ತಾಂತ್ರಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಪ್ರತಿಷ್ಠಿತ ಮೇಲ್ ಮೋಟರ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Post Office Recruitment 2026
ಐಟಿಐ ಪೂರ್ಣಗೊಳಿಸಿ ಕೇಂದ್ರ ಸರ್ಕಾರದಡಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಅವರು ಹೊಂದಿರುವ ತಾಂತ್ರಿಕ ಅರ್ಹತೆ ಮೇಲೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯಾಕರ್ಷಕ ವೇತನವನ್ನು ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾಗಿರುವ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಭಾರತೀಯ ಅಂಚೆ ಇಲಾಖೆ, ಮೇಲ್ ಮೋಟರ್ ಸರ್ವಿಸ್, ಬೆಂಗಳೂರು |
| ಹುದ್ದೆಗಳ ಹೆಸರು | ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | 4 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18-07-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಭಾರತೀಯ ಅಂಚೆ ಇಲಾಖೆಯು ಮೇಲ್ ಮೋಟರ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ವಿವಿಧ ತಾಂತ್ರಿಕ ವಿಭಾಗಗಳ ಅಡಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಐಟಿಐ ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಭಾರತೀಯ ಅಂಚೆ ಇಲಾಖೆಯು ಮೇಲ್ ಮೋಟರ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವ ಟ್ರೇಡ್ ಗಳಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಮೋಟರ್ ವೆಹಿಕಲ್ ಮೆಕ್ಯಾನಿಕ್ | 1 ಹುದ್ದೆ |
| ಅಪ್ಹೋಲ್ಸ್ಟರ್ | 1 ಹುದ್ದೆ |
| ಕಾರ್ಪೆಂಟರ್ ಕಮ್ ಜಾಯಿಂಟರ್ | 1 ಹುದ್ದೆ |
| ಪೇಂಟರ್ | 1 ಹುದ್ದೆ |
ಶೈಕ್ಷಣಿಕ ಅರ್ಹತೆ:
ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರ ಅನುಭವವನ್ನು ಹೊಂದಿರಬೇಕು.
- ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
- ಅಥವಾ 8 ನೇ ತರಗತಿಯಲ್ಲಿ ಪಾಸ್ ಆಗಿದ್ದು, ಸಂಬಂಧಿತ ಟ್ರೇಡ್ ನಲ್ಲಿ 1 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಮೋಟರ್ ವೆಹಿಕಲ್ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಭಾರಿ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಮೇಲ್ ಮೋಟರ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಸ್ಕಿಲ್ಡ್ ಆರ್ಟಿಸನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 1-1-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದರನ್ವಯ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ವಯೋಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ಕೇಂದ್ರ ಸರ್ಕಾರಿ ನೌಕರರಿಗೆ ನಿಯಮಾವಳಿಗಳ ಪ್ರಕಾರ 40 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ, ಇಡಬ್ಲ್ಯೂ ಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ. 100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅಭ್ಯರ್ಥಿಗಳು ಯಾವುದೇ ಅಂಚೆ ಕಚೇರಿಯಲ್ಲಿ “The Manager, Mail Moter Service, Bengaluru- 01 ಹೆಸರಿಗೆ IPO ಮತ್ತು UCR ರಶೀದಿ ಮೂಲಕ ಶುಲ್ಕ ಪಾವತಿಸಬೇಕಾಗುತ್ತದೆ.
ಟ್ರೇಡ್ ಟೆಸ್ಟ್ ಗೆ ಆಯ್ಕೆಯಾದ ಅಭ್ಯರ್ಥಿಗಳು ನಂತರ ರೂ. 400/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
- ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- ದಿಂದ ರೂ. 63,200/- ವರೆಗೆ ವೇತನವನ್ನು ನೀಡಲಾಗುತ್ತದೆ. ಹಾಗೂ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರಗಳನ್ನು ಇಂಗ್ಲಿಷ್ ಅಥವಾ ಹಿಂದಿ ಭಾಷೆಗಳಲ್ಲಿ ಸ್ಪಷ್ಟವಾಗಿ ಭರ್ತಿ ಮಾಡಿ.
- ಅಪ್ಲಿಕೇಶನ್ ಫಾರ್ಮ್ ನ ನಿಗದಿತ ಸ್ಥಳದಲ್ಲಿ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ ಸ್ವಯಂ ದೃಢೀಕರಣ ಸಹಿ ಮಾಡಿ.
- ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ತಾಂತ್ರಿಕ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರ, ಚಾಲನಾ ಪರವಾನಗಿ, ಅನುಭವ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
- ಈ ಎಲ್ಲ ದಾಖಲೆಗಳನ್ನು ಒಳಗೊಂಡ ಅಪ್ಲಿಕೇಶನ್ ಫಾರ್ಮ್ ಅನ್ನು ಒಂದು ಲಕೋಟೆಗೆ ಹಾಕಿ, An Application for the Post of Skilled Artisan in trade ಎಂದು ಬರೆಯಿರಿ.
- ಇವುಗಳನ್ನು ಅರ್ಜಿ ಶುಲ್ಕ ಪಾವತಿಸಿದ ರಶೀದಿಯೊಂದಿಗೆ ಈ ಕೆಳಗೆ ತಿಳಿಸಿದ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸ:
The Manager,
Mail Moter Service,
Department of posts,
No. 4, Basaveshwara Road,
Vasanth Nagar, Bengaluru – 560001
ಆಯ್ಕೆ ಪ್ರಕ್ರಿಯೆ:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅವರು ಅರ್ಜಿ ಸಲ್ಲಿಸಿರುವ ನಿಗದಿತ ಟ್ರೇಡ್ ಗಳಿಗೆ ಅನುಗುಣವಾಗಿ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ಅಭ್ಯರ್ಥಿಗಳು ಪ್ರಯೋಗಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರ ಮೇಲೆ ಹಾಗೂ ತಾಂತ್ರಿಕ ಕೌಶಲ್ಯದ ಆಧಾರ ಮೇಲೆ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 16-06-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 27-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭಾರತೀಯ ಅಂಚೆ ಇಲಾಖೆಯ ಮೇಲ್ ಮೋಟರ್ ಸರ್ವಿಸ್, ಬೆಂಗಳೂರಿನಲ್ಲಿ ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವುದು ITI ಹಾಗೂ ತಾಂತ್ರಿಕ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಉತ್ತಮ ಸರ್ಕಾರಿ ಉದ್ಯೋಗದ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನದಿಂದ ಓದಿ, ಅಗತ್ಯ ದಾಖಲೆಗಳೊಂದಿಗೆ 18-07-2026 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- KSRTC: ಸಾರಿಗೆ ಕ್ಷೇತ್ರದಲ್ಲಿ ಭರ್ಜರಿ ಅವಕಾಶ! ನೇರ ಚಾಲನಾ ಪರೀಕ್ಷೆ ಮೂಲಕ ಚಾಲಕರಾಗುವ ಸುವರ್ಣಾವಕಾಶ
- Civil Court: ರೂ. 83,700/- ವೇತನ! ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ! SSLC & PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- KSP 60 ಹಳೆಯ ಪ್ರಶ್ನೆ ಪತ್ರಿಕೆ PDF – Civil Police Constable / CAR / DAR ಪರೀಕ್ಷೆಗೆ ಅತ್ಯಂತ ಉಪಯುಕ್ತ!
- SSC: ರೂ. 1,42,400 ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಭರ್ಜರಿ ಉದ್ಯೋಗಾವಕಾಶ! ಜುಲೈ 16 ಕೊನೆಯ ದಿನಾಂಕ
- KSP PDF ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ (KEA) 2026 ಹೊಸ ಪರೀಕ್ಷಾ ಮಾದರಿ Question Paper Pdf-3