Karnataka Court Job: ರೂ. 61,300/- ವೇತನ, SSLC ಪಾಸ್‌ ಆದ್ರೆ ಸಾಕು ಯಾದಗಿರಿ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗಾವಕಾಶ!

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಯಾದಗಿರಿ ಜಿಲ್ಲಾ ನ್ಯಾಯಾಲಯವು 2026 ರ ನೇಮಕಾತಿಯಲ್ಲಿ ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಅಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Karnataka Court Job Recruitment in Kannada

ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 13, 2026 ರಿಂದ 12-04-2026 ರ ವರೆಗೂ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಪ್ರಾರಂಭಿಸಬೇಕೆಂದಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇನ್ನಿತರ ಕ್ಷೇತ್ರಗಳಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ ಇನ್ನಿತರ ಹುದ್ದೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಿ.

Karnataka Court Job

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆ ಯಾದಗಿರಿ ಜಿಲ್ಲಾ ನ್ಯಾಯಾಲಯ
ಹುದ್ದೆಯ ಹೆಸರು ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 14 ಹುದ್ದೆಗಳು
ಉದ್ಯೋಗ ಸ್ಥಳ ಯಾದಗಿರಿ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ವಿಧಾನ

ಹುದ್ದೆಯ ಸಂಕ್ಷಿಪ್ತ ನೋಟ:

ಕರ್ನಾಟಕದ ಯಾದಗಿರಿ ಜಿಲ್ಲಾ ನ್ಯಾಯಾಲಯವು ಒಟ್ಟು 14 ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿದ್ದು ಕನಿಷ್ಠ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವಾತನವನ್ನು ನೀಡಲಾಗುತ್ತದೆ

ಹುದ್ದೆಯ ಸಂಕ್ಷಿಪ್ತ ವಿವರ:

ಯಾದಗಿರಿ ಜಿಲ್ಲಾ ನ್ಯಾಯಾಲಯವು ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ವರ್ಗಗಳ ಅಭ್ಯರ್ಥಿಗಳಿಗೆ ಎಷ್ಟೆಷ್ಟು ಹುದ್ದೆಗಳನ್ನು ನಿಗದಿಪಡಿಸಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

  • ಪ್ರೋಸೆಸ್ ಸರ್ವರ್: ಒಟ್ಟು 9 ಹುದ್ದೆಗಳು
  • ಪಿಯೋನ್: ಒಟ್ಟು 5 ಹುದ್ದೆಗಳು

ವರ್ಗವಾರು ಖಾಲಿ ಇರುವ ಹುದ್ದೆಗಳ ವಿವರ:

ವಿವಿಧ ವರ್ಗಗಳು ಪ್ರೋಸೆಸ್ ಸರ್ವರ್ ಹುದ್ದೆ ಪಿಯೋನ್ ಹುದ್ದೆ
ಪರಿಶಿಷ್ಟ ಜಾತಿ 0101
ಪರಿಶಿಷ್ಟ ಪಂಗಡ 01
ಸಾಮಾನ್ಯ ವರ್ಗ 0403
ವರ್ಗ- I01
ವರ್ಗ- 2A0101
ವರ್ಗ- 2B
ವರ್ಗ- 3A01
ವರ್ಗ- 3B

ಶೈಕ್ಷಣಿಕ ಅರ್ಹತೆ:

  • ಪ್ರೋಸೆಸ್ ಸರ್ವರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
  • ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕನ್ನಡವನ್ನು ಓದಲು ಮತ್ತು ಬರೆಯಲು ಬರುತ್ತಿರಬೇಕು.

ವಯೋಮಿತಿ ವಿವರ:

ಯಾದಗಿರಿ ಜಿಲ್ಲೆ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
  • ಪ್ರವರ್ಗ I, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:

ಪ್ರೋಸೆಸ್ ಸೇವೆರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಅಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದಾಗಿದೆ.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 200/-
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 100/-
  • ಪ್ರವರ್ಗ I, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: ರೂ. 100/-

ವೇತನ ಶ್ರೇಣಿ:

  • ಪ್ರೋಸೆಸ್ ಸರ್ವರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,950/- ರಿಂದ ರೂ. 61,300/- ವರೆಗೆ ವೇತನವನ್ನು ನೀಡಲಾಗುತ್ತದೆ
  • ಪಿಯೋನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000/- ದಿಂದ ರೂ. 46,675/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಅಭ್ಯರ್ಥಿಗಳು ಮೊದಲು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://yadgir.dcourts.gov.in/online-recruitment/ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಹಾಗೂ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ. ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ತಯಾರಿಸಲಾಗುತ್ತದೆ.

  • ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಸಂದರ್ಶಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

  • ಅಂತಿಮ ಆಯ್ಕೆ:

ಅಭ್ಯರ್ಥಿಗಳು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಪೊರ್ಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 13-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 12-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-04-2026
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 13-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ಯಾದಗಿರಿ ಜಿಲ್ಲಾ ನ್ಯಾಯಾಲಯವು ಒಟ್ಟು 14 ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೀವೇನಾದರೂ ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೂ ಕೂಡ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಈಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳನ್ನು ಮೀಸಲಾತಿ ಅನ್ವಯ ಹಂಚಿಕೆ ಮಾಡಿದ್ದು, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಒಂದು ಕ್ಷೇತ್ರದಲ್ಲಿ ನಿಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿ.


ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:

5 thoughts on “Karnataka Court Job: ರೂ. 61,300/- ವೇತನ, SSLC ಪಾಸ್‌ ಆದ್ರೆ ಸಾಕು ಯಾದಗಿರಿ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗಾವಕಾಶ!”

Leave a Comment