ನಮಸ್ಕಾರ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
CRDR Recruitment 2026
ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು 22-06-2026 ದಿಂದ ಜೂಲೈ 22, 2026 ರ ವರೆಗೂ ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೂರು ಹಂತಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ KEA ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ |
| ಹುದ್ದೆಯ ಹೆಸರು | ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | 1421 ಹುದ್ದೆಗಳು |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-07-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯು ಖಾಲಿ ಇರುವ ಸಶಸ್ತ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ PUC ಪಾಸ್ ಆಗಿರುವ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ 18 ವರ್ಷದಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ | 1421 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಸಶಸ್ತ ಪೊಲೀಸ್ ಕಾನ್ಸ್ಟೇಬಲ್:
ಸಶಸ್ತ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪಿಯೂಸಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಇಲಾಖೆಯ ನಿಯಮಾನುಸಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ವರ್ಗಗಳಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನದ ಮೂಲಕ ಪಾವತಿಸಬೇಕಾಗುತ್ತದೆ.
- ಸಾಮಾನ್ಯ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 750/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1, ಅಂಗವಿಕ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 500/-
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500/- ದಿಂದ ರೂ. 76,100/- ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಈ ಮೂಲ ವೇತನಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ಯುನಿಫಾರ್ಮ್ ಅಂಡ್ ಲಾಂಡ್ರಿ ಅಲೋವೆನ್ಸಸ್, ವೈದ್ಯಕೀಯ ಭತ್ಯೆ ಮತ್ತು ವಿಶೇಷ ರಿಸ್ಕ್ ಭತ್ಯೆ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು KEA ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗವನ್ನು ತೆರೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ವಸ್ತು ನಿಷ್ಠ ಬಹುಆಯ್ಕೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿದ್ದು, ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಇತಿಹಾಸ, ಭೂಗೋಳ, ವಿಜ್ಞಾನ, ಮಾನಸಿಕ ಸಾಮರ್ಥ್ಯ, ಪ್ರಚಲಿತ ವಿದ್ಯಮಾನ, ಸಂವಿಧಾನಗಳ ಕುರಿತು ಪ್ರಶ್ನೆಗಳನ್ನು ಕೇಳಲಾಗುತ್ತದೆ.
- ದೈಹಿಕ ಪರೀಕ್ಷೆ:
ಲಿಖಿತ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದೈಹಿಕ ಪರೀಕ್ಷೆಗೆ ಕರೆಯಲಾಗುತ್ತದೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ದೈಹಿಕ ಗುಣಮಟ್ಟದ ಪರೀಕ್ಷೆ, ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ವೈದ್ಯಕೀಯ ತಪಾಸಣೆ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಹಾಗೂ ದೈಹಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ದಿನಾಂಕ | 19-06-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 22-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆಗೆ ಸಿದ್ಧತೆಯನ್ನು ಮಾಡಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- SBI Link: ರೂ. 85,920/- ವೇತನ! ಎಸ್ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- Fireman: ರೂ. 1,16,000 ವೇತನ! MRPL ನಲ್ಲಿ ಫೈರ್ ಆಫೀಸರ್ ಹುದ್ದೆಗಳ ನೇಮಕಾತಿ 2026 । ಜುಲೈ 16 ಕೊನೆಯ ದಿನಾಂಕ
- Home Guard: SSLC ಪಾಸ್ ಅಭ್ಯರ್ಥಿಗಳಿಗೆ ತುಮಕೂರು ಗೃಹರಕ್ಷಕ ದಳದಲ್ಲಿ ಭರ್ಜರಿ ಉದ್ಯೋಗ ಅವಕಾಶ! ಜೂನ್ 30 ಕೊನೆಯ ದಿನಾಂಕ
- RDWSD: ಶಿವಮೊಗ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜೂನ್ 30 ಕೊನೆಯ ದಿನಾಂಕ
- KMF SHIMUL: ರೂ. 1,55,200/- ವೇತನ! ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ । ಜುಲೈ 14 ಕೊನೆಯ ದಿನಾಂಕ