SSMCT: ಕೊಪ್ಪಳ PU ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಉಚಿತ ಅರ್ಜಿ – 10 ಏಪ್ರಿಲ್ ಒಳಗೆ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೋಧನಾ ಕೌಶಲ್ಯವನ್ನು ಹೊಂದಿದ್ದೀರಾ? ನಿಮ್ಮ ಜ್ಞಾನವನ್ನು ಇತರರಿಗೆ ಧಾರೆ ಎರೆಯುವ ಉಪನ್ಯಾಸಕ ಹುದ್ದೆಯನ್ನು ಪಡೆಯಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್!

SSMCT Recruitment in kannada

ನಿಮ್ಮ ಕನಸ್ಸನ್ನು ನನಸ್ಸು ಮಾಡಿಕೊಳ್ಳಲು ಕೊಪ್ಪಳದ ಪ್ರತಿಷ್ಠಿತ ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜು ನಿಮಗೊಂದು ಅತ್ಯುತ್ತಮ ಅವಕಾಶವನ್ನು ಕಲ್ಪಿಸಿದೆ. ಈ ಒಂದು ಸಂಸ್ಥೆಯು 2026-27 ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಅವಕಾಶ ಕಲ್ಪಿಸಿದ್ದು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10-04-2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೊಪ್ಪಳದ ಪ್ರತಿಷ್ಠಿತ ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಬೋಧಕ ಹಾಗೂ ಬೋಧಕೇತರ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

SSMCT

ಹುದ್ದೆಯ ಕಿರು ನೋಟ:

ನೇಮಕಾತಿ ಸಂಸ್ಥೆ ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜು, ಕೊಪ್ಪಳ ಜಿಲ್ಲೆ
ಹುದ್ದೆಯ ಹೆಸರು ಉಪನ್ಯಾಸಕರು, ಕಂಪ್ಯೂಟರ್ ಇನ್ಸ್ಟ್ರಕ್ಟರ್, ಕ್ಯಾಂಪಸ್ ಮ್ಯಾನೇಜರ್, ಲೈಬ್ರೇರಿಯನ್ ಹಾಗೂ ಇನ್ನಿತರ ಹುದ್ದೆಗಳು
ಉದ್ಯೋಗ ಸ್ಥಳ ಕೊಲೂರು ಕಟ್ರಾಳ್ಳಿ – ಕೊಪ್ಪಳ ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನಇಮೇಲ್ ಅಥವಾ ವಾಟ್ಸಾಪ್

ಹುದ್ದೆಯ ಸಂಕ್ಷಿಪ್ತ ವಿವರ:

ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

  • ಉಪನ್ಯಾಸಕ: ಕನ್ನಡ, ಇಂಗ್ಲಿಷ್, ಹಿಂದಿ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಇತಿಹಾಸ ವಿಷಯಗಳಿಗೆ ತಲಾ ಒಂದು ಹುದ್ದೆ.
  • ಕಿರಿಯ ಉಪನ್ಯಾಸಕ: ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ತಲಾ ಒಂದು ಹುದ್ದೆ.
  • ಕಿರಿಯ ಉಪನ್ಯಾಸಕ: ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯದಲ್ಲಿ ತಲಾ ಒಂದು ಹುದ್ದೆ.
  • ಕಂಪ್ಯೂಟರ್ ಲ್ಯಾಬ್ ಇನ್ಸ್ಟ್ರಕ್ಟರ್: 1 ಹುದ್ದೆ.
  • ಲೈಬ್ರೇರಿಯನ್: 1 ಹುದ್ದೆ.
  • ಕ್ಯಾಂಪಸ್ ಮ್ಯಾನೇಜರ್: 1 ಹುದ್ದೆ.
  • ದೈಹಿಕ ಶಿಕ್ಷಣ ನಿರ್ದೇಶಕರು: 1 ಹುದ್ದೆ.
  • ಅಕೌಂಟೆಂಟ್: 1 ಹುದ್ದೆ.
  • ಪ್ರಥಮ ದರ್ಜೆ ಸಹಾಯಕ: 1 ಹುದ್ದೆ.

ಶೈಕ್ಷಣಿಕ ಅರ್ಹತೆ:

  • ಉಪನ್ಯಾಸಕ:

ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ 55% ಅಂಕಗಳೊಂದಿಗೆ M.A ಹಾಗೂ B.Ed ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ CSE/ CLAT ನಂತಹ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಿದ 5 ವರ್ಷದ ಅನುಭವವನ್ನು ಹೊಂದಿರಬೇಕು.

  • ಕಿರಿಯ ಉಪನ್ಯಾಸಕ:

ಕಿರಿಯ ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ 55% ಅಂಕಗಳೊಂದಿಗೆ M.Sc ಹಾಗೂ B.Ed ಪದವಿಯನ್ನು ಪೂರ್ಣಗೊಳಿಸಿದ ಫ್ರೆಷೆರ್ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  • ಕಿರಿಯ ಉಪನ್ಯಾಸಕ:

ಕಿರಿಯ ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ 55% ಅಂಕಗಳೊಂದಿಗೆ M.Sc ಹಾಗೂ B.Ed ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ NEET/ JEE/ KCET ನಂತಹ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಿದ 5 ವರ್ಷದ ಅನುಭವವನ್ನು ಹೊಂದಿರಬೇಕು.

  • ಕಂಪ್ಯೂಟರ್ ಲ್ಯಾಬ್ ಇನ್ಸ್ಟ್ರಕ್ಟರ್:

ಕಂಪ್ಯೂಟರ್ ಲ್ಯಾಬ್ ಇನ್ಸ್ಟ್ರಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು IT ಅಥವಾ CS ವಿಭಾಗದಲ್ಲಿ ಬ್ಯಾಚುಲರ್ ಪದವಿ ಪೂರ್ಣಗೊಳಿಸಿರಬೇಕು.

  • ಕ್ಯಾಂಪಸ್ ಮ್ಯಾನೇಜರ್:

ಕ್ಯಾಂಪಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಬಿ.ಇ ಪೂರ್ಣಗೊಳಿಸಿರಬೇಕು ಹಾಗೂ 5 ವರ್ಷದ ಅನುಭವವನ್ನು ಹೊಂದಿರಬೇಕು.

  • ಲೈಬ್ರೇರಿಯನ್:

ಲೈಬ್ರೇರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 55% ಅಂಕಗಳೊಂದಿಗೆ MILS ಪದವಿಯನ್ನು ಪೂರ್ಣಗೊಳಿಸಿರಬೇಕು.

  • ದೈಹಿಕ ಶಿಕ್ಷಣ ನಿರ್ದೇಶಕರು:

ದೈಹಿಕ ಶಿಕ್ಷಣ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 55% ಅಂಕಗಳೊಂದಿಗೆ B.P.Ed ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಯೋಗ ತರಬೇತಿಯಲ್ಲಿ ನೈಪುಣ್ಯತೆ ಹೊಂದಿರಬೇಕು.

  • ಪ್ರಥಮ ದರ್ಜೆ ಸಹಾಯಕರು:

ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪಡೆದುಕೊಂಡಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಜೊತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 5 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.

  • ಅಕೌಂಟೆಂಟ್:

ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿಯನ್ನು ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ನಲ್ಲಿ ಟ್ಯಾಲಿ ಜ್ಞಾನವನ್ನು ಹೊಂದಿರಬೇಕು. ಮುಖ್ಯವಾಗಿ 5 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಸಂಸ್ಥೆಯ ನೇಮಕಾತಿ ಅಧಿಸೂಚನೆಯಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗೆ ಸಂಬಂಧಿಸಿದ ವಯೋಮಿತಿಯನ್ನು ನಿಗದಿಪಡಿಸಿಲ್ಲ. ಕರ್ನಾಟಕ ಸರ್ಕಾರದ ಶಿಕ್ಷಣ ಸಂಸ್ಥೆಯ ನಿಯಮಾನುಸಾರ ಹುದ್ದೆಗೆ ಸಂಬಂಧಿಸಿದ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ:

ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕದ ಮಾಹಿತಿಯನ್ನು ನೀಡಿಲ್ಲಾ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೇ ಉಚಿತವಾಗಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಲಾಗಿದೆ.

ವೇತನ ಶ್ರೇಣಿ:

ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ನ ವಿವಿಧ ನಿಯಮಗಳ ಪ್ರಕಾರ ವಿವಿಧ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ವೇತನವನ್ನು ಹಾಗೂ ಇದರ ಜೊತೆಗೆ ಇತರೆ ಸವಲತ್ತುಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಮ್ಮ ಶೈಕ್ಷಣಿಕ ದಾಖಲೆಗಳು, ಅನುಭವ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಹುದ್ದೆಗೆ ಸಂಬಂಧಿಸಿದ ಅರ್ಜಿಯನ್ನು 9900229660 ಸಂಖ್ಯೆಗೆ ವಾಟ್ಸಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ http://ssmctgavimathkoppal.org/ ಗೆ ಭೇಟಿ ನೀಡಿ. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
  • ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಒಳಗೊಂಡ ರೆಸೂಮ್ ಹಾಗೂ ಅರ್ಜಿಯನ್ನು [email protected] ಇಮೇಲ್ ವಿಳಾಸಕ್ಕೆ ಕಳುಹಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿ ಅನುಭವಗಳ ಆಧಾರದ ಮೇಲೆ ಮೊದಲು ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿಸಲಾಗುವುದು.
  • ನಂತರ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರ ಜೊತೆಗೆ ಬೋಧನಾ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡೆಮೋ ಕ್ಲಾಸ್ ಗಳನ್ನು ತೆಗೆದುಕೊಳ್ಳುವಂತೆ ತಿಳಿಸಲಾಗುವುದು.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 25-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 25-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ನೀವೇನಾದರೂ ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬೋಧಕ ಅಥವಾ ಬೋಧಕೇತರ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಒಂದು ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿದ್ದರೆ, ನೀವು ಆಯ್ಕೆ ಮಾಡಿಕೊಂಡಿರುವ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿ ಅನುಭವಗಳನ್ನುಹೊಂದಿದ್ದರೆ ಇಂದೇ ಆನ್ಲೈನ್ ಅಥವಾ ಇಮೇಲ್ ಅಥವಾ ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಿ ನಿಮ್ಮ ಕನಸ್ಸಿನ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:

Leave a Comment