Ration: ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಆನ್ಲೈನ್ ಅರ್ಜಿಯನ್ನು ಆರಂಭಿಸಿದೆ । ಇಂದೇ ಅಪ್ಲೈ ಮಾಡಿ : BPL Arji

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಹೊಸದಾಗಿ ಪಡಿತರ ಚೀಟಿಯನ್ನು ಮಾಡಿಸಬೇಕೆಂದಿದ್ದೀರಾ? ಅಥವಾ ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬಸ್ಥರ ಹೆಸರನ್ನು ಸೇರಿಸಬೇಕೆಂದಿದ್ದೀರಾ? ಅಥವಾ ಪಡಿತರ ಚೀಟಿಯಲ್ಲಿ ಏನಾದರು ತಿದ್ದುಪಡಿ ಮಾಡಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ.

Ration Card Application Process in Kannada


ಕರ್ನಾಟಕ ಸರ್ಕಾರವು ಕೆಲ ಆಯ್ದ ವರ್ಗಗಳಿಗೆ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಜೊತೆಗೆ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇನ್ನು ಕೆಲವೇ ದಿನಗಳ ವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.

ಪಡಿತರ ಚೀಟಿ ಎನ್ನುವುದು ಕೇವಲ ಒಂದು ಗುರುತಿನ ಚೀಟಿ ಮಾತ್ರವಲ್ಲ, ಸರ್ಕಾರದ ಹಲವಾರು ಯೋಜನೆಗಳ ಅಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು, ತಮ್ಮ ಕುಟುಂಬದ ಆರ್ಥಿಕ ಭದ್ರತೆಗೆ ಇದು ದೊಡ್ಡ ಆಧಾರವಾಗಿದೆ. ನೀವು ಕೂಡ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಒಂದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಇದೇ ರೀತಿಯ ಇನ್ನಷ್ಟು ಹೊಸ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಪ್ರಮುಖ ಹೈಲೈಟ್ಸ್:

* ಆಯ್ದ ವಿಶೇಷ ವರ್ಗಗಳಿಗೆ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ.
* ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಅಂದರೆ 31-06-2026 ರ ವರೆಗೂ ಅವಕಾಶ.
* ಹೊಸದಾಗಿ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಜೊತೆಗೆ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕಲು ಹಾಗೂ ವಿಳಾಸ ತಿದ್ದುಪಡಿಗೆ ಅವಕಾಶ.

BPL ಹೊಂದಿದ್ದರೆ ಏನೆಲ್ಲಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು?

  • BPL ಕಾರ್ಡ್ ಹೊಂದಿರುವ ಕುಟುಂಬಗಳು ಪ್ರತಿ ತಿಂಗಳು ಸರ್ಕಾರದಿಂದ ಉಚಿತವಾಗಿ ಕುಟುಂಬದ ಪ್ರತಿ ಸದಸ್ಯರ ಹೆಸರಿನಲ್ಲಿ 10 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು. ಅಥವಾ ಅಕ್ಕಿಯ ಬದಲಾಗಿ ಪ್ರತಿ ಕೆಜಿ ಅಕ್ಕಿಗೆ ರೂ. 34 ರಂತೆ ಅರ್ಹಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಈ ಒಂದು ಸೌಲಭ್ಯವನ್ನು ಕೂಡ ಪಡೆದುಕೊಳ್ಳಬಹುದಾಗಿದೆ
  • BPL ಕಾರ್ಡ್ ಹೊಂದಿರುವ ಕುಟುಂಬಗಳು ಅಯುಷ್ಮಾನ್ ಕರ್ನಾಟಕ ಭರತ್ ಯೋಜನೆಯಡಿಯಲ್ಲಿ ಸರ್ಕಾರಿ ಆಸ್ಪತ್ರೆ ಅಥವಾ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ವರ್ಷ ರೂ. 5 ಲಕ್ಷದ ವರೆಗೆ ಉಚಿತವಾಗಿ ವೈದ್ಯಕೀಯ ಚಿಕೆತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ.
  • BPL ಕಾರ್ಡ್ ಹೊಂದಿರುವ ಕುಟುಂಬಗಳು ಪ್ರತಿ ತಿಂಗಳು 200 ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
  • BPL ಕಾರ್ಡ್ ಹೊಂದಿರುವ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೂ. 2000 ಸಾವಿರ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
  • BPL ಕಾರ್ಡ್ ಹೊಂದಿರುವ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿಗಳು ಶಾಲಾ ಅಥವಾ ಕಾಲೇಜು ಪ್ರವೇಶ ಶುಲ್ಕದಿಂದ ರಿಯಾಯಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಸರ್ಕಾರದ ವಿವಿಧ ವಿದ್ಯಾರ್ಥಿವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದು.
  • ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ BPL ಕಾರ್ಡ್ ದಾರರು ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಗ್ಯಾಸ್ ಸ್ಟವ್ ಗಳನ್ನು ಪಡೆದುಕೊಳ್ಳಬಹುದಾಗಿದೆ.
  • ಜೊತೆಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ರೈತರು, ಕಾರ್ಮಿಕರು ಹಾಗೂ ಜನ ಸಾಮಾನ್ಯರು ಆಶ್ರಯ ವಸತಿ ಯೋಜನೆ, ಉಚಿತ ಟೂಲ್ ಕಿಟ್ ಯೋಜನೆಯಂತೆ ಇನ್ನು ಸಾಕಷ್ಟು ಸರ್ಕಾರಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

BPL ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶ ಕಲ್ಪಿಸಿದೆ?

  • ಕ್ಯಾನ್ಸರ್, ಕಿಡ್ನಿ ವೈಫಲ್ಯಗಳಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದು, ಅಯುಷ್ಮಾನ್ ಭಾರತ್ ಯೋಜನೆಯಿಂದ ಉಚಿತವಾಗಿ ವೈದ್ಯಕೀಯ ಸೌಲಭ್ಯವನ್ನು ಪಡೆದುಕೊಳ್ಳುವುದು ಅನಿವಾರ್ಯವಾಗಿರುವವರು ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಕನಿಷ್ಠ 16 ವರ್ಷದಿಂದ ಗರಿಷ್ಟ 59 ವರ್ಷ ವಯೋಮಿತಿಯನ್ನು ಹೊಂದಿರುವ ಅಸಂಘಟಿತ ವಲಯದ ಕೂಲಿ ಕಾರ್ಮಿಕರು, ಗೃಹ ಕಾರ್ಮಿಕರು, ದಿನಗೂಲಿ ಕೆಲಸಗಾರರು ಇ-ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಿಕೊಂಡಿದರೆ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಅತ್ಯಂತ ಹಿಂದುಳಿದ ಬುಡಕಟ್ಟು ಗುಂಪುಗಳಿಗೆ ಸೇರಿದ ಅಭ್ಯರ್ಥಿಗಳು ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೂ ಅವಕಾಶ:

  • ಹೊಸದಾಗಿ ಮಗುವಿನ ಹೆಸರನ್ನು ಹಾಗೂ ಹೊಸದಾಗಿ ವಿವಾಹವಾಗಿ ಬಂದ ಮಹಿಳೆಯ ಹೆಸರನ್ನು BPL ಕಾರ್ಡ್ ಗೆ ಸೇರಿಸಲು ಅವಕಾಶ ಕಲ್ಪಿಸಲಾಗಿದೆ.
  • ಕುಟುಂಬದ ಯಾವುದೇ ಸದಸ್ಯರು ಮರಣ ಹೊಂದಿದ್ದರೆ ಅವರ ಹೆಸರನ್ನು ತೆಗೆದುಹಾಕಲು ಅವಕಾಶ ಕಲ್ಪಿಸಲಾಗಿದೆ.
  • ಈಗಾಗಲೇ ಹೊಂದಿರುವ BPL ಕಾರ್ಡ್ ನಲ್ಲಿ ಹೆಸರು, ವಿಳಾಸ, ವಯಸ್ಸನ್ನು ತಿದ್ದುಪಡಿ ಮಾಡಿಸಬೇಕೆಂದಿದ್ದರೆ ಅವರಿಗೂ ಕೂಡ ಅವಕಾಶ ಕಲ್ಪಿಸಲಾಗಿದೆ.

ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಗತ್ಯವಾದ ಅರ್ಹತಾ ಮಾನದಂಡಗಳು:

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಅರ್ಜಿದಾರರು ಈ ವರೆಗೂ ಯಾವುದೇ ರೇಷನ್ ಕಾರ್ಡ್ ಅನ್ನು ಹೊಂದಿರಬಾರದು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿರಬಾರದು.
  • ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷ ಮೀರಿರಬಾರದು.
  • ಕುಟುಂಬದ ಯಾವುದೇ ಸದಸ್ಯರು ಆದಾಯ ತೆರಿಗೆಯನ್ನು ಪಾವತಿಸುತ್ತಿರಬಾರದು.
  • ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರಬಾರದು.
  • ಸ್ವಂತ ಬಳಕೆಯ ನಾಲ್ಕು ಚಕ್ರದ ವಾಹನವನ್ನು ಹೊಂದಿರಬಾರದು.

BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ವಾಸಸ್ಥಳ ಪುರಾವೆ
  • 6 ವರ್ಷದೊಳಗಿನ ಮಗುವಿನ ಜನನ ಪ್ರಮಾಣಪತ್ರ
  • ವೈದ್ಯಕೀಯ ದಾಖಲೆಗಳು
  • ಇ-ಶ್ರಮ್ ಕಾರ್ಡ್
  • ಜಾತಿ ಪ್ರಮಾಣಪತ್ರ (ಅನ್ವಹಿಸಿದ್ದರೆ)

ಅರ್ಜಿ ಸಲ್ಲಿಸುವ ವಿಧಾನ:

ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಆಹಾರ ಇಲಾಖೆಯ ಅಧಿಕೃತ ಪೋರ್ಟಲ್ https://ahara.karnataka.gov.in/ ಗೆ ಭೇಟಿ ನೀಡಿ.
  • ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BPL ಕಾರ್ಡ್ ಗೆ ಅರ್ಜಿ ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಅಲ್ಲಿ ಕೇಳಲಾದ ಎಲ್ಲ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿದ ಎಲ್ಲಾ ವಿವರಗಳು ಹಾಗೂ ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ.
  • ಅಲ್ಲಿನ ಸಿಬ್ಬಂದಿಗಳು ನಿಮ್ಮ ಕುಟುಂಬದ ಸದಸ್ಯರ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ನಿಮ್ಮ ಎಲ್ಲಾ ದಾಖಲೆಗಳನ್ನು ಹಾಗೂ ವಿವರಗಳನ್ನು ಆನ್ಲೈನ್ ಪೋರ್ಟಲ್ ಮೂಲಕ ದಾಖಲಿಸುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 4, 2025 ರಿಂದ 31-03-2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುವುದಿಲ್ಲ.

ಅಂತಿಮ ತೀರ್ಮಾನ:

ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಆಯ್ದ ವರ್ಗಗಳಿಗೆ ಹೊಸದಾಗಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ನೀವೇನಾದರೂ ಹೊಸದಾಗಿ BPL ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ವರೆಗೂ ಕಾಯದೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

1 thought on “Ration: ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಆನ್ಲೈನ್ ಅರ್ಜಿಯನ್ನು ಆರಂಭಿಸಿದೆ । ಇಂದೇ ಅಪ್ಲೈ ಮಾಡಿ : BPL Arji”

Leave a Comment