ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಪ್ರಸ್ತುತ 2026 ನೇ ಸಾಲಿನಲ್ಲಿ ಖಾಲಿ ಇರುವ ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಪ್ರೋಸೆಸ್ ಸರ್ವರ್, ಡ್ರೈವರ್ ಹಾಗೂ ಪ್ಯೂನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Civil Court Recruitment 2026
ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ ನಡೆಯಲಿದ್ದು, ನ್ಯಾಯಾಂಗ ಇಲಾಖೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದಗಳ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.
SSLC, ದ್ವಿತೀಯ PUC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಪ್ರೋಸೆಸ್ ಸರ್ವರ್, ಡ್ರೈವರ್ ಹಾಗೂ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 1/07/2026 ದಿಂದ 30/07/2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾಗಿರುವ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ |
| ಹುದ್ದೆಗಳ ಹೆಸರು | ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಪ್ರೋಸೆಸ್ ಸರ್ವರ್, ಡ್ರೈವರ್ ಹಾಗೂ ಪ್ಯೂನ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು21 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-07-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಬಗ್ಗೆ ಮಾಹಿತಿ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ವೃಂದಗಳಲ್ಲಿ ಖಾಲಿ ಇರುವ ಸ್ಟೈನೋಗ್ರಾಫರ್ ಗ್ರೇಡ್ III, ಟೈಪಿಸ್ಟ್, ಪ್ರೋಸೆಸ್ ಸರ್ವರ್, ಡ್ರೈವರ್ ಹಾಗೂ ಪ್ಯೂನ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಜಸ್ಟ್ SSLC, ದ್ವಿತೀಯ PUC ಹಾಗೂ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಕನಿಷ್ಠ 18 ವರ್ಷದಿಂದ 40 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕಲ್ಯಾಣ ಕರ್ನಾಟಕ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಸ್ಟೈನೋಗ್ರಾಫರ್ ಗ್ರೇಡ್ III (ಪ್ರಸ್ತುತ) | 1 ಹುದ್ದೆ |
| ಸ್ಟೈನೋಗ್ರಾಫರ್ ಗ್ರೇಡ್ III (ಹಿಂಬಾಕಿ) | 5 ಹುದ್ದೆಗಳು |
| ಟೈಪಿಸ್ಟ್ (ಪ್ರಸ್ತುತ) | 6 ಹುದ್ದೆಗಳು |
| ಟೈಪಿಸ್ಟ್ (ಹಿಂಬಾಕಿ) | 1 ಹುದ್ದೆ |
| ಡ್ರೈವರ್ | 1 ಹುದ್ದೆ |
| ಪ್ರೋಸೆಸ್ ಸರ್ವರ್ | 1 ಹುದ್ದೆ |
| ಪ್ಯೂನ್ | 7 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಸ್ಟೈನೋಗ್ರಾಫರ್ ಗ್ರೇಡ್ III:
ಸ್ಟೈನೋಗ್ರಾಫರ್ ಗ್ರೇಡ್ III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಟೈಪಿಸ್ಟ್:
ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಡ್ರೈವರ್:
ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
- ಪ್ರೋಸೆಸ್ ಸರ್ವರ್:
ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಪ್ಯೂನ್:
ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಕನ್ನಡವನ್ನು ಕಡ್ಡಾಯವಾಗಿ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.
ವಯೋಮಿತಿ ವಿವರ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಪ್ರವರ್ಗ- IIA, ಪ್ರವರ್ಗ- IIB, ಪ್ರವರ್ಗ- IIIA, ಪ್ರವರ್ಗ- IIIB ಅಭ್ಯರ್ಥಿಗಳು ಗರಿಷ್ಟ 43 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- I ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ವಿವರ:
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿ ಮುಗಿಸಿದ ನಂತರದ ಮೂರು ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- PwBD ಅಭ್ಯರ್ಥಿಗಳಿಗೆ ಹಾಗೂ ವಿಧವೆಯಾಗಿರುವ ಅಭ್ಯರ್ಥಿಗಳಿಗೆ 10 ವರ್ಷ
- ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದ್ದಲ್ಲಿ ಅವರ ಸೇವಾ ಅವಧಿ ಅಥವಾ 10 ವರ್ಷ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ರೂ. 300/-
- ಪ್ರವರ್ಗ- IIA, ಪ್ರವರ್ಗ- IIB, ಪ್ರವರ್ಗ- IIIA, ಪ್ರವರ್ಗ- IIIB ಅಭ್ಯರ್ಥಿಗಳಿಗೆ ರೂ. 150/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- I, PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ವಿಲೇಖನಾಧಿಕಾರಿ, ನಗರ ಸಿವಿಲ್ ನ್ಯಾಯಾಲಯ, ಬೆಂಗಳೂರು ಇವರ ಹೆಸರಿಗೆ ಪಾವತಿಸಿ.
ವೇತನ ಶ್ರೇಣಿ:
| ಹುದ್ದೆಗಳ ವಿವರ | ವೇತನ ಶ್ರೇಣಿ |
| ಸ್ಟೈನೋಗ್ರಾಫರ್ ಗ್ರೇಡ್ III | ರೂ. 44425 – ರೂ. 83,700/- |
| ಟೈಪಿಸ್ಟ್ | ರೂ. 34,100/- ರೂ. 67,600/- |
| ಡ್ರೈವರ್ | ರೂ. 67,600/- |
| ಪ್ರೋಸೆಸ್ ಸರ್ವರ್ | ರೂ. 31,775 – ರೂ. 61,300/- |
| ಪ್ಯೂನ್ | ರೂ. 46,675/- |
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಶುಲ್ಕ ಪಾವತಿಸಿದ ರಶೀದಿಯನ್ನು ಅಪ್ಲೋಡ್ ಮಾಡಿ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಟೈನೋಗ್ರಾಫರ್ ಗ್ರೇಡ್ III ಹಾಗೂ ಟೈಪಿಸ್ಟ್ ಹುದ್ದೆಗಳಿಗೆ:
ಸ್ಟೈನೋಗ್ರಾಫರ್ ಗ್ರೇಡ್ III ಹಾಗೂ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಪ್ರಾಧಿಕಾರವು ಅರ್ಹತಾ ಪರೀಕ್ಷೆಯನ್ನು ನಡೆಸುತ್ತದೆ ನಂತರ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಹಾಗೂ ಅರ್ಹತಾ ಶೈಕ್ಷಣಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ ಅಂತಿಮವಾಗಿ ಈ ಎಲ್ಲ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಪ್ರೋಸೆಸ್ ಸರ್ವರ್:
ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:25 ಅನುಪಾತದಲ್ಲಿ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ. ಕೊನೆಯದಾಗಿ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಡ್ರೈವರ್:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ 50 ಅಂಕಗಳ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:25 ಅನುಪಾತದಲ್ಲಿ 10 ಅಂಕಗಳ ಮೌಖಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಪ್ಯೂನ್:
ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:10 ಅನುಪಾತದಲ್ಲಿ 10 ಅಂಕಗಳ ಸಂದರ್ಶನಕ್ಕೆ ಕರೆಯಲಾಗುತ್ತದೆ. ಕೊನೆಯದಾಗಿ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-07-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 30-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ ಡ್ರೈವರ್, ಪ್ರೋಸೆಸ್ ಸರ್ವರ್, ಟೈಪಿಸ್ಟ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- KSP 60 ಹಳೆಯ ಪ್ರಶ್ನೆ ಪತ್ರಿಕೆ PDF – Civil Police Constable / CAR / DAR ಪರೀಕ್ಷೆಗೆ ಅತ್ಯಂತ ಉಪಯುಕ್ತ!
- SSC: ರೂ. 1,42,400 ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಭರ್ಜರಿ ಉದ್ಯೋಗಾವಕಾಶ! ಜುಲೈ 16 ಕೊನೆಯ ದಿನಾಂಕ
- KSP PDF ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ (KEA) 2026 ಹೊಸ ಪರೀಕ್ಷಾ ಮಾದರಿ Question Paper Pdf-3
- Agriculture: ಕೃಷಿ ಇಲಾಖೆಯಲ್ಲಿ ಹೊಸ ನೇಮಕಾತಿ 2026! ಕೃಷಿ ಪದವೀಧರರಿಗೆ ಭರ್ಜರಿ ಉದ್ಯೋಗ ಅವಕಾಶ । 10 ಜುಲೈ ಕೊನೆಯ ದಿನಾಂಕ
- Anganwadi: ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2026! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜುಲೈ 30 ಕೊನೆಯ ದಿನಾಂಕ