ನಮಸ್ಕಾರ ಸ್ನೇಹಿತರೆ, ನೀವೇನಾದರೂ ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದಿರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಕರ್ನಾಟಕ ಕಂದಾಯ ಇಲಾಖೆಯು ಒಟ್ಟು 22 ಜಿಲ್ಲೆಗಳಲ್ಲಿ ಖಾಲಿ ಇರುವ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅನುಮೋದನೆಯನ್ನು ನೀಡಿದೆ.
VAO Recruitment 2026
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಅಂತಿಮ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಜಿಲ್ಲಾವಾರು ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ? ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಏನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಕರ್ನಾಟಕ ಕಂದಾಯ ಇಲಾಖೆ |
| ಹುದ್ದೆಯ ಹೆಸರು | ಗ್ರಾಮ ಆಡಳಿತ ಅಧಿಕಾರಿ |
| ಹುದ್ದೆಯ ಸಂಖ್ಯೆ | ಒಟ್ಟು 572 ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಕಂದಾಯ ಇಲಾಖೆಯು ಪ್ರಸ್ತುತ ಸಾಲಿನಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆಯನ್ನು ಪಡೆದಿದ್ದು, ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಬೆಳಗಾವಿ ವಿಭಾಗ ಹಾಗೂ ಕಲಬುರಗಿ ವಿಭಾಗ ಸೇರಿದಂತೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ನೇರ ನೇಮಕಾತಿ ಪ್ರಕ್ರಿಯೆ ನಡೆಯುತ್ತದೆ.
ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಾಗೂ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 38 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಹುದ್ದೆಯ ವಿವರ:
ಕಂದಾಯ ಇಲಾಖೆಯು ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಆದೇಶದ ಪ್ರಕಾರ ಭರ್ತಿ ಮಾಡಲು ನಿರ್ಧರಿಸಿದ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಜಿಲ್ಲೆಗಳ ಹೆಸರು | ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳ ಸಂಖ್ಯೆ |
| ರಾಯಚೂರು | 5 |
| ಚಿಕ್ಕಮಗಳುರು | 10 |
| ಉಡುಪಿ | 10 |
| ಗದಗ | 14 |
| ಹಾವೇರಿ | 15 |
| ಚಿತ್ರದುರ್ಗ | 15 |
| ಬೀದರ್ | 16 |
| ಬಾಗಲಕೋಟೆ | 16 |
| ಶಿವಮೊಗ್ಗ | 18 |
| ಬೆಂಗಳೂರು ನಗರ | 20 |
| ಚಿಕ್ಕಬಳ್ಳಾಪುರ | 21 |
| ಕೋಲಾರ | 22 |
| ಬೆಂಗಳೂರು ಗ್ರಾಮಾಂತರ | 29 |
| ಬೆಂಗಳೂರು ದಕ್ಷಿಣ (ರಾಮನಗರ) | 30 |
| ಚಾಮರಾಜನಗರ | 31 |
| ಕಲಬುರಗಿ | 35 |
| ಹಾಸನ | 35 |
| ದಕ್ಷಿಣ ಕನ್ನಡ | 37 |
| ಮೈಸೂರು | 45 |
| ಬೆಳಗಾವಿ | 48 |
| ತುಮಕೂರು | 50 |
| ಮಂಡ್ಯ | 50 |
ಶೈಕ್ಷಣಿಕ ಅರ್ಹತೆ:
- ಗ್ರಾಮ ಆಡಳಿತ ಅಧಿಕಾರಿ:
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ 12 ನೇ ತರಗತಿ ಅಥವಾ PUC ಅಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 38 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- 2A, 2B, 3A, 3B ಅಭ್ಯರ್ಥಿಗಳು: 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು: 5 ವರ್ಷ
ಅರ್ಜಿ ಶುಲ್ಕ:
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಈ ಒಂದು ವಿಷಯದ ಕುರಿತು ನಿಖರವಾದ ಮಾಹಿತಿಯನ್ನು ಇಲಾಖೆಯು ಹೊರಡಿಸಲಾಗುವ ನೇಮಕಾತಿ ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
ಸಾಮಾನ್ಯವಾಗಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400/- ದಿಂದ ರೂ. 42,000/- ವೇತನವನ್ನು ನೀಡಲಾಗುತ್ತದೆ ಹಾಗೂ ಅಭ್ಯರ್ಥಿಗಳು ಮೂಲ ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ವೈದ್ಯಕೀಯ ಭತ್ಯೆ ಸೇರಿದಂತೆ ಇನ್ನಿತರ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಬಿದ್ದ ತಕ್ಷಣ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿಂದ ಹಂತವನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಮೊದಲು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗವನ್ನು ತೆರೆದು VOA Recruitment 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಮೊದಲು ವೆಬ್ಸೈಟ್ ಗೆ ಭೇಟಿ ನೀಡುತ್ತಿದ್ದರೆ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ:
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರ ಹಾಗೂ ಮೀಸಲಾತಿ ಪ್ರಮಾಣಪತ್ರಗಳನ್ನು ಪರಿಶೀಲಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಕಂದಾಯ ಇಲಾಖೆಯು 22 ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅನುಮೋದನೆ ಪಡೆದಿದ್ದು, ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಂಡು ನಿಗದಿಪಡಿಸುವ ದಿನಾಂಕದಂದು ಅರ್ಜಿ ಸಲ್ಲಿಸಿ
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- Air Force: ಭಾರತೀಯ ವಾಯುಪಡೆಯಲ್ಲಿ ಬೃಹತ್ ನೇಮಕಾತಿ! PUC ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ । ಜುಲೈ 26 ಕೊನೆಯ ದಿನಾಂಕ
- GramPanchayat Application: ಗ್ರಾಮ ಪಂಚಾಯತಿ ಭರ್ಜರಿ ನೇಮಕಾತಿ 2026! PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 8 ಕೊನೆಯ ದಿನಾಂಕ
- SBI Link: ರೂ. 85,920/- ವೇತನ! ಎಸ್ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- Fireman: ರೂ. 1,16,000 ವೇತನ! MRPL ನಲ್ಲಿ ಫೈರ್ ಆಫೀಸರ್ ಹುದ್ದೆಗಳ ನೇಮಕಾತಿ 2026 । ಜುಲೈ 16 ಕೊನೆಯ ದಿನಾಂಕ
- Home Guard: SSLC ಪಾಸ್ ಅಭ್ಯರ್ಥಿಗಳಿಗೆ ತುಮಕೂರು ಗೃಹರಕ್ಷಕ ದಳದಲ್ಲಿ ಭರ್ಜರಿ ಉದ್ಯೋಗ ಅವಕಾಶ! ಜೂನ್ 30 ಕೊನೆಯ ದಿನಾಂಕ