Hostel: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಹಾಸ್ಟೇಲ್ ಗಳಿಗೆ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯುವಾಗ ಯಾವುದೇ ರೀತಿಯ ಸಾರಿಗೆ ವ್ಯವಸ್ಥೆಗಳಲ್ಲಿ ಹಾಗೂ ವಸತಿ ಸಮಸ್ಯೆಗಳನ್ನು ಎದುರಾಗಬಾರದು ಎನ್ನುವ ಉದ್ದೇಶದಿಂದ ಈ ಒಂದು ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ.
ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಸತಿನಿಲಯಕ್ಕೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, SSLC ಪೂರ್ಣಗೊಳಿಸಿ ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಸೇರ್ಪಡಿಯಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿನಿಲಯ ವ್ಯವಸ್ಥೆಯನ್ನು ರೂಪಿಸಿದ್ದು, ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕವನ್ನು ಗಳಿಸಿದ ಹಾಗೂ ಮೀಸಲಾತಿ ನಿಯಮಗಳ ಆಧಾರದ ಮೇಲೆ ಕೌನ್ಸಲಿಂಗ್ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಸ್ತುತ ಲೇಖನದಲ್ಲಿ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಇನ್ನಿತರ ಅಗತ್ಯ ಮಾಹಿತಿಗಳನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ |
| ಪ್ರಸ್ತುತ ಶೈಕ್ಷಣಿಕ ವರ್ಷ | 2026-27 |
| ಅರ್ಹ ಕೋರ್ಸ್ ಗಳು | PUC, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ Ph.D ಕೋರ್ಸ್ ಗಳು |
| ವಿವಿಧ ಇಲಾಖೆಗಳು | ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ಆರಂಭ 2026-27:
ಕರ್ನಾಟಕ ಸರ್ಕಾರವು ಪ್ರೌಢಶಿಕ್ಷಣದ ನಂತರ ಉನ್ನತ ಶಿಕ್ಷಣವನ್ನು ಮುಂದುವರೆಸುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದಾಗಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಲಯವನ್ನು ಸ್ಥಾಪಿಸಿದ್ದು, ಪ್ರಸುತ ಸಾಲಿನಲ್ಲಿ ಹಾಸ್ಟೇಲ್ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭಗೊಂಡಿದ್ದು, ವಿವಿಧ ಇಲಾಖೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಹ ನಿಗದಿಪಡಿಸಲಾಗದೆ.
PUC, ಡಿಪ್ಲೊಮಾ, ಐಟಿಐ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ವಸತಿ ಸೌಲಭ್ಯವನ್ನು ಮಾತ್ರ ಒದಗಿಸುವುದಲ್ಲದೆ, ಊಟ, ಅಗತ್ಯ ಮೂಲ ಸೌಕರ್ಯಗಳನ್ನು ಹಾಗೂ ಅಧ್ಯಯನ ಮಾಡಲು ಸೂಕ್ತ ವಾತಾವರಣವನ್ನು ಸಹ ಒದಗಿಸಲಾಗುತ್ತದೆ.
ವಿದ್ಯಾರ್ಥಿನಿಲಯದಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ:
ಟದ ಸೌಲಭ್ಯ ಮಾತ್ರವಲ್ಲದೆ, ಶೈಕ್ಷಣಿಕ ವೆಚ್ಚವನ್ನು ಭರಿಸಲು ಸರ್ಕಾರದಿಂದ ವಿಶೇಷ ಪ್ರೋತ್ಸಾಹಧನವನ್ನೂ ನೀಡಲಾಗುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಿತ ಕಲ್ಯಾಣ ಇಲಾಖೆಗಳ ಅಧೀನದಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಆರ್ಥಿಕ ನೆರವಿನ ಸೌಲಭ್ಯವನ್ನು ಪಡೆಯಬಹುದು.
ವ್ಯಾಸಂಗ ಮಾಡುತ್ತಿರುವ ತರಗತಿ ಅಥವಾ ಕೋರ್ಸ್ಗೆ ಅನುಗುಣವಾಗಿ ಪ್ರೋತ್ಸಾಹಧನದ ಮೊತ್ತವನ್ನು ನಿಗದಿಪಡಿಸಲಾಗಿದೆ. ಅದರಂತೆ
- 8ನೇ, 9ನೇ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ₹8,000,
- ಪ್ರಥಮ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ₹12,000,
- ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹15,000
- ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹20,000 ಪ್ರೋತ್ಸಾಹಧನವನ್ನು ಸರ್ಕಾರ ನೀಡಲಿದೆ.
ಯೋಜನೆಯ ಉದ್ದೇಶ:
- ಸುರಕ್ಷಿತ ವಸತಿ ವ್ಯವಸ್ಥೆ ಕಲ್ಪಿಸುವುದು:
ಗ್ರಾಮೀಣ ಭಾಗದಿಂದ ಹಾಗೂ ದೂರದ ಊರಿನಿಂದ ಬರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನೀಯರಿಗೆ ನಗರಗಳಲ್ಲಿ ಉಚಿತವಾಗಿ ಸುಸಜ್ಜಿತ ವಸತಿ ಸೌಲಭ್ಯವನ್ನು, ಊಟದ ವ್ಯವಸ್ಥೆಯನ್ನು ಹಾಗೂ ಉತ್ತಮ ಅಧ್ಯಯನ ವಾತಾವರಣವನ್ನು ಸೃಷ್ಟಿಸುವುದು ಈ ಯೋಜನೆಯ ಉದ್ದೇಶವಾಗಿದೆ.
- ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು:
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕಾದರೆ ನಗರ ಪ್ರದೇಶಕ್ಕೆ ಬರಬೇಕು. ಆದರೆ ಇಲ್ಲಿ ಕಾಲೇಜಿಗೆ ಸೇರುವ ವಿದ್ಯಾರ್ಥಿಗಳಿಗೆ ಬಾಡಿಗೆ ರೂಮ್ ಗಳ ವೆಚ್ಚ, ಪಿಜಿ, ಊಟದ ವೆಚ್ಚಗಳು ಭಾರಿ ದುಬಾರಿಯಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯವನ್ನು ಒದಗಿಸಿ ಮೂಲಕ ಕುಟುಂಬದವರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
- ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ:
ಗ್ರಾಮೀಣ ಭಾಗದ ಹಾಗೂ ಬಡ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಹಾಗೂ ವಸತಿ ಸೌಲಭ್ಯಗಳ ಸಮಸ್ಯೆಯಿಂದಾಗಿ SSLC ನಂತರ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯವನ್ನು ಕಲ್ಪಿಸಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವಂತೆ ಮಾಡುವುದು.
- ಸಮಾನ ಅವಕಾಶವನ್ನು ಕಲ್ಪಿಸುವುದು:
ಕರ್ನಾಟಕ ಸರ್ಕಾರವು ಸಮಾಜ ಕಲ್ಯಾಣ ಇಲಾಖೆ, ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ, ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ, ಊಟ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಈ ವರ್ಗಗಳ ವಿದ್ಯಾರ್ಥಿಗಳಿಗೂ ಸಹ ಗುಣಮಟ್ಟದ ಉನ್ನತ ಶಿಕ್ಷಣ ಸಿಗುವಂತೆ ಮಾಡುವುದು.
ವಿದ್ಯಾರ್ಥಿನಿಲಯ ಪ್ರವೇಶಾತಿ ಪಡೆಯಲು ಅರ್ಹ ವಿದ್ಯಾರ್ಥಿಗಳು ಯಾರು?
- ವಿದ್ಯಾರ್ಥಿಗಳು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಪಿಯುಸಿ, ಡಿಪ್ಲೊಮಾ, ಐಟಿಐ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿಗಳು ಪ್ರಸ್ತತ ಶೈಕ್ಷಣಿಕ ವರ್ಷದಲ್ಲಿ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಅಥವಾ ಅನುದಾನರಹಿತ ಕಾಲೇಜುಗಳಲ್ಲಿ ಪ್ರವೇಶ ಪಡೆದಿರಬೇಕು.
ಇಲಾಖಾವಾರು ಅರ್ಹತಾ ಮಾನದಂಡಗಳು:
- ಸಮಾಜ ಕಲ್ಯಾಣ ಇಲಾಖೆ:
ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು.
- ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿರಬೇಕು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಪ್ರವರ್ಗ -1, 2A, 3A, 3B ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿರಬೇಕು.
ಪ್ರವರ್ಗ -1 ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು. ಹಾಗೂ 2A, 3A, 3B ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 1 ಲಕ್ಷ ಮೀರಿರಬಾರದು.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ವಿದ್ಯಾರ್ಥಿಗಳ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಹಿಂದಿನ ವರ್ಷಗಳ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಪ್ರಸ್ತುತ ವರ್ಷದ ಕಾಲೇಜು ದಾಖಲಾತಿ ಪತ್ರ
- SSP ಐಡಿ
- ಇತರೆ ಶೈಕ್ಷಣಿಕ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ವಿದ್ಯಾರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅಧಿಕೃತ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಪ್ರವೇಶಾತಿ 2026-27 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ SSP ಐಡಿಯನ್ನು ನಮೂದಿಸಿ, ಐಡಿ ನಮೂದಿಸಿದ ತಕ್ಷಣವೇ ನಿಮ್ಮ ಹೆಸರು,ಪೋಷಕರ ಹೆಸರು, ನೀವು ವ್ಯಾಸಂಗ ಮಾಡುತ್ತಿರುವ ಕಾಲೇಜು ವಿವರಗಳು ಸ್ಕ್ರೀನ್ ಮೇಲೆ ಶೋ ಆಗುತ್ತದೆ.
- ನಂತರ ನೀವು ಪ್ರವೇಶ ಪಡೆಯಲು ಇಚ್ಛಿಸುವ ಹಾಸ್ಟೇಲ್ ಗಳನ್ನು ಆಯ್ಕೆ ಮಾಡಿಕೊಂಡು ನಂತರ ಕೇಳಲಾಗುವ ನಿಮ್ಮ ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್.ಡಿ ನಂಬರ್ ಅನ್ನು ನಮೂದಿಸಿ ಡೇಟಾವನ್ನು ಪರಿಶೀಲಿಸಿ.
- ನಂತರ ಎಲ್ಲ ವಿವರಗಳು ಸರಿಯಿದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
| ಪ್ರಮುಖ ಇವೆಂಟ್ | ಪ್ರಮುಖ ದಿನಾಂಕಗಳು |
|---|---|
| ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
| ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-07-2026 |
| ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-07-2026 |
| ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-07-2026 |
ಪ್ರಮುಖ ಲಿಂಕುಗಳು:
| ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಹಾಸ್ಟೇಲ್ ಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರಿಯಾದ ವಸತಿ ವ್ಯವಸ್ಥೆ ಇಲ್ಲದ ಕಾರಣ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸ್ ಗಳಿಗೆ ಅನುಗುಣವಾಗಿ ಸಹಾಯಧನವನ್ನು ಸಹ ಒದಗಿಸುತ್ತಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಹಾಸ್ಟೇಲ್ ಪ್ರವೇಶ ಹಾಗೂ ಪ್ರೋತ್ಸಾಹಧನದ ಪ್ರಯೋಜನ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Labour: ₹20,000 ಶೈಕ್ಷಣಿಕ ಪ್ರೋತ್ಸಾಹಧನ! ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಡಿಸೆಂಬರ್ 31 ಕೊನೆಯ ದಿನಾಂಕ
- Home: ಜುಲೈ ತಿಂಗಳಿಂದ PM ಆವಾಸ್ ಯೋಜನೆಗೆ ಅರ್ಜಿ ಆರಂಭ! ಸ್ವಂತ ಮನೆಯ ಕನಸು ನನಸಿಗೆ ಸರ್ಕಾರದಿಂದ 2.7 ಲಕ್ಷ ಸಹಾಯಧನ
- Labour: ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಗಿಫ್ಟ್! ತಾಯಿ ಲಕ್ಷ್ಮಿ ಬಾಂಡ್ ಯೋಜನೆಯಡಿ ಸಿಗಲಿದೆ ₹50,000 ಸಹಾಯಧನ
- Application: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಭಾಗ್ಯದ ಜೊತೆಗೆ ಸರ್ಕಾರದಿಂದ ಅರ್ಜಿದಾರರ ಬ್ಯಾಂಕ್ ಖಾತೆಗೆ ₹15,000/- ಜಮಾ!
- Shed : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್! ಶೆಡ್ ನಿರ್ಮಿಸಲು ರೂ. 2,00,000/- ದ ವರೆಗೆ ಸಹಾಯಧನ!