ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯದ ದಾರಿ ದೀಪವಾಗಿದ್ದು, ಆದರೆ ಇಂದಿನ ದಿನಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವ ಹಂಬಲಗಳಿದ್ದರೂ ಕೂಡ ಬಡತನ, ನಗರಗಳಲ್ಲಿನ ದುಬಾರಿ ಜೀವನ ವೆಚ್ಚ ಹಾಗೂ ವಸತಿ ಸೌಕರ್ಯಗಳ ಸಮಸ್ಯೆಯಿಂದಾಗಿ ಎಷ್ಟೋ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸುವುದನ್ನು ಕಾಣಬಹುದು.
Vidyasiri Scholarship 2026
ಇಂತಹ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಜಾರಿಗೊಳಿಸಿದ ಅತ್ಯಂತ ಯಶಸ್ವಿ ಯೋಜನೆಯ ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆ. ಸರ್ಕಾರದ ಈ ಒಂದು ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಕೂಡ ರೂ. 1,500/- ರಂತೆ ವರ್ಷಕ್ಕೆ ರೂ. 15,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಸರ್ಕಾರಿ ವಸತಿ ನಿಲಯಗಳಲ್ಲಿ ಪ್ರವೇಶ ಸಿಗದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಎಂಬೆಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿಸಿಕೊಳ್ಳೋಣ.

ಯೋಜನೆಯ ಕಿರು ವಿಮರ್ಶೆ:
| ಯೋಜನೆಯನ್ನು ಅನುಷ್ಠಾನ ಗೊಳಿಸಿದ ಸರ್ಕಾರ | ಕರ್ನಾಟಕ ಸರ್ಕಾರ |
| ಯೋಜನೆಯ ಹೆಸರು | ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆ |
| ಅರ್ಹ ವಿದ್ಯಾರ್ಥಿಗಳು | ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು |
| ಮಾಸಿಕ ಸಹಾಯಧನ | ಮಾಸಿಕ ರೂ. 1,500/- |
| ಒಟ್ಟು ಅವಧಿ | ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ತಿಂಗಳುಗಳು |
| ಅರ್ಹ ಕೋರ್ಸ್ ಗಳು | ಮೆಟ್ರಿಕ್ ನಂತರದ ಕೋರ್ಸ್ ಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ (SSP ಪೋರ್ಟಲ್) |
ಏನಿದು ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆ?
ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಯು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಾರಿಗೆ ತಂದಿರುವ ಶೈಕ್ಷಣಿಕ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯ ಬಹು ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ನೆರವನ್ನು ನೀಡುವುದಾಗಿದೆ.
ಕರ್ನಾಟಕ ಸರ್ಕಾರವು ಈ ಒಂದು ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆರ್ಥಿಕವಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರತಿ ತಿಂಗಳು ರೂ. 1500/- ದಂತೆ 10 ತಿಂಗಗಳುಗಳಿಗೆ 15,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿವೇತನದಿಂದಾಗಿ ತಮ್ಮ ಆಹಾರ, ವಸತಿ ವೆಚ್ಚವನ್ನು ಭರಿಸಲು ನೆರವಾಗುತ್ತದೆ ಹಾಗೂ ಕುಟುಂಬದ ಮೇಲಿನ ಆರ್ಥಿಕ ಹೊರೆಯು ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ, ಹಣಕಾಸಿನ ಚಿಂತೆ ಇಲ್ಲದೆ ತಮ್ಮ ಅಧ್ಯಯನಕ್ಕೆ ಹೆಚ್ಚು ಗಮನ ಕೊಡಬಹುದಾಗಿದೆ.
