Anganwadi: ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2026! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜುಲೈ 30 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಗದಗ ಜಿಲ್ಲೆಯಲ್ಲಿ ವೃತ್ತಜೀವನವನ್ನು ಪ್ರಾರಂಭಿಸಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

Anganwadi Recruitment 2026


ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಜಸ್ಟ್ SSLC ಆಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು,ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 22-06-2026 ರಿಂದ 30-07-2026 ವರೆಗೂ ಕಾಲಾವಕಾಶ ನೀಡಲಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಇರುವುದಿಲ್ಲ. ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾಗಿರುವ ತಾಲ್ಲೂಕುವಾರು ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Anganwadi

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ
ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ಹುದ್ದೆಗಳ ಸಂಖ್ಯೆ ಒಟ್ಟು 168 ಹುದ್ದೆಗಳು
ಉದ್ಯೋಗ ಸ್ಥಳ ಗದಗ ಜಿಲ್ಲೆ – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-07-2026
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ

ಹುದ್ದೆಯ ಬಗ್ಗೆ:

ಗದಗ ಜಿಲ್ಲೆಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ 168 ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಜಸ್ಟ್ SSLC ಪಾಸ್ ಆಗಿರುವ ಕನಿಷ್ಠ 19 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳು ಸ್ವಾವಲಂಬಿ ಜೀವನವನ್ನು ನಡೆಸಲು ಹಾಗೂ ಗೌರವಯುತವಾಗಿ ವೃತ್ತಿಜೀವನವನ್ನು ಪ್ರಾರಂಭಿಸಲು ಇದೊಂದು ಉತ್ತಮ ಅವಕಾಶವಾಗಿದೆ.

ತಾಲ್ಲೂಕುವಾರು ಹುದ್ದೆಯ ವಿವರ:

ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಗದಗ ಜಿಲ್ಲೆಯ ವಿವಿಧ ತಾಲ್ಲೂಕುವಾರು ಹಂಚಿಕೆ ಮಾಡಲಾಗಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ವಿವರ:
ತಾಲ್ಲೂಕುಗಳು ಹುದ್ದೆಗಳ ಸಂಖ್ಯೆ
ನರಗುಂದ 5 ಹುದ್ದೆಗಳು
ಗದಗ 7 ಹುದ್ದೆಗಳು
ಶಿರಹಟ್ಟಿ 8 ಹುದ್ದೆಗಳು
ಮುಂಡರಗಿ 8 ಹುದ್ದೆಗಳು
ರೋಣ 9 ಹುದ್ದೆಗಳು
  • ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ
ತಾಲ್ಲೂಕುಗಳು ಹುದ್ದೆಗಳ ಸಂಖ್ಯೆ
ನರಗುಂದ 20 ಹುದ್ದೆಗಳು
ಶಿರಹಟ್ಟಿ21 ಹುದ್ದೆಗಳು
ಮುಂಡರಗಿ22 ಹುದ್ದೆಗಳು
ರೋಣ27 ಹುದ್ದೆಗಳು
ಗದಗ41 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನದಂಡಗಳ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಪಾಸ್ ಆಗಿರಬೇಕು.

ವಯೋಮಿತಿ ವಿವರ:

ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಸರ್ಕಾರದ ಮಾನದಂಡಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ತಮ್ಮ ವ್ಯಾಪ್ತಿಯ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಾವಳಿಗಳ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಮೊದಲು ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂದಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾಗಿರುವ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
  • ಶೈಕಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ವಯಸ್ಸಿನ ಪುರಾವೆ, ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ
  • ಅವುಗಳನ್ನು ಒಂದು ಲಕೋಟೆಗೆ ಹಾಗಿ ಅದರ ಮೇಲೆ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತೀರಿ ಎಂದು ದಪ್ಪ ಅಕ್ಷರದಲ್ಲಿ ಬರೆದು ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ:

ತಾಲ್ಲೂಕುಗಳು ಅರ್ಜಿ ಸಲ್ಲಿಸುವ ವಿಳಾಸ
ಶಿರಹಟ್ಟಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಟ್ಟಡ, ಪೊಲೀಸ್ ಠಾಣೆ ಹತ್ತಿರ, ಶಿರಹಟ್ಟಿ
ನರಗುಂದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ, ತಾಲ್ಲೂಕು ಆಡಳಿತ ಕಟ್ಟಡ, ಕೊಠಡಿ ಸಂಖ್ಯೆ 17, ಹುಬ್ಬಳ್ಳಿ – ಸೊಲ್ಲಾಪುರ ರಸ್ತೆ, ನರಗುಂದ
ರೋಣ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ, ಎ.ಎಂ ಸಾನಿ ಕಟ್ಟಡ, ಗದಗ ರಸ್ತೆ, ರೋಣ
ಮುಂಡರಗಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ, ತಾಲ್ಲೂಕು ಬಾಲ ಭವನ ಕಟ್ಟಡ, ವಲಯ ಅರಣ್ಯಾಧಿಕಾರಿಗಳ ಕಚೇರಿಯ ಪಕ್ಕದಲ್ಲಿ, ಹಳೆ ಕಲಕೇರಿ ರಸ್ತೆ, ಮುಂಡರಗಿ
ಗದಗ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ, ಜಿಲ್ಲಾ ಬಾಲಕರ ಮಕ್ಕಳ ಕೇಂದ್ರ, ಪಾಳಾ, ಬಾದಾಮಿ ರಸ್ತೆ, ಹಾಕಿ ಮೈದಾನದ ಹತ್ತಿರ, ಬೆಟಗೇರಿ, ಗದಗ

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅವರು SSLC ಅಲ್ಲಿ ಗಳಿಸಿದ ಅಂಕಗಳಿಗೆ ಅನುಗುಣವಾಗಿ ಮೆರಿಟ್ ಪಟ್ಟಿಯನ್ನು ಸದ್ದಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 22-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ PDF ಲಿಂಕ್ (ಗದಗ)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ PDF ಲಿಂಕ್ (ಮುಂಡರಗಿ)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ PDF ಲಿಂಕ್ (ರೋಣ)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ PDF ಲಿಂಕ್ (ನರಗುಂದ)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ PDF ಲಿಂಕ್ (ಶಿರಹಟ್ಟಿ)ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಗದಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಒಟ್ಟು 168 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಜಸ್ಟ್ SSLC ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ವಾವಲಂಬಿ ಜೀವನವನ್ನು ನಡೆಸಬೇಕೆಂದು ಕನಸು ಕಾಣುತ್ತಿರುವ ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಸಂಬಂಧಿತ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಗೌರವಯುತ ಹುದ್ದೆಯನ್ನು ತಮ್ಮದಾಗಿಸಿಕೊಂಡು ಸಮಾಜದಲ್ಲಿ ಗೌರವಯುತವಾಗಿ ಜೀವನವನ್ನು ನಡೆಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment