ನಮಸ್ಕಾರ ಸ್ನೇಹಿತೆರೆ, ನೀವೇನಾದರೂ ಕೃಷಿ ಇಲಾಖೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ರಾಮನಗರ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Agriculture Department Recruitment 2026
ಈ ಒಂದು ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ವಲಯಗಲ್ಲಿ ಪ್ರಾಯೋಗಿಕ ಅನುಭವವನ್ನು ಸಹ ಹೊಂದಿರಬೇಕು.
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 25-06-2026 ರಿಂದ 10-07-2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾಗಿರುವ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಗೆ ವಿಶ್ಲೇಷಣೆ:
| ನೇಮಕಾತಿ ಸಂಸ್ಥೆ | ಕೃಷಿ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ, ರಾಮನಗರ (ಬೆಂಗಳೂರು ದಕ್ಷಿಣ ಜಿಲ್ಲೆ) |
| ಹುದ್ದೆಗಳ ಹೆಸರು | ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು |
| ಹುದ್ದೆಗಳ ಸಂಖ್ಯೆ | ಒಟ್ಟು 2 ಹುದ್ದೆಗಳು |
| ಉದ್ಯೋಗ ಸ್ಥಳ | ರಾಮನಗರ/ ಬೆಂಗಳೂರು ದಕ್ಷಿಣ ಜಿಲ್ಲೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-07-2026 |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ ಮೂಲಕ |
ಹುದ್ದೆಯ ವಿವರಣೆ:
ಕೃಷಿ ಇಲಾಖೆಯಲ್ಲಿ ಬರುವ ಜಂಟಿ ನಿರ್ದೇಶಕರ ಕಚೇರಿಯು ಆತ್ಮ ಯೋಜನೆಯಡಿಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ,
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು | 2 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವಂತೆ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರ ಅನುಭವವನ್ನು ಹೊಂದಿರಬೇಕಾಗುತ್ತದೆ.
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು:
- ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಎಸ್ಸಿ (ಕೃಷಿ) ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
- ಇದರೊಂದಿಗೆ ಅಭ್ಯರ್ಥಿಗಳು ಕೃಷಿ ಅಥವಾ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕಾಲ ಕೆಲಸ ಮಾಡಿದ ಪ್ರಾಯೋಗಿಕ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕೃಷಿ ಇಲಾಖೆಯ ವಿವಿಧ ಮಾನದಂಡಗಳ ಪ್ರಕಾರ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಅಭ್ಯರ್ಥಿಗಳ ಗರಿಷ್ಟ ವಯೋಮಿತಿಯನ್ನು ಕೃಷಿ ಇಲಾಖೆಯ ಅಧಿಕೃತ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳ ಸರ್ಕಾರದ ನಿಯಮಾವಳಿಗಳ ಪ್ರಕಾರ ಹಾಗೂ ಕೃಷಿ ಇಲಾಖೆಯ ವಿವಿಧ ಮಾರ್ಗಸೂಚಿಗಳ ಅನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೃಷಿ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಿಲ್ಲ. ಇದರ ಬಗ್ಗೆ ನಿಖರವಾದ ಮಾಹಿತಿ ಬೇಕಿದ್ದರೆ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ.
ವೇತನ ಶ್ರೇಣಿ:
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆತ್ಮ ಯೋಜನೆಯ ನಿಯಮಾವಳಿಗಳ ಪ್ರಕಾರ, ಮಾಸಿಕ ಸ್ಥಿರ ಗೌರವಧನವನ್ನು ನೀಡಲಾಗುತ್ತದೆ. ಇದು ಗುತ್ತಿಗೆ ಆಧಾರಿತ ಹುದ್ದೆ ಆಗಿರುವುದರಿಂದ ಯಾವುದೇ ಹೆಚ್ಚುವರಿ ಭತ್ಯೆ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ರಾಮನಗರದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ. ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಳ್ಳಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾಗಿರುವ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರಗಳನ್ನು ಭರ್ತಿ ಮಾಡಿ.
- ನಂತರ ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ವಯಸ್ಸಿನ ಪುರಾವೆ ಹಾಗೂ ಇನ್ನು ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
- ಎಲ್ಲ ಅಗತ್ಯ ದಾಖಲೆಗಳನ್ನು ಒಳಗೊಂಡ ಅಪ್ಲಿಕೇಶನ್ ಫಾರ್ಮ್ ಅನ್ನು ಒಂದು ಲಕೋಟೆಗೆ ಹಾಕಿ ಸೀಲ್ ಮಾಡಿ, ನಿಗದಿತ ದಿನಾಂಕದೊಳಗಾಗಿ ಈ ಕೆಳಗೆ ತಿಳಿಸಲಾದ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
# 302, ಜಂಟಿ ಕೃಷಿ ನಿರ್ದೇಶಕರ ಕಚೇರಿ,
ಕೃಷಿ ಇಲಾಖೆ, 3 ನೇ ಮಹಡಿ, ಜಿಲ್ಲಾ ಪಂಚಾಯತ್ ಭವನ,
ಬಿ.ಎಂ. ರಸ್ತೆ, ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ -562159
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಕಡ್ಡಾಯವಾಗಿ ಹೊಂದಿರಬೇಕಾದ ಅನುಭವಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಶಾಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ನೇಮಕಾತಿ ಸಮೀತಿಯು ನೇರ ಸಂದರ್ಶನದ ಮೂಲಕ ಅಥವಾ ಕೌನ್ಸೆಲಿಂಗ್ ಮೂಲಕ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನಾಂಕ | 25-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ರಾಮನಗರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯು ಆತ್ಮ ಯೋಜನೆಯಡಿಯಲ್ಲಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ರಾಮನಗರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 10, 2026 ರ ಒಳಗೆ ಮೇಲೆ ತಿಳಿಸಲಾಗಿರುವ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಕೃಷಿ ಇಲಾಖೆಯಲ್ಲಿ ನಿಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Anganwadi: ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2026! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜುಲೈ 30 ಕೊನೆಯ ದಿನಾಂಕ
- KPTCL: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- KSP PDF Notes : ಪೊಲೀಸ್ ಕಾನ್ಸ್ಟೇಬಲ್ ಸಿಲಬಸ್ ಪ್ರಶ್ನೋತ್ತರ ಮಾಲಿಕೆ 130+ ಪುಟಗಳು!
- KRCS: ವಿಜಯಪುರದ ಪ್ರತಿಷ್ಠಿತ ಸಂಸ್ಥೆಯಲ್ಲಿ ನೇರ ನೇಮಕಾತಿ 2026! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜುಲೈ 10 ಕೊನೆಯ ದಿನಾಂಕ
- Railway Application: ರೂ. 60,000/- ವೇತನ! ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026 । ಯಾವುದೇ ಪದವಿ ಸಾಕು । ಆಗಸ್ಟ್ 14 ಕೊನೆಯ ದಿನಾಂಕ