ಯೋಜನೆಯ ಉದ್ದೇಶ:
- ಉನ್ನತ ಶಿಕ್ಷಣಕ್ಕೆ ಉತ್ತೇಜನವನ್ನು ನೀಡುವುದು:
SSLC ವರೆಗೆ ಯಾವುದೇ ಹಣಕಾಸಿನ ತೊಂದರೆಗಳಿಲ್ಲದೆ ಶಿಕ್ಷಣವನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ PUC ನಂತರದ ಶಿಕ್ಷಣದ ಹದಿ ಸುಗಮವಾಗಿರಲಿ ಎನ್ನುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ವಿದ್ಯಾಸಿರಿ ಯೋಜನೆಯಡಿಯಲ್ಲಿ ಪ್ರತಿ ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವೆಚ್ಚವನ್ನು ಭರಿಸಲು ಪ್ರತಿ ತಿಂಗಳು ರೂ. 1500/- ಶೈಕ್ಷಣಿಕ ನೆರವನ್ನು ಒದಗಿಸಲಾಗುತ್ತದೆ.
- ವಸತಿ ಹಾಗೂ ಆಹಾರ ವೆಚ್ಚವನ್ನು ಕಡಿಮೆ ಮಾಡುವುದಾಗಿದೆ:
ಪ್ರತಿ ದಿನ ಮನೆಯಿಂದ ಕಾಲೇಜುಗಳಿಗೆ ಅಪ್ ಅಂಡ್ ಡೌನ್ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿಯಲ್ಲಿ ಸಹಾಯಧನವನ್ನು ಒದಗಿಸಿ ಅವರು ತಮ್ಮ ಆಹಾರ ಮತ್ತು ವಸತಿ ವೆಚ್ಚಗಳನ್ನು ಭರಿಸಲು ನೆರವಾಗುವುದು. ಇದರಿಂದಾಗಿ ವಿದ್ಯಾರ್ಥಿಗಳ ದಿನನಿತ್ಯದ ಖರ್ಚಿನ ಭಾರ ಕಡಿಮೆಯಾಗುತ್ತದೆ.
- ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವುದನ್ನು ತಡೆಗಟ್ಟುವುದು:
ಹಣಕಾಸಿನ ಕೊರತೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚುತ್ತಿರುವುದರಿಂದ ಅಂತಹ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿಯಲ್ಲಿ ಆರ್ಥಿಕ ನೆರವನ್ನು ಒದಗಿಸಿ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವುದನ್ನು ತಡೆಗಟ್ಟುವುದು ಈ ಯೋಜನೆಯ ಉದ್ದೇಶವಾಗಿದೆ.
- ಸಮಾನ ಶಿಕ್ಷಣ ಅವಕಾಶವನ್ನು ಒದಗಿಸುವುದು:
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ನೆರವನ್ನು ಒದಗಿಸಿ ಸಮಾನ ಶೈಕ್ಷಣಿಕ ಅವಕಾಶವನ್ನು ಒದಗಿಸಿ ಸಾಮಾಜಿಕ ಸಮಾನತೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯಡಿಯಲ್ಲಿ ಅರ್ಹವಾದ ಕೋರ್ಸ್ ಗಳು:
SSLC ಮುಗಿಸಿದ ನಂತರ ಸರ್ಕಾರದಿಂದ ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಎಲ್ಲ ಕೋರ್ಸ್ ಗಳಿಗೂ ವಿದ್ಯಾಸಿರಿ ಯೋಜನೆಯಡಿಯಲ್ಲಿ ಸಹಾಯಧನವನ್ನು ಸಿಗುತ್ತದೆ. ಅವುಗಳೆಂದರೆ,
- PUC ಕೋರ್ಸ್:
ವಿದ್ಯಾಸಿರಿ ಯೋಜನೆಯಡಿಯಲ್ಲಿ ಆರ್ಟ್ಸ್, ಕಾಂಮೆರ್ಸ್ ಹಾಗೂ ಸೈನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹದಾಗಿದೆ.
- ವೃತ್ತಿಪರ ಡಿಪ್ಲೊಮಾ ಕೋರ್ಸ್ ಗಳು:
ಪಾಲಿಟೆಕ್ನಿಕ್ ಮತ್ತು ವಿವಿಧ ತಾಂತ್ರಿಕ ಡಿಪ್ಲೊಮಾ ಕೋರ್ಸ್ ಗಳು
- ಐಟಿಐ ಕೋರ್ಸ್ ಗಳು
ಕೈಗಾರಿತ ತರಬೇತಿ ಸಂಸ್ಥೆಗಳು ಹಾಗೂ ಟ್ರೇಡ್ ಗಳು
- ಪದವಿ ಕೋರ್ಸ್ ಗಳು:
ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಹಾಗೂ ಇತ್ಯಾದಿ ಕೋರ್ಸ್ ಗಳು
- ವೃತ್ತಿಪರ ಪದವಿ ಕೋರ್ಸ್ ಗಳು:
ಬಿಇ, ಬಿಟೆಕ್, ವೈದ್ಯಕೀಯ, ನರ್ಸಿಂಗ್, ಕೃಷಿ ಬಿಎಸ್ಸಿ, ಕಾನೂನು ಪದವಿ ಮತ್ತು ಫಾರ್ಮಸಿ ಕೋರ್ಸ್ ಗಳು
- ಸ್ನಾತಕೋತ್ತರ ಪದವಿ:
ಎಂಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಸಿಎ ಹಾಗೂ ಇತ್ಯಾದಿ ಕೋರ್ಸ್ ಗಳು
- ಸಂಶೋಧನಾ ಕೋರ್ಸ್ ಗಳು:
ಪಿಹೆಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
ಅರ್ಹತಾ ಮಾನದಂಡಗಳು:
- ಕರ್ನಾಟಕದ ನಿವಾಸಿಯಾಗಿರಬೇಕು
- ವಿದ್ಯಾರ್ಥಿಯು ಹಿಂದುಳಿದ ವರ್ಗಗಳು (OBC), ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡ (ST) ವರ್ಗಗಳಿಗೆ ಸೇರಿದವರಾಗಿರಬೇಕು.
- ಪಿಯುಸಿ ನಂತರದ ಕೋರ್ಸ್ಗಳಾದ ಪದವಿ, ಸ್ನಾತಕೋತ್ತರ, ವೃತ್ತಿಪರ ಅಥವಾ ತಾಂತ್ರಿಕ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- ಸರ್ಕಾರ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯೊಳಗೆ ವಿದ್ಯಾರ್ಥಿಯ ಕುಟುಂಬದ ಆದಾಯ ಇರಬೇಕು.
- ವಿದ್ಯಾರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಹೊಂದಿರಬೇಕು.
- ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವಿದ್ಯಾರ್ಥಿಗಳ ವಾಸಸ್ಥಳವು ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದಲ್ಲಿರಬೇಕು.
- ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 65% ಅಂಕಗಳನ್ನು ಗಳಿಸಿರಬೇಕು (ಪ್ರವರ್ಗ -1 ಅಭ್ಯರ್ಥಿಗಳಿಗೆ 55%)
- ಒಂದು ಕುಟುಂಬದ ಇಬ್ಬರು ಗಂಡು ಮಕ್ಕಳು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಹೆಣ್ಣು ಮಕ್ಕಳಿಗೆ ಇದು ಅನ್ವಹಿಸುವುದಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ
- ಪಾಸ್ಪೋರ್ಟ್ ಅಳತೆಯ ಫೋಟೋ
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ದಾಖಲಾತಿ ಪ್ರಮಾಣಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರ
- ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಮೊದಲು SSP ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ಅಪ್ಲಿಕೇಶನ್ ಕಾರ್ನರ್ ವಿಭಾಗಕ್ಕೆ ಹೋಗಿ, ನ್ಯೂ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಸ್ವೀಕೃತಿ ರಶೀದಿಯನ್ನು ಪ್ರಿಂಟ್ ತಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಪ್ರಸ್ತುತ ಚಾಲ್ತಿಯಲ್ಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-08-2026 |
ಅಂತಿಮ ತೀರ್ಮಾನ:
ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಲ ತುಂಬುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ಆಹಾರ, ವಸತಿ ಹಾಗೂ ಇತರ ಶೈಕ್ಷಣಿಕ ವೆಚ್ಚಗಳನ್ನು ಸುಲಭವಾಗಿ ನಿರ್ವಹಿಸಬಹುದು. ಇದರಿಂದ ಅವರು ಹಣಕಾಸಿನ ತೊಂದರೆಗಳನ್ನು ಮೀರಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತದೆ.ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ವಿದ್ಯಾರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |