ನಮಸ್ಕಾರ ಸ್ನೇಹಿತರೆ, ನಿಮಗೇನಾದರೂ ಸಮಾಜ ಸೇವೆಯ ಜೊತೆಗೆ ವೃತ್ತಿಜೀವನವನ್ನು ಪ್ರಾರಂಭಿಸಬೇಕೆನ್ನುವ ಹಂಬಲ ಇದೆಯಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ತುಮಕೂರು ಜಿಲ್ಲೆಯ ಗೃಹಲಕ್ಷಕ ದಳದಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸ್ವಯಂ ಸೇವಾ ಗೃಹರಕ್ಷಕ, ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Home Guard Recruitment 2026
ಜಸ್ಟ್ SSLC ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ ಅಂದರೆ ದಿನಾಂಕ 18-06-2026 ರಿಂದ ಆರಂಭಗೊಂಡು, ಜೂನ್ 30, 2026 ಕ್ಕೆ ಕೊನೆಗೊಳ್ಳುತ್ತದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಗೃಹರಕ್ಷದ ದಳ, ತುಮಕೂರು ಜಿಲ್ಲೆ |
| ಹುದ್ದೆಯ ಹೆಸರು | ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿ ಹುದ್ದೆಗಳು |
| ಹುದ್ದೆಯ ಸಂಖ್ಯೆ | 234 ಹುದ್ದೆಗಳು |
| ಉದ್ಯೋಗ ಸ್ಥಳ | ತುಮಕೂರು ಜಿಲ್ಲೆ – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ (ಖುದ್ದಾಗಿ ಕಚೇರಿಗೆ ಭೇಟಿ) |
ಹುದ್ದೆಯ ವಿವರ:
ತುಮಕೂರು ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಒಟ್ಟು 234 ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ತುಮಕೂರು | 27 ಹುದ್ದೆಗಳು |
| ಪಾವಗಡ | 18 ಹುದ್ದೆಗಳು |
| ಕುಣಿಗಲ್ | 17 ಹುದ್ದೆಗಳು |
| ತಾವರೆಕೆರೆ | 15 ಹುದ್ದೆಗಳು |
| ಊರ್ಡಿಕೆರೆ | 14 ಹುದ್ದೆಗಳು |
| ನೊಣ್ಣವಿನಕೆರೆ | 14 ಹುದ್ದೆಗಳು |
| ತರುವೇಕೆರೆ | 13 ಹುದ್ದೆಗಳು |
| ಮಿಡಿಗೇಶಿ | 12 ಹುದ್ದೆಗಳು |
| ಶಿರಾ | 12 ಹುದ್ದೆಗಳು |
| ಗುಬ್ಬಿ | 12 ಹುದ್ದೆಗಳು |
| ತಿಪಟೂರು | 12 ಹುದ್ದೆಗಳು |
| ಹೊನ್ನವಳ್ಳಿ | 11 ಹುದ್ದೆಗಳು |
| ಕ್ಯಾತಸಂದ್ರ | 10 ಹುದ್ದೆಗಳು |
| ಅಮೃತೂರು | 10 ಹುದ್ದೆಗಳು |
| ಚಿಕ್ಕನಾಯಕನಹಳ್ಳಿ | 10 ಹುದ್ದೆಗಳು |
| ಕೊರಟಗೆರೆ | 09 ಹುದ್ದೆಗಳು |
| ಮಧುಗಿರಿ | 07 ಹುದ್ದೆಗಳು |
| ಕಳ್ಳಂಬೆಳ್ಳ | 07 ಹುದ್ದೆಗಳು |
| ವೈ, ಏನ್ ಹೊಸಕೋಟೆ | 04 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ತುಮಕೂರು ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹರಕ್ಷಕ ಅಥವಾ ಗೃಹರಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಗೃಹರಕ್ಷಕ ಅಥವಾ ಗೃಹರಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಹಾಗೂ ಗರಿಷ್ಟ 50 ವರ್ಷದ ಒಳಗೆ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಯಾವುದೇ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ:
ತುಮಕೂರು ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ತುಮಕೂರು ಗೃಹರಕ್ಷಕ ಹುದ್ದೆಗೆ ಯಾವುದೇ ಸ್ಥಿರವಾದ ಮಾಸಿಕ ವೇತನ ಇರುವುದಿಲ್ಲ. ಇದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕೆಲಸ ಮಾಡುವ ದಿನಗಳಿಗೆ ಮಾತ್ರ ದಿನ ಭತ್ಯೆಯನ್ನು ಪಡೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- SSLC ಅಂಕಪಟ್ಟಿ
- ಜನ್ಮ ದಿನಾಂಕ ದೃಢೀಕರಣ ಪತ್ರ
- ವೋಟರ್ ಐಡಿ
- ರೇಷನ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಫೋಟೋ
- ದೈಹಿಕ ಸದೃಢ ಪ್ರಮಾಣಪತ್ರ
- ಬ್ಯಾಂಕ್ ಖಾತೆಯ ವಿವರ
- ಹಾಗೂ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಅಭ್ಯರ್ಥಿಗಳು ಮೊದಲು ತುಮಕೂರಿನಲ್ಲಿರುವ ಬಟವಾಡಿಯ ಜಿಲ್ಲಾ ಗೃಹರಕ್ಷಕ ದಳದ ಕಚೇರಿಗೆ ಭೇಟಿ ನೀಡಿ.
- ಅಲ್ಲಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆಯಿರಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ
- ನಂತರ ಎಲ್ಲ ದಾಖಲೆಗಳನ್ನು ಹಾಗೂ ಭರ್ತಿ ಮಾಡಿರುವ ವಿವರಗಳನ್ನು ಇನ್ನೊಮ್ಮೆ ಪರಿಶೀಲಿಸಿ ಕಚೇರಿಗೆ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ದೈಹಿಕ ಸದೃಢ ಪರೀಕ್ಷೆ:
ಮೊದಲ ಹಂತದಲ್ಲಿ ಇಲಾಖೆಯು ನಿಗದಿಪರಿಸಿರುವಂತೆ ಅಭ್ಯರ್ಥಿಗಳು ಎತ್ತರ ಹಾಗೂ ತೂಕವನ್ನು ಹೊಂದಿದ್ದಾರಾ ಎಂದು ಅಳೆಯಲಾಗುತ್ತದೆ. ಹಾಗೂ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಓಟದ ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ದೈಹಿಕ ಆರೋಗ್ಯವಾಗಿದ್ದಾರೆಯೇ ಎಂದು ಅಳೆಯಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ದಾಖಲೆಗಳನ್ನು ಪರಿಶೀಲಿಸಲು ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು SSLC ಅಲ್ಲಿ ಎಷ್ಟು ಅಂಕಗಳನ್ನು ಗಳಿಸಿದ್ದಾರೆ ಎಂದು ಪರಿಶೀಲಿಸಲಾಗುತ್ತದೆ.
- ಮೆರಿಟ್ ಪಟ್ಟಿ ಮತ್ತು ಸಂದರ್ಶನ:
ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆದರದ ಮೇಲೆ ಹಾಗೂ ದೈಹಿಕ ಸಾಮರ್ಥ್ಯದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 18-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ತುಮಕೂರು ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜೂನ್ 25 ರೊಳಗೆ ಜಿಲ್ಲಾ ಗೃಹರಕ್ಷಕದಳ ಕಚೇರಿ, ಬಟವಾಡಿ ತುಮಕೂರಿಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಂಡು ದಿನಾಂಕ 30-06-2026 ರೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- RDWSD: ಶಿವಮೊಗ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜೂನ್ 30 ಕೊನೆಯ ದಿನಾಂಕ
- Jayadeva Hospital: ರೂ. 2,18,200/- ವೇತನ! ಜಯದೇವ ಆಸ್ಪತ್ರೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ 2026 | ಜೂನ್ 25 ಕೊನೆಯ ದಿನಾಂಕ
- KMF SHIMUL: ರೂ. 1,55,200/- ವೇತನ! ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ । ಜುಲೈ 14 ಕೊನೆಯ ದಿನಾಂಕ
- DC Office: ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸರ್ಕಾರಿ ಉದ್ಯೋಗವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
- Central Bank : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026: 4,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!