗ್ಗ ಜಿಲ್ಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ವೆಬ್ಸೈಟ್ ನಲ್ಲಿ ನೀಡಲಾದ ಹಿರಿಯ ಮೈಕ್ರೋಬಯಾಲಜಿಸ್ಟ್ ಹುದ್ದೆಯ ಆನ್ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರಗಳನ್ನು ಭರ್ತಿ ಮಾಡಿ.
  • ಪಾಸ್ ಪೋರ್ಟ್ ಅಳತೆ ಫೋಟೋ, ಅಭ್ಯರ್ಥಿಯ ಸಹಿ, ಶೈಕ್ಷಣಿಕ ದಾಖಲೆ, ವಯಸ್ಸಿನ ಪುರಾವೆ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಂತರ ಎಲ್ಲ ವಿವರಗಳನ್ನು ಪರಿಶೀಲಿಸಿದ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಮೊದಲನೇ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
  • ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಲಾಗುತ್ತದೆ.
  • ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದೂರವಾಣಿ ಮೂಲಕ ಸಂದರ್ಶನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.
  • ನಂತರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ, ಸಂದರ್ಶನದಲ್ಲಿನ ಕಾರ್ಯಕ್ಷಮತೆ ಆಧಾರದ ಮೇಲೆ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 16-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಜೂನ್ 30 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ವೃತ್ತಿವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment