VMC: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ । ಜುಲೈ 15 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ವಿಜಯಪುರ ಮಹಾನಗರ ಪಾಲಿಕೆ (VMC) ಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Vijayapur Municipal Corporation Recruitment


ಒಟ್ಟು 118 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರಪಾವತಿ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಮಾತನಾಡಲು ತಿಳಿದಿರಬೇಕು.

ಪೌರಕಾರ್ಮಿಕ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಇರುವುದಿಲ್ಲ ಹಾಗಾಗಿ ನೇರ ನೇಮಕಾತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಜುಲೈ 15 ರ ವೆರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಯ ಸಂಪೂರ್ಣ ವಿವಿರ, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ.

VMC

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ವಿಜಯಪುರ ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು ಪೌರಕಾರ್ಮಿಕರು
ಹುದ್ದೆಗಳ ಸಂಖ್ಯೆ ಒಟ್ಟು 118 ಹುದ್ದೆಗಳು
ಉದ್ಯೋಗ ಸ್ಥಳ ವಿಜಯಪುರ -ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ವಿಜಯಪುರ ಮಹಾನಗರ ಪಾಲಿಕೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕನ್ನಡವನ್ನು ಮಾತನಾಡಲು ತಿಳಿದಿರುವ ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 1 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ 18 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ರೇಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಟೆಕ್ನಿಷಿಯನ್ ಹುದ್ದೆಗಳನ್ನು ವಿವಿಧ ವಿಭಾಗಗಳಿಗೆ ವರ್ಗೀಕರಣ ಮಾಡಲಾಗಿದೆ ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಪೌರಕಾರ್ಮಿಕರು 118 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಅರ್ಹತೆಯನ್ನು ಹೊಂದಿರಬೇಕು.

  • ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ ಆದರೆ ಅಭ್ಯರ್ಥಿಗಳಿಗೆ ಕನ್ನಡವನ್ನು ಮಾತನಾಡಲು ತಿಳಿದಿರಬೇಕು.
  • ಅಭ್ಯರ್ಥಿಗಳು ಈ ಹಿಂದೆ ವಿಜಯಪುರ ಮಹಾನಗರ ಪಾಲಿಕೆಯಲ್ಲಿ ದಿನಗೂಲಿ, ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಕನಿಷ್ಠ 1 ವರ್ಷಗಳ ಕಾಲ ಪೌರಕಾರ್ಮಿಕ, ಲೋಡರ್ಸ್, ಕ್ಲೀನರ್, ಯುಜಿಡಿ ಹೆಲ್ಪರ್, ಹಾಗೂ ಹೆಲ್ಪರ್ ಆಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಕೋವಿಡ್ -19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಮರಣ ಹೊಂದಿದ ಕಾರ್ಮಿಕರ ಕುಟುಂಬದ ಒಬ್ಬರು ಸದಸ್ಯರಿಗೆ ಅರ್ಜಿ ಸಲ್ಲಿಸಲು ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ:

ವಿಜಯಪುರ ಮಹಾನಗರ ಪಾಲಿಕೆಯು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಹೆಚ್ಚುವರಿ ವಯೋಮಿತಿ ಸಡಿಲಿಕೆಯನ್ನು ನೀಡಿಲ್ಲ.

ಅರ್ಜಿ ಶುಲ್ಕ:

ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಮಹಾನಗರ ಪಾಲಿಕೆಯಲ್ಲಿ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬೇಕು.

ವೇತನ ಶ್ರೇಣಿ:

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ನೇರ ಪಾವತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕರ ಇಲಾಖೆಯ ನಿಯಮಾವಳಿಗಳ ಪ್ರಕಾರ ಕಾಲಕಾಲಕ್ಕೆ ಪರಿಷ್ಕರಿಸಲಾಗುವ ಚಾಲ್ತಿ ವೇತನವನ್ನು ನೀಡಲಾಗುತ್ತದೆ ಹಾಗೂ ಇದರೊಂದಿಗೆ PF ಹಾಗೂ ESI ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಿಜಯಪುರ ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಗೆ ಭೇಟಿ ನೀಡಿ ಪೌರಕಾರ್ಮಿಕ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆಯಿರಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾಗಿರುವ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿರುವ ವಯಸ್ಸಿನ ದೃಢೀಕರಣ ಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಐಡಿ ಪ್ರೂಫ್, ಸೇವಾ ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಮಹಾನಗರ ಪಾಲಿಕೆಯು ನಿಗದಿಪಡಿಸಿದ ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಿ ರಶೀದಿಯನ್ನು ಎಲ್ಲ ದಾಖಲೆಗಳನ್ನೊಳಗೊಂಡ ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಂತರ ಕಚೇರಿಗೆ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೊಂದಿರುವ ಸೇವಾ ಅನುಭವಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಇಬ್ಬರು ಅಭ್ಯರ್ಥಿಗಳು ಒಂದೇ ರೀತಿಯ ಸೇವಾ ಅನುಭವವನ್ನು ಹೊಂದಿದ್ದರೆ ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ವಯಸ್ಸು ಮತ್ತು ಸೇವಾ ಅನುಭವ ಎರಡು ಸಹ ಒಂದೇ ಆಗಿದ್ದರೆ ಲಾಟರಿ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ10-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ದಿನಗೂಲಿ, ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಿಗಿ, ಕ್ಲೀನರ್ ಆಗಿ ಕನಿಷ್ಠ 1 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment