Data Entry Application: ರೂ. 81,100/- ವೇತನ! ಕರ್ನಾಟಕ ಹೈಕೋರ್ಟ್ ಭರ್ಜರಿ ನೇಮಕಾತಿ 2026! ಪದವೀಧರರಿಗೆ ಸುವರ್ಣಾವಕಾಶ । 28 ಜುಲೈ ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪದವಿ ಪೂರ್ಣಗೊಳಿಸಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಗೌರವಾನ್ವಿತ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ನಿಮ್ಮ ಈ ಕನಸನ್ನು ನನಸು ಮಾಡಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ! ಕರ್ನಾಟಕ ಹೈಕೋರ್ಟ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

Data Entry Assistant Recruitment 2026


ಇಲ್ಲಿ ಖಾಲಿ ಇರುವ 28 ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಿಷಯದಲ್ಲಿ ಪದವಿ ಮುಗಿಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ರೂ. 25500/- ರಿಂದ ರೂ. 81,100/- ವರೆಗೆ ಅತ್ಯಾಕರ್ಷಕ ವೇತನವನ್ನು, ಭತ್ಯೆಗಳನ್ನು ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

Data Entry Application

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರುಕರ್ನಾಟಕ ಹೈಕೋರ್ಟ್, ಬೆಂಗಳೂರು
ಹುದ್ದೆಯ ಹೆಸರು ಡೇಟಾ ಎಂಟ್ರಿ ಅಸಿಸ್ಟೆಂಟ್
ಹುದ್ದೆಯ ಸಂಖ್ಯೆ ಒಟ್ಟು 28 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ಉಚ್ಚ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆರ್ಟ್ಸ್, ಕಾಮರ್ಸ್, ಸೈನ್ಸ್, ಬಿಸಿನೆಸ್ ಮ್ಯಾನೇಜ್ಮೆಂಟ್, ಕಂಪ್ಯೂಟರ್ ಅಪ್ಲಿಕೇಶನ್ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರುವ 18 ವರ್ಷದಿಂದ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಕರ್ನಾಟಕ ಹೈಕೋರ್ಟ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳನ್ನು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ ಈ ಎರಡು ವೃಂದಗಳ ಅಡಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಹುದ್ದೆಗಳ ಸಂಕ್ಷಿಪ್ತ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಕಲ್ಯಾಣ ಕರ್ನಾಟಕ ವೃಂದ 7
ಉಳಿಕೆ ಮೂಲ ವೃಂದ 21

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 7 ಹುದ್ದೆಗಳಲ್ಲಿ 2 ಹೊಸ ಹುದ್ದೆಗಳಾಗಿದ್ದು, 5 ಬ್ಯಾಕ್ಲಾಗ್ ಹುದ್ದೆಗಳಾಗಿರುತ್ತದೆ.

ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ 21 ಹುದ್ದೆಗಳಲ್ಲಿ 15 ಹುದ್ದೆಗಳು ಹೊಸ ಹುದ್ದೆಗಳಾಗಿದ್ದು, 6 ಹುದ್ದೆಗಳು ಬ್ಯಾಕ್ಲಾಗ್ ಹುದ್ದೆಗಳಾಗಿರುತ್ತದೆ.

ಶೈಕ್ಷಣಿಕ ಅರ್ಹತೆ:

  • ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆರ್ಟ್ಸ್, ಕಾಮರ್ಸ್, ಸೈನ್ಸ್, ಬಿಸಿನೆಸ್ ಮ್ಯಾನೇಜ್ಮೆಂಟ್ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
    • ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕಾಗುತ್ತದೆ.
  • ಇವುಗಳ ಜೊತೆಗೆ ಅಭ್ಯರ್ಥಿಗಳು ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಸೀನಿಯರ್ ಗ್ರೇಡ್ ಟೈಪ್ರೈಟಿಂಗ್ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಿಂದ ಬೇಸಿಕ್ ಕಂಪ್ಯೂಟರ್ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

  • ಹಾಗೂ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರವರ್ಗ 2A, 2B, 3A, 3B ವರ್ಗಗಳ ಅಭ್ಯರ್ಥಿಗಳು ಗರಿಷ್ಟ 43 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾವಳಿಗಳ ಹಾಗೂ ಹೈಕೋರ್ಟ್ ನ ನಿಯಮಾವಳಿಗಳ ಪ್ರಕಾರ ಅರ್ಹ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಿಭಿನ್ನ ರೀತಿಯಲ್ಲಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಸಾಮಾನ್ಯ ಹಾಗೂ ಇತರೆ ಹಿಂದುಳಿದ 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ: ರೂ. 350/-
  • ಪ್ರವರ್ಗ -I, ಅಂಗವಿಕಲ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: ರೂ. 200/-

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆನ್ಲೈನ್ ಪಾವತಿ ಗೇಟ್ ವೇ ಮೂಲಕ ಮಾತ್ರ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಕರ್ನಾಟಕ ಹೈಕೋರ್ಟ್ ನ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500/- ರೂ. 81,100/- ವರೆಗೆ ಅತ್ಯಾಕರ್ಷಕ ವೇತನವನ್ನು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಟೈಪಿಂಗ್ ಟೆಸ್ಟ್:

ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿದ ಅಂಕಗಳು ಹಾಗೂ ಅರ್ಹತೆಗಳ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳ ಸಂಖ್ಯೆಗೆ 10 ಪಟ್ಟು ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್ ಗೆ ಕರೆಯಲಾಗುತ್ತದೆ. ಈ ಒಂದು ಟೈಪಿಂಗ್ ಟೆಸ್ಟ್ ಒಟ್ಟು 100 ಅಂಕಗಳನ್ನು ಒಳಗೊಡಿದ್ದು, ಅಭ್ಯರ್ಥಿಗಳು 500 ಪದಗಳನ್ನು 20 ನಿಮಿಷದಲ್ಲಿ ಟೈಪ್ ಮಾಡಬೇಕಾಗುತ್ತದೆ. ಅಭ್ಯರ್ಥಿಗಳು ಈ ಹಂತದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಇದಕ್ಕಿಂತ ಕಡಿಮೆ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಅನರ್ಹರಾಗಿರುತ್ತಾರೆ.

  • ಸಂದರ್ಶನ:

ಟೈಪಿಂಗ್ ಟೆಸ್ಟ್ ನಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಸಂದರ್ಶನವು 20 ಅಂಕಗಳನ್ನು ಒಳಗೊಂಡಿದ್ದು, ಅಭ್ಯರ್ಥಿಗಳು ಕಡ್ಡಾಯವಾಗಿ 10 ಅಂಕಗಳನ್ನು ಗಳಿಸಬೇಕಾಗುತ್ತದೆ.

  • ಅಂತಿಮ ಮೆರಿಟ್ ಪಟ್ಟಿ:

ಅಭ್ಯರ್ಥಿಗಳು ಟೈಪಿಂಗ್ ಟೆಸ್ಟ್ ಹಾಗೂ ಸಂದರ್ಶನದಲ್ಲಿ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ 29-06-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 29-06-2026
ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ28-07-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಟೈಪಿಂಗ್ ಸಾಮರ್ಥ್ಯವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment