Labour: ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕದ ಕಾರ್ಮಿಕರ ಕಲ್ಯಾಣ ಮಂಡಳಿಯು 2026-27 ನೇ ಸಾಲಿನಲ್ಲಿ ಸಂಘಟಿತ ವಲಯಗಳ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನವನ್ನು ಒದಗಿಸಲು ಆನ್ಲೈನ್ ಅರ್ಜಿಯನ್ನು ಆರಂಭಿಸಿದೆ. ನೋಂದಾಯಿತ ಕಾರ್ಮಿಕರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ದಿನವಿಡೀ ಕಷ್ಟ ಪಟ್ಟು ದುಡಿಯುವ ಕಾರ್ಮಿಕರಿಗೆ ಜೀವನ ನಡೆಸುವುದೇ ಕಷ್ಟವಾಗಿರುವಾಗ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ತಗಲುವ ವೆಚ್ಚವು ಹೆಚ್ಚು ಹೊರೆಯಾಗಿ ಪರಿಣಮಿಸುತ್ತದೆ. ಈ ಒಂದು ಕಾರಣದಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕಾರ್ಮಿಕ ಕಲ್ಯಾಣ ಮಂಡಳಿಯು ಈ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ.
ಶೈಕ್ಷಣಿಕ ಪ್ರೋತ್ಸಾಹಧನ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಡಿಸೆಂಬರ್ 31, 2026 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಯ ಅವಲೋಕನ:
| ಅನುಷ್ಠಾನ ಇಲಾಖೆ | ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿ |
| ಯೋಜನೆಯ ಹೆಸರು | ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿ ಶೈಕ್ಷಣಿಕ ಪ್ರೋತ್ಸಹಧನ ಯೋಜನೆ |
| ಅರ್ಹ ಫಲಾನುಭವಿಗಳು | ಸಂಘಟಿತ ಕಾರ್ಮಿಕರ ಮಕ್ಕಳು |
| ಶೈಕ್ಷಣಿಕ ವರ್ಷ | 2026-27 |
| ಶೈಕ್ಷಣಿಕ ಪ್ರೋತ್ಸಾಹಧನದ ಮೊತ್ತ | ರೂ. 20,000/- |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-12-2026 |
ಯೋಜನೆಯ ಬಗ್ಗೆ:
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ಯೋಜನೆಯನ್ನು ಕರ್ನಾಟಕ ಸರ್ಕಾರದ ಕಾರ್ಮಿಕರ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕಾರಿಗೆ ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸಲು ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.
ಈ ಯೋಜನೆಯಡಿಯಲ್ಲಿ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯ ವರೆಗೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ನೋಂದಾಯಿತ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಕಾರ್ಮಿಕರ ಮಕ್ಕಳಿಗೆ ಈ ಯೋಜನೆಯಡಿಯಲ್ಲಿ ಒಂದು ಶೈಕ್ಷಣಿಕ ವರ್ಷಕ್ಕೆ ವಿವಿಧ ಕೋರ್ಸ್ ಗೆ ಅನುಗುಣವಾಗಿ ರೂ. 20,000/- ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಯೋಜನೆಯ ಮುಖ್ಯ ಗುರಿ:
- ಶಿಕ್ಷಣವನ್ನು ಮುಂದುವರೆಸಲು ಉತ್ತೇಜನ ನೀಡುವುದು:
ಪ್ರತಿಭಾವಂತ ಸಂಘಟಿತ ವಲಯದ ಕಾರ್ಮಿಕರ ಮಕ್ಕಳು ಕೇವಲ ಆರ್ಥಿಕ ಸಂಕಷ್ಟದಿಂದಾಗಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಡಿಯಲ್ಲಿ ಶೈಕ್ಷಣಿಕ ಸಹಾಯಧನವನ್ನು ಒದಗಿಸಿ ಉನ್ನತ ಶಿಕ್ಷಣವನ್ನು ಮುಂದುವರೆಸುವಂತೆ ಮಾಡುವುದು.
- ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ತಪ್ಪಿಸುವುದು:
ಇಂದಿನ ಆಧುನಿಕ ಯುಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ಪಡೆಯುವುದು ತುಂಬಾ ಸವಾಲಾಗಿರುತ್ತದೆ. ಇದರಿಂದಾಗಿ ಪೋಷಕರು ತಮ್ಮ ಮಕ್ಕಳ ದುಬಾರಿ ಶೈಕ್ಷಣಿಕ ವೆಚ್ಚವನ್ನು ಭರಿಸಲು ಸಾಧ್ಯವಾಗುವುದಿಲ್ಲ. ಇಂತಹ ಬಡ ಕಾರ್ಮಿಕರಿಗೆ ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯಧನವನ್ನು ಒದಗಿಸುವ ಮೂಲಕ ಪೋಷಕರ ಮೇಲಿನ ದೊಡ್ಡ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
- ಸಾಮಾಜಿಕ ಭದ್ರತೆಯನ್ನು ಒದಗಿಸುವುದು:
ಸರ್ಕಾರದ ಈ ಯೋಜನೆಯಡಿಯಲ್ಲಿ ಬಡ ವರ್ಗಗಳ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಸಹಾಯಧನವನ್ನು ನೀಡುವ ಮೂಲಕ ಮಕ್ಕಳು ವೈದ್ಯಕೀಯ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆದುವಂತೆ ಮಾಡಿ ಮಕ್ಕಳ ಭವಿಷ್ಯವನ್ನು ಉಜ್ವಲ ಗೊಳಿಸುವುದು. ಇದರಿಂದಾಗಿ ಬಡ ಕಾರ್ಮಿಕರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯು ಹೆಚ್ಚುತ್ತದೆ.
ಯೋಜನೆಯ ಲಾಭ:
- ಕುಟುಂಬದಲ್ಲಿ ಆರ್ಥಿಕ ಸಂಕಷ್ಟವಿದ್ದರೂ ಕೂಡ ಸರ್ಕಾರವು ಶೈಕ್ಷಣಿಕ ನೆರವನ್ನು ಒದಗಿಸುವುದರಿಂದ ಕಾರ್ಮಿಕರ ಮಕ್ಕಳು ನಿಶ್ಚಿಂತೆಯಿಂದ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಇನ್ನಿತರ ದುಬಾರಿ ವೃತ್ತಿಪರ ಕೋರ್ಸ್ ಗಳನ್ನು ಆಯ್ಕೆಮಾಡಿಕೊಂಡು ವ್ಯಾಸಂಗ ಮಾಡಬಹುದಾಗಿದೆ.
- ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಸಹಾಯಧನವು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ.
- ಕಡಿಮೆ ಆದಾಯ ಹೊಂದಿರುವ ಕಾರ್ಮಿಕರ ಮಕ್ಕಳಿಗೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್ ಗಳಿಗೆ ಅನುಗುಣವಾಗಿ ಸಹಾಯಧನವನ್ನು ಒದಗಿಸುವುದರಿಂದ ಪೋಷಕರ ಮೇಲಿನ ಆರ್ಥಿಕ ಹೊರೆಯು ಕಡಿಮೆಯಾಗುತ್ತದೆ.
- ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿಯಲ್ಲಿ ಕಾರ್ಮಿಕರ ಇಬ್ಬರು ಮಕ್ಕಳು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಯೋಜನೆಯಲಿಡಿಯಲ್ಲಿ ಸಿಗುವ ಸಹಾಯಧನದ ವಿವರ:
ಸರ್ಕಾರವು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸ್ ಗಳಿಗೆ ಅನುಗುಣವಾಗಿ ಶೈಕ್ಷಣಿಕ ಪ್ರೋತ್ಸಾಹಧನ ಮೊತ್ತವನ್ನು ನಿಗದಿಪಡಿಸಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಿನ ಕೋಷ್ಠಕದಲ್ಲಿದೆ.
| ಕೋರ್ಸ್ ವಿವರ | ವಾರ್ಷಿಕ ಸಿಗುವ ಪ್ರೋತ್ಸಾಹಧನದ ಮೊತ್ತ |
| ಪ್ರೌಢಶಾಲೆ (8 ನೇ ತರಗತಿಯಿಂದ 10 ನೇ ತರಗತಿ) | ₹6000/- |
| PUC, ಐಟಿಐ, ಡಿಪ್ಲೊಮಾ, ಟಿ.ಸಿ.ಹೆಚ್ ಕೋರ್ಸ್ | ₹8000/- |
| ಸಾಮಾನ್ಯ ಪದವಿ ಕೋರ್ಸ್ (ಬಿಕಾಂ, ಬಿಎ, ಬಿಬಿಎ, ಬಿಎಸ್ಸಿ ಹಾಗೂ ಇತ್ಯಾದಿ) | ₹10,000/- |
| ಸ್ನಾತಕೋತ್ತರ ಪದವಿ (ಎಂಎ, ಎಂಎಸ್ಸಿ, ಎಂಬಿಎ, ಎಂಕಾಂ ಹಾಗೂ ಇತ್ಯಾದಿ) | ₹12,000/- |
| ವೃತ್ತಿಪರ ಕೋರ್ಸ್ ಗಳು (ಇಂಜಿನಿಯರಿಂಗ್, ವೈದ್ಯಕೀಯ ಹಾಗೂ ಇತ್ಯಾದಿ ಕೋರ್ಸ್ ಗಳು) | ₹20,000/- |
ಅರ್ಹತಾ ಮಾನದಂಡಗಳು:
- ತಂದೆ ಅಥವಾ ತಾಯಿ ಕಡ್ಡಾಯವಾಗಿ ನೋಂದಾಯಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರಬೇಕು.
- ಪೋಷಕರು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ನಿಯಮಿತವಾಗಿ ಕಾರ್ಮಿಕ ಕಲ್ಯಾಣ ನಿಧಿ ವಂತಿಕೆಯನ್ನು ನಿಯಮಿತವಾಗಿ ಪಾವತಿಸುತ್ತಿರಬೇಕು.
- ಪೋಷಕರ ಮಾಸಿಕ ವೇತನ ರೂ. 35,000/- ಮೀರಿರಬಾರದು.
- ವಿದ್ಯಾರ್ಥಿಗಳು ಪ್ರೌಢಶಾಲೆ, PUC, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ 45% ಹಾಗೂ ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳು 50% ಅಂಕಗಳನ್ನು ಗಳಿಸಿರಬೇಕು.
- ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದು.
ಅಗತ್ಯ ದಾಖಲೆಗಳು:
- ಪೋಷಕರ ಉದ್ಯೋಗ ಪ್ರಮಾಣಪತ್ರ
- ವಂತಿಕೆ ಪಾವತಿ ರಶೀದಿ
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಹಿಂದಿನ ಶೈಕ್ಷಣಿಕ ವರ್ಷಗಳ ಅಂಕಪಟ್ಟಿ
- ಶಾಲಾ/ಕಾಲೇಜು ಶುಲ್ಕ ರಶೀದಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ವಿದ್ಯಾರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ಪೋರ್ಟಲ್ https://klwb.karnataka.gov.in/ ಗೆ ಭೇಟಿ ನೀಡಿ.
- ಹೊಸ ಬಳಕೆದಾರರಾಗಿದ್ದರೆ, ನ್ಯೂ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಮೂಲ ವಿವರಗಳನ್ನು ಭರ್ತಿ ಮಾಡಿ OTP ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಲಾಗಿನ್ ಐಡಿ ಮತ್ತು ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಸ್ಕ್ರೀನ್ ಮೇಲೆ ಕಾಣುವ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ 2026-27 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ವಿದ್ಯಾರ್ಥಿಗಳ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅಂಕಗಳ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಮೇಲೆ ತಿಳಿಸಿಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಜುಲೈ 2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-12-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ಕಾರ್ಮಿಕ ಕಲ್ಯಾಣ ಮಂಡಳಿಯ ಅಡಿಯಲ್ಲಿ ಸಂಘಟಿತ ವಲಯಗಳ ಕಾರ್ಮಿಕರ ಮಕ್ಕಳಿಗೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್ ಗಳಿಗೆ ಅನುಗುಣವಾಗಿ ಶೈಕ್ಷಣಿಕ ನೆರವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.
| ಹೆಚ್ಚಿನ ಮಾಹಿತಿಗಾಗಿ: “ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2 ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು – 560022 ಗೆ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ: 080 23475188 ಗೆ ಕರೆ ಮಾಡಿ.” |
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Home: ಜುಲೈ ತಿಂಗಳಿಂದ PM ಆವಾಸ್ ಯೋಜನೆಗೆ ಅರ್ಜಿ ಆರಂಭ! ಸ್ವಂತ ಮನೆಯ ಕನಸು ನನಸಿಗೆ ಸರ್ಕಾರದಿಂದ 2.7 ಲಕ್ಷ ಸಹಾಯಧನ
- Labour: ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಗಿಫ್ಟ್! ತಾಯಿ ಲಕ್ಷ್ಮಿ ಬಾಂಡ್ ಯೋಜನೆಯಡಿ ಸಿಗಲಿದೆ ₹50,000 ಸಹಾಯಧನ
- Application: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಭಾಗ್ಯದ ಜೊತೆಗೆ ಸರ್ಕಾರದಿಂದ ಅರ್ಜಿದಾರರ ಬ್ಯಾಂಕ್ ಖಾತೆಗೆ ₹15,000/- ಜಮಾ!
- Shed : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್! ಶೆಡ್ ನಿರ್ಮಿಸಲು ರೂ. 2,00,000/- ದ ವರೆಗೆ ಸಹಾಯಧನ!
- Food Kit: ರೂ. 3 ಲಕ್ಷ ಸಹಾಯಧನ! ಆಹಾರ ವಾಹಿನಿ ಯೋಜನೆಗೆ ಅರ್ಜಿ ಆರಂಭ । ಸ್ವಂತ ಉದ್ಯೋಗ ಆರಂಭಿಸಲು ಸರ್ಕಾರದ ಬಂಪರ್ ಆಫರ್