Application: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಭಾಗ್ಯದ ಜೊತೆಗೆ ಸರ್ಕಾರದಿಂದ ಅರ್ಜಿದಾರರ ಬ್ಯಾಂಕ್ ಖಾತೆಗೆ ₹15,000/- ಜಮಾ!

ರಾಜ್ಯದ ಎಷ್ಟೋ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದೀಗ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳು ಯಾವುದೇ ತೊಂದರೆಗಳಿಲ್ಲದೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗೆ ಇಂದಿನಿಂದಲೇ ಚಾಲನೆ ನೀಡಲು ಸರ್ಕಾರವು ನಿರ್ಧರಿಸಿದೆ.

Free Bus Application


ಸರ್ಕಾರದ ಉಚಿತ ಬಸ್ ಪಾಸ್ ಯೋಜನೆಯು ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆಯಾಗುತ್ತದೆ. ಈ ಯೋಜನೆಯಡಿಯಲ್ಲಿ 1 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ಪ್ರಸ್ತುತ ಲೇಖನದಲ್ಲಿ ಯೋಜನೆಯ ಮಹತ್ವ, ಯೋಜನೆಯ ಪ್ರಯೋಜನ, ಯೋಜನೆಯ ಉದ್ದೇಶ, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

Free Bus Application

ಯೋಜನೆಯ ಅವಲೋಕನ:

ಯೋಜನೆಯ ಹೆಸರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ
ಅನುಷ್ಠಾನಗೊಳಿಸಿದ ಸರ್ಕಾರ ಕರ್ನಾಟಕ ಸರ್ಕಾರ
ಅರ್ಹ ಫಲಾನುಭವಿಗಳು 1 ನೇ ತರಗತಿಯಿಂದ 10 ನೇ ತರಗತಿ ವಿದ್ಯಾರ್ಥಿಗಳು
ಅನ್ವಹಿಸುವ ಸಾರಿಗೆ ಸಂಸ್ಥೆಗಳು KSRTC, BMTC, KKRTC, NWKRTC
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ ಸೇವಾ ಸಿಂಧೂ ಪೋರ್ಟಲ್ ನಲ್ಲಿ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಎಂದರೇನು?

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೊಳಿಸಿದ್ದು, ಈ ಯೋಜನೆಯ ಉದ್ದೇಶ, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮನೆಯಿಂದ ಶಾಲಾ ಅಥವಾ ಕಾಲೇಜುಗಳಿಗೆ ಉಚಿತವಾಗಿ ಪ್ರಯಾಣಿಸಲು ಉತ್ತಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವುದಾಗಿದೆ.

ಈ ಹಿಂದೆ ಕೆಲವು ವಿದ್ಯಾರ್ಥಿನೀಯರು ಸ್ತ್ರೀ ಶಕ್ತಿ ಯೋಜನೆಯಡಿಯಲ್ಲಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು ಹಾಗೂ ಕೆಲವು ವರ್ಗಗಳ ವಿದ್ಯಾರ್ಥಿಗಳು ಸಹ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ, ಜೂನ್ 12 ರಿಂದ ಅನ್ವಯವಾಗುವಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರವು ಈ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ, ಅನುದಾನಿತ ಶಾಲೆಗಳಲ್ಲಿ, ಹಾಗೂ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ 1 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣವನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.

ಯೋಜನೆಯ ಉದ್ದೇಶ:

  • ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ:

ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚಗಳನ್ನು ಭರಿಸುವುದು ಹೆಚ್ಚು ಹೊರೆಯಾಗಿ ಪರಿಣಮಿಸುತ್ತದೆ. ವಿದ್ಯಾರ್ಥಿಗಳನ್ನು ಇಂತಹ ಆರ್ಥಿಕ ಸಮಸ್ಯೆಗಳಿಂದ ಮುಕ್ತಗೊಳಿಸಿ, ಅವರ ಸಂಪೂರ್ಣ ಗಮನವನ್ನು ಶಿಕ್ಷಣದ ಮೇಲೆ ಕೇಂದ್ರೀಕರಿಸುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

  • ಬಡ ವರ್ಗಗಳ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು:

ಕರ್ನಾಟಕ ಸರ್ಕಾರವು 1 ನೇ ತರಗತಿಯಿಂದ 10 ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಕೂಡ ಉಚಿತವಾಗಿ ಬಸ್ ಪಾಸ್ ಸೌಲಭ್ಯವನ್ನು ಒದಗಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

  • ಡ್ರಾಪ್ ಔಟ್ ಸಂಖ್ಯೆಯನ್ನು ಕಡಿಮೆ ಮಾಡುವುದು:

ಸಾಕಷ್ಟು ವಿದ್ಯಾರ್ಥಿಗಳು ತಮ್ಮ ಮನೆಯಿಂದ ಶಾಲೆಗೆ ತಲುಪಲು ಸರಿಯಾದ ಸಾರಿಗೆ ಸೌಲಭ್ಯಗಳಿಲ್ಲದೆ ಶಿಕ್ಷಣವನ್ನು ಅರ್ಧದಲ್ಲೇ ಡ್ರಾಪ್ ಔಟ್ ಮಾಡುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಅರ್ಧಕ್ಕೆ ಶಾಲೆಯನ್ನು ಬಿಡುವುದನ್ನು ನಿಲ್ಲಿಸುವುದು.

  • ಶಾಲಾ ದಾಖಲಾತಿ ಹಾಗೂ ಹಾಜರಾತಿ ಪ್ರಮಾಣವನ್ನು ಹೆಚ್ಚಿಸುವುದು:

ಸರಿಯಾದ ಸಾರಿಗೆ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಶಾಲಾ ದಾಖಲಾತಿಯನ್ನು ಹೆಚ್ಚಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗುವುದನ್ನು ಪ್ರೇರೇಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.

  • ಸುರಕ್ಷಿತ ಪ್ರಯಾಣವನ್ನು ಉತ್ತೇಜಿಸುವುದು:

ಸರ್ಕಾರವು ಉಚಿತವಾಗಿ ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಖಾಸಗಿ ವಾಹನಗಳಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುವುದನ್ನು ತಪ್ಪಿಸಿ, ಸರ್ಕಾರಿ ಬಸ್ ಗಳಲ್ಲಿ ಸುರಕ್ಷಿತವಾಗಿ ಶಾಲೆಗೆ ತಲುಪುವಂತೆ ಮಾಡುವುದು.

  • ರಾಜ್ಯದ ಶಿಕ್ಷಣ ಮಟ್ಟವನ್ನು ಸುಧಾರಿಸುವುದು:

ಸರ್ಕಾರದ ಈ ಒಂದು ಯೋಜನೆಯಿಂದಾಗಿ ಯಾವುದೇ ಆರ್ಥಿಕ ಹಾಗೂ ಭೌಗೋಳಿಕ ಅಡೆತಡೆಗಳಿಲ್ಲದೆ ಎಲ್ಲ ವಿದ್ಯಾರ್ಥಿಗಳಿಗೂ ಕೂಡ ಉತ್ತಮ ಶೈಕ್ಷಣಿಕ ಅವಕಾಶವನ್ನು ಕಲ್ಪಿಸುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವಂತೆ ಮಾಡಿ ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವುದು ಹಾಗೂ ಸಾಮಾಜಿಕ ಅಭಿವೃದ್ಧಿಯನ್ನು ಹೆಚ್ಚಿಸುವುದು.

ಯೋಜನೆಯ ಪ್ರಯೋಜನ:

  • ಸಾರಿಗೆ ವೆಚ್ಚವನ್ನು ಉಳಿತಾಯ ಮಾಡಬಹುದು:

ವಿದ್ಯಾರ್ಥಿಗಳು ಸರ್ಕಾರದ ಉಚಿತ ಬಸ್ ಪಾಸ್ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವ ಮೂಲಕ ಪ್ರತಿ ತಿಂಗಳು ಬಸ್ ಪ್ರಯಾಣಕ್ಕೆ ಕರ್ಚಾಗುತ್ತಿದ್ದ ಸಾವಿರಾರು ರೂಪಾಯಿಗಳನ್ನು ಉಳಿತಾಯ ಮಾಡಬಹುದಾಗಿದೆ. ಈ ಉಳಿತಾಯದ ಹಣವನ್ನು ವಿದ್ಯಾರ್ಥಿಗಳು ತಮ್ಮ ಶಾಲಾ ಪ್ರವೇಶ ಶುಲ್ಕವನ್ನು ಪಾವತಿಸಲು, ಬುಕ್ ಗಳನ್ನು ಖರೀದಿಸಲು ಹಾಗೂ ಇನ್ನಿತರ ಶೈಕ್ಷಣಿಕ ವೆಚ್ಚವನ್ನು ಭರಿಸಲು ಉಪಯೋಗಿಸಿಕೊಳ್ಳಬಹುದು. ಇದರಿಂದ ಕುಟುಂಬದ ಮೇಲಿನ ಹೆಚ್ಚಿನ ಆರ್ಥಿಕ ಹೊರೆಯು ಕಡಿಮೆಯಾಗುತ್ತದೆ.

  • ಶೈಕ್ಷಣಿಕ ಪ್ರಗತಿ ಹೆಚ್ಚುತ್ತದೆ:

ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವುದರಿಂದ ಬಡ ಕುಟುಂಬದವರು ಯಾವುದೇ ಸಾರಿಗೆ ವೆಚ್ಚದ ಭಯವಿಲ್ಲದೆ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ ಹಾಗೂ ಹಣಕಾಸಿನ ಸಮಸ್ಯೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವವರ ಸಂಖ್ಯೆಯು ಕಡಿಮೆಯಾಗುತ್ತದೆ.

  • ವಿದ್ಯಾರ್ಥಿಗಳು ಸುರಕ್ಷಿತವಾಗಿ ಶಾಲೆಗೆ ಪ್ರಯಾಣಿಸಬಹುದು:

ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುವ ಆಟೋಗಳಲ್ಲಿ ಹಾಗೂ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಯೋಜನೆಯಿಂದಾಗಿ ಯಾವುದೇ ಆತಂಕವಿಲ್ಲದೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಅರ್ಹತಾ ಮಾನದಂಡಗಳು:

  • ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿ ಆಗಿರಬೇಕು.
  • ವಿದ್ಯಾರ್ಥಿಗಳು 1 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
  • ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಅಥವಾ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ಗಡಿಭಾಗಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ವಿದ್ಯಾರ್ಥಿಗಳ ವಾಸಸ್ಥಳ ಹಾಗೂ ಶಾಲೆಗಳ ನಡುವಿನ ಅಂತರ ಗರಿಷ್ಟ 60 km ಒಳಗೆ ಮಾತ್ರ ಇರಬೇಕು.
  • ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಯಾಟ್ಸ್ ಪೋರ್ಟಲ್ ನಲ್ಲಿ ನೋಂದಣಿಯಾಗಿರಬೇಕು ಹಾಗೂ ನಿಗದಿತ ಸ್ಯಾಟ್ಸ್ ಐಡಿಯನ್ನು ಹೊಂದಿರಬೇಕು.
  • ವಿದ್ಯಾರ್ಥಿಗಳು KSRTC, BMTC, NWKRTC, KKRTC ಸೇರಿದಂತೆ ಇನ್ನಿತರ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಮಾತ್ರ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ವ್ಯಾಸಂಗ ಪ್ರಮಾಣಪತ್ರ
  • SATS ಐಡಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ವಿದ್ಯಾರ್ಥಿಗಳ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
  • ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
  • ಹಾಗೂ ಇನ್ನಿತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಫಲಾನುಭವಿಗಳು ಮೊದಲು ಸೇವಾ ಸಿಂಧೂ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದರೆ, ಮೂಲ ವಿವರಗಳನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ಯೂಸರ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಮುಖಪುಟದಲ್ಲಿ ಕಾಣುವ ಸ್ಟೂಡೆಂಟ್ ಬಸ್ ಪಾಸ್ ಸರ್ವಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ವಿದ್ಯಾರ್ಥಿಗಳ ಹೆಸರು, ಸ್ಯಾಟ್ಸ್ ಐಡಿ, ಆದಾಯ ಮತ್ತು ಜಾತಿ ಪ್ರಮಾಣಪತ್ರದ ಆರ್.ಡಿ ನಂಬರ್ ಹಾಗೂ ಆಧಾರ್ ಕಾರ್ಡ್ ವಿವರ ಹಾಗೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ.
  • ಹಾಗೂ ವಿದ್ಯಾರ್ಥಿಗಳ ಮನೆಯಿಂದ ಶಾಲೆಗಳಿಗೆ ಇರುವ ನಿಗದಿತ ಬಸ್ ಮಾರ್ಗ ಹಾಗೂ ಬಸ್ ನಿಲ್ದಾಣಗಳ ವಿವರವನ್ನು ಸರಿಯಾಗಿ ಭರ್ತಿ ಮಾಡಿ.
  • ಆಧಾರ್ ಕಾರ್ಡ್, ಫೋಟೋ, ವ್ಯಾಸಂಗ ಪ್ರಮಾಣಪತ್ರ ಹಾಗೂ ಮುಂತಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ಯಾವುದೇ ವಿದ್ಯಾರ್ಥಿಗಳು ಸರಿಯಾದ ಸಾರಿಗೆ ಸೌಲಭ್ಯಗಳಿಲ್ಲದೆ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಬಾರದು ಎನ್ನುವ ಉದ್ದೇಶದಿಂದ ಉಚಿತ ಬಸ್ ಪಾಸ್ ಯೋಜನೆಯನ್ನು ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೂ ವಿಸ್ತರಿಸಿದ್ದು, ಪ್ರತಿ ದಿನವೂ ಬಸ್ ಮೂಲಕ ಶಾಲೆಗೆ ಪ್ರಯಾಣ ಬೆಳೆಸುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

Leave a Comment