NFSU: ರೂ. 90,000 ವೇತನ! ಧಾರವಾಡದ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ! ಜುಲೈ 9 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ನಿಮ್ಮ ಈ ಕನಸನ್ನು ನನಸು ಮಾಡಿಕೊಳ್ಳಲು ಅತ್ಯುತ್ತಮ ಅವಕಾಶ ನಿಮಗಾಗಿ ಕಾಯುತ್ತಿದೆ. ವಿಧಿವಿಜ್ಞಾನ ಮತ್ತು ಅಪರಾಧ ತನಿಖಾ ಕ್ಷೇತ್ರದಲ್ಲಿ ದೇಶದಲ್ಲೇ ಅತ್ಯಂತ ಪ್ರತಿಷ್ಠಿತ ಸಂಸ್ಥೆಯಾಗಿರುವ ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

NFSU Dharwad Recruitment 2026


ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವು ಫಾರೆನ್ಸಿಸ್ ಸೈನ್ಸ್, ಕಂಪ್ಯೂಟರ್ ಸೈನ್ಸ್, ಸೈಬರ್ ಸೆಕ್ಯೂರಿಟಿ, ಇನ್ಫಾರ್ಮಶನ್ ಟೆಕ್ನಾಲಜಿ ಹಾಗೂ ಫಾರ್ಮಕಾಲಜಿ ವಿಭಾಗಗಳಲ್ಲಿ ಅರ್ಹ ಬೋಧಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 25-06-2026 ರಿಂದ 09-07-2026 ವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

NFSU

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ
ಹುದ್ದೆಗಳ ಹೆಸರು ಅಸಿಸ್ಟೆಂಟ್ ಪ್ರೊಫೆಸರ್
ಹುದ್ದೆಗಳ ಸಂಖ್ಯೆ 6 ಹುದ್ದೆಗಳು
ಉದ್ಯೋಗ ಸ್ಥಳ ಧಾರವಾಡ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ರಾಷ್ಟ್ರಿಯ ವಿಧಿವಿಜ್ಞಾನ ವಿಶ್ವವಿದ್ಯಾಲದ ಧಾರವಾಡವು ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಫಾರೆನ್ಸಿಸ್ ಸೈನ್ಸ್, ಸೈಬರ್ ಸೆಕ್ಯುರಿಟಿ, ಇನ್ಫಾರ್ಮಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್, ಫಾರ್ಮಕಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹಾಗೂ Ph.D ಪೂರ್ಣಗೊಳಿಸಿದ ಅಭ್ಯರ್ಥಿಗಳು ಜುಲೈ 9, 2026 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡದಲ್ಲೇ ವೃತ್ತಿಜೀವನವನ್ನು ಪ್ರಾರಂಭಿಸಬಹುದಾಗಿದ್ದು, ಅವರು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ರೂ. 90,000/- ದ ವರೆಗೆ ವೇತನವನ್ನು ಸಹ ನೀಡಲಾಗುತ್ತದೆ.

ಹುದ್ದೆಯ ವಿವರ:

ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವ ವಿಭಾಗಗಳ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಫೋರೆನ್ಸಿಕ್ ಸೈನ್ಸ್ 01 ಹುದ್ದೆ
ಫಾರ್ಮಕಾಲಜಿ 01 ಹುದ್ದೆ
ಕಂಪ್ಯೂಟರ್ ಸೈನ್ಸ್, ಇನ್ಫಾರ್ಮಶನ್ ಟೆಕ್ನಾಲಜಿ, ಸೈಬರ್ ಸೆಕ್ಯೂರಿಟಿ 04 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಧಾರವಾಡದ ರಾಷ್ಟ್ರಿಯ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಫೋರೆನ್ಸಿಕ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ Ph.D ಹೊಂದಿರಬೇಕು ಜೊತೆಗೆ ಎಂಎಸ್ಸಿ ಅಥವಾ ತತ್ಸಮಾನ ಪದವಿಯಲ್ಲಿ 60% ಅಂಕಗಳನ್ನು ಪಡೆದಿರಬೇಕು.
  • ಕಂಪ್ಯೂಟರ್ ಸೈನ್ಸ್, ಇನ್ಫಾರ್ಮಶನ್ ಟೆಕ್ನಾಲಜಿ, ಸೈಬರ್ ಸೆಕ್ಯೂರಿಟಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ Ph.D ಹೊಂದಿರಬೇಕು ಜೊತೆಗೆ ಎಂಇ ಎಂ.ಟೆಕ್ ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
  • ಫಾರ್ಮಕಾಲಜಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ Ph.D ಹೊಂದಿರಬೇಕು ಜೊತೆಗೆ ಫಾರ್ಮಸಿ, ಫೋರೆನ್ಸಿಕ್ ಫಾರ್ಮಸಿ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ವಯೋಮಿತಿ ವಿವರ:

ಫೋರೆನ್ಸಿಕ್, ಕಂಪ್ಯೂಟರ್ ಸೈನ್ಸ್, ಇನ್ಫಾರ್ಮಶನ್ ಟೆಕ್ನಾಲಜಿ, ಸೈಬರ್ ಸೆಕ್ಯೂರಿಟಿ, ಫಾರ್ಮಕಾಲಜಿ ವಿಭಾಗದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ. 500/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ರೂ. 250/-
  • PwBD ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಬ್ಯಾಂಕ್ ಖಾತೆಗೆ NEFT ಅಥವಾ UPI ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ಹೊಂದಿರುವ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗುತ್ತದೆ.

  • Ph.D ಪದವೀಧರರಿಗೆ: ರೂ. 90,000/-
  • ಸ್ನಾತಕೋತ್ತರ ಪದವಿ ಹಾಗೂ ನೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ: ರೂ. 75,000/-
  • ಲೆಕ್ಚರರ್ ಹುದ್ದೆಗಳಿಗೆ ರೂ. 68,000/-

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗಳಿಸಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಐಡಿ ಪ್ರೂಫ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ವಿವರಗಳು ಸರಿ ಇದಿಯೇ ಎಂದು ಖಚಿತಪಡಿಸಿಕೊಂಡು ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಕ್ರೀನಿಂಗ್ ಟೆಸ್ಟ್
  • ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ25-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ09-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಧಾರವಾಡ ರಾಷ್ಟೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವು ಪ್ರಸ್ತುತ ಸಾಲಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ವಿವಿಧ ವಿಭಾಗಗಳ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment