SSC: ರೂ. 1,42,400 ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಭರ್ಜರಿ ಉದ್ಯೋಗಾವಕಾಶ! ಜುಲೈ 16 ಕೊನೆಯ ದಿನಾಂಕ

ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸಿಬ್ಬಂದಿ ಆಯ್ಕೆ ಆಯೋಗವು ದಿನಾಂಕ 25-06-2026 ರಂದು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಹಾಗೂ ಇಲಾಖೆಗಳ ಅಡಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸಿನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳ ಸೇರಿದಂತೆ ಒಟ್ಟು 455 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

SSC Recruitment 2026


ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ PUC ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 25, 2026 ರಿಂದ ಜುಲೈ 16, 2026 ರ ವರೆಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ಅಟಾಕರ್ಷಕ ವೇತನವನ್ನು ನೀಡಲಾತ್ತದೆ.

ಹಾಗಿದ್ದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೇಗೆ ಹಂಚಿಕೆ ಮಾಡಲಾಗಿದೆ? ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಏನು? ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

SSC

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಹೆಸರು ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸಿನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 455 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-07-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಬಗ್ಗೆ ಮಾಹಿತಿ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಒಟ್ಟು 455 ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸಿನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು II PUC ಅಲ್ಲಿ ಪಾಸ್ ಆಗಿರಬೇಕು ಹಾಗೂ ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹಾಗೂ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಹುದ್ದೆಯ ಸಂಕ್ಷಿಪ್ತ ವಿವರ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಇಲಾಖೆಗಳ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ 49 ಹುದ್ದೆಗಳು
ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ 65 ಹುದ್ದೆಗಳು
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 341 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗೆ ತಿಳಿಸಲಾಗಿರುವ ಶೈಕ್ಷಣಿಕ ಅರ್ಹತೆ ಹಾಗೂ ಸೇವಾ ಅನುಭವವನ್ನು ಹೊಂದಿರಬೇಕು.

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್:

  • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
  • ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿ ಪ್ರತಿ ನಿಮಿಷಕ್ಕೆ 35 ಇಂಗ್ಲಿಷ್ ಪದಗಳನ್ನು ಹಾಗೂ 30 ಹಿಂದಿ ಪದಗಳನ್ನು ಟೈಪ್ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
  • ಹಾಗೂ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಸಚಿವಾಲಯಗಳ ಅಡಿಯಲ್ಲಿ ಗ್ರೂಪ್ ಡಿ ಸಿಬ್ಬಂದಿಯಾಗಿ ಕನಿಷ್ಠ 3 ಕಾಲ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿರಬೇಕು.

ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್:

  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ಕೇಂದ್ರ ಸರ್ಕಾರದ ಸಚಿವಾಲಯ ಅಥವಾ ಇಲಾಖೆಗಳಲ್ಲಿ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಅಥವಾ ಲೋವರ್ ಡಿವಿಷನ್ ಕ್ಲರ್ಕ್ ಆಗಿ ಕನಿಷ್ಠ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿರಬೇಕು.

ಅಸಿಸ್ಟೆಂಟ್ ಸೆಕ್ಷನ್ ಆಫೀಸರ್:

  • ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ಕೇಂದ್ರ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಅಥವಾ ಅಪ್ಪರ್ ಡಿವಿಷನ್ ಕ್ಲರ್ಕ್ ಆಗಿ ಕನಿಷ್ಠ 6 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹಾಗೂ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಅರ್ಜಿ ಶುಲ್ಕ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ವೇತನ ಶ್ರೇಣಿ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅಡಿಯಲ್ಲಿ ವೇತನವನ್ನು ನಿಗದಿಪಡಿಸಲಾಗಿದೆ.

  • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- ದಿಂದ ರೂ. 63,200/- ವೇತನವನ್ನು ನೀಡಲಾಗುತ್ತದೆ.
  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- ದಿಂದ ರೂ. 81,100/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900/- ದಿಂದ ರೂ. 1,42,400/- ವರೆಗೆ ವೇತನವನ್ನು ನೀಡಲಾಗುತ್ತದೆ.

ಇದರ ಜೊತೆಗೆ ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ಸಾರಿಗೆ ಭತ್ಯೆ ಹಾಗೂ ಇತರೆ ಸೌಲಭ್ಯಗಳು ಲಭ್ಯವಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ಲಾಗಿನ್ ಒರ್ ರಿಜಿಸ್ಟರ್ ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟರ್ ನೌ ಅನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ಆಧಾರ್ ಆಧಾರಿತ ದೃಢೀಕರಣ ಆಯ್ಕೆಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ.
  • ನಿಮ್ಮ ವೈಯಕ್ತಿಕ ವಿವರಗಳನ್ನು, ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಬ್ ಮೀಟ್ ಬಟನ್ ಕ್ಲಿಕ್ ಮಾಡಿ.
  • ನಂತರ ರೆಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಲೈವ್ ಪರೀಕ್ಷಾ ಟ್ಯಾಬ್ ನಲ್ಲಿ, ನಿರ್ದಿಷ್ಟ ಇಲಾಖಾವಾರು ಪರೀಕ್ಷೆಯ ಲಿಂಕ್ ಮುಂಭಾಗದಲ್ಲಿರುವ ಅಪ್ಲೈ ಬಟನ್ ಕ್ಲಿಕ್ ಮಾಡಿ.
  • ನಂತರ ನೀವು ಪ್ರಸ್ತುತ ಕೆಲಸ ಮಾಡುತ್ತಿರುವ ಇಲಾಖೆ, ಸೇವಾ ಅವಧಿಯನ್ನು ನಿಖರವಾಗಿ ಭರ್ತಿ ಮಾಡಿ.
  • ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
  • ಎಲ್ಲ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
  • ನಂತರ ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಶೈಕ್ಷಣಿಕ ಪ್ರಮಾಣಪತ್ರ, ಸೇವಾ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  • ಇವುಗಳನ್ನು ಒಂದು ಲಕೋಟೆಗೆ ಹಾಕಿ ನಿಗದಿತ ದಿನಾಂಕದೊಳಗಾಗಿ ಸ್ಪೀಡ್ ಪೋಸ್ಟ್ ಮೂಲಕ ಅಥವಾ ನೋಂದಾಯಿತ ಅಂಚೆ ಮೂಲಕ ಈ ಕೆಳಗೆ ತಿಳಿಸುವ ವಿಳಾಸಕ್ಕೆ ಸಲ್ಲಿಸಿ.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:

ಪ್ರಾದೇಶಿಕ ನಿರ್ದೇಶಕರು,

ಸಿಬ್ಬಂದಿ ಆಯ್ಕೆ ಆಯೋಗ (ಉತ್ತರ ಪ್ರದೇಶ)

ಬ್ಲಾಕ್ ನಂ.12, ಸಿಜಿಒ ಕಾಂಪ್ಲೆಕ್ಸ್,

ಲೋಧಿ ರಸ್ತೆ, ನವದೆಹಲಿ – 110003

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳ ಜ್ಞಾನವನ್ನು ಪರಿಶೀಲಿಸಲು ಅಭ್ಯರ್ಥಿಗಳಿಗೆ ವಸ್ತುನಿಷ್ಠ ಮಾದರಿ ಹಾಗೂ ವಿವರಣಾತ್ಮಕ ಮಾದರಿ ಎನ್ನುವ ಎರಡು ಪೇಪರ್ ಗಳನ್ನು ಒಳಗೊಂಡ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ಸೇವಾ ದಾಖಲೆಗಳ ಮೌಲ್ಯಮಾಪನ:

ಈ ಹಂತದಲ್ಲಿ ಲಿಖಿತ ಪರೀಕ್ಷೆಯಲ್ಲಿ ನಿರ್ದಿಷ್ಟ ಅರ್ಹತಾ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿಯನ್ನು ಆಯೋಗವು ಕೂಲಂಕುಷವಾಗಿ ಪರಿಶೀಲಿಸುತ್ತದೆ.

  • ಮೆರಿಟ್ ಪಟ್ಟಿ:

ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಹಾಗೂ ಸೇವಾ ದಾಖಲೆಗಳ ಮೌಲ್ಯಮಾಪನದಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ 25-06-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 25-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ( ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಅಸಿಸ್ಟೆಂಟ್ ಸೆಕ್ಷನ್ ಆಫೀಸರ್)ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಹಾಗೂ ಇಲಾಖೆಗಳ ಅಡಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸಿನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂದಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment