KEA: ರಾಜ್ಯದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ 1042 ಶಿಕ್ಷಕರ ಹುದ್ದೆಗಳಿಗೆ ಬೃಹತ್ ನೇಮಕಾತಿ! ಇಂದೇ ಅಪ್ಲೈ ಮಾಡಿ

ಶೈಕ್ಷಣಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯು ರಾಜ್ಯದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ ಖಾಲಿ ಇರುವ 1042 ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮೋದನೆ ಹೊರಡಿಸಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

KEA Recruitment 2026


ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಮೌಲಾನಾ ಅಜಾದ್ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಿವಿಧ ಭಾಷಾ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಸಂಬಂಧಿತ ವಿಷಯದಲ್ಲಿ ಬಿ.ಎಡ್, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಅಡಿಯಲ್ಲಿ ನಡೆಯಲಿದ್ದು, ಪ್ರಸ್ತುತ ಲೇಖನದಲ್ಲಿ ಯಾವ ವಸತಿ ಶಾಲೆಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ? ಹುದ್ದೆಗೆ ಸಂಬಂಧಿಸಿದ ಅರ್ಹತೆಗೇನು ಎನ್ನುವುದನ್ನು ತಿಳಿದುಕೊಳ್ಳೋಣ.

KEA

ಪ್ರಮುಖ ಹೈಲೈಟ್ ಪಾಯಿಂಟ್ಸ್:

* ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ರಾಜ್ಯದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿದೆ.
* ಬರೋಬ್ಬರಿ 1042 ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಖಾಯಂ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಗ್ರೀನ್ ಸಿಗ್ನಲ್.
* ರಾಜ್ಯದ ಪ್ರತಿಷ್ಠಿತ ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ನೇಮಕಾತಿ ನಡೆಯಲಿದೆ.
* ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಜವಾಬ್ದಾರಿ ವಹಿಸಲಾಗಿದೆ.
* ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಈ ಒಂದು ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳ ಭರ್ತಿಗೆ ನೇಮಕಾತಿ ಅನುಮೋದನೆಯನ್ನು ಹೊರಡಿಸಿದ್ದು ಯಾವ ವಸತಿ ಶಾಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ಶೈಕ್ಷಣಿಕ ಸಂಸ್ಥೆಗಳು ಕಲ್ಯಾಣ ಕರ್ನಾಟಕ ವೃಂದ ಉಳಿಕೆ ಮೂಲ ವೃಂದ ಮಂಜೂರಾದ ಒಟ್ಟು ಹುದ್ದೆಗಳು
ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು 119 ಹುದ್ದೆಗಳು 333 ಹುದ್ದೆಗಳು452 ಹುದ್ದೆಗಳು
ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ 44 ಹುದ್ದೆಗಳು14 ಹುದ್ದೆಗಳು58 ಹುದ್ದೆಗಳು
ಮೌಲಾನಾ ಅಜಾದ್ ಮಾದರಿ ವಸತಿ ಶಾಲೆ ಮತ್ತು ಕಾಲೇಜು143 ಹುದ್ದೆಗಳು389 ಹುದ್ದೆಗಳು532 ಹುದ್ದೆಗಳು

ಪ್ರತಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳ ವಿವರ:

  • ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು:
ಹುದ್ದೆಗಳ ಹೆಸರು ಒಟ್ಟು ಖಾಲಿ ಇರುವ ಹುದ್ದೆಗಳು
ಕನ್ನಡ ಭಾಷಾ ಉಪನ್ಯಾಸಕರು 8 ಹುದ್ದೆಗಳು
ಇಂಗ್ಲಿಷ್ ಭಾಷಾ ಉಪನ್ಯಾಸಕರು 10 ಹುದ್ದೆಗಳು
ಉರ್ದು ಭಾಷಾ ಉಪನ್ಯಾಸಕರು 02 ಹುದ್ದೆಗಳು
ಭೌತಶಾಸ್ತ್ರ ಉಪನ್ಯಾಸಕರು 57 ಹುದ್ದೆಗಳು
ಗಣಿತಶಾಸ್ತ್ರ ಉಪನ್ಯಾಸಕರು 57 ಹುದ್ದೆಗಳು
ರಸಾಯನ ಶಾಸ್ತ್ರ ಉಪನ್ಯಾಸಕರು57 ಹುದ್ದೆಗಳು
ಜೀವಶಾಸ್ತ್ರ ಉಪನ್ಯಾಸಕರು57 ಹುದ್ದೆಗಳು
ಗಣಕಯಂತ್ರ ಉಪನ್ಯಾಸಕರು48 ಹುದ್ದೆಗಳು
ಇತಿಹಾಸ ಉಪನ್ಯಾಸಕರು3 ಹುದ್ದೆಗಳು
ಅರ್ಥಶಾಸ್ತ್ರ ಉಪನ್ಯಾಸಕರು47 ಹುದ್ದೆಗಳು
ವಾಣಿಜ್ಯ ಶಾಸ್ತ್ರ ಉಪನ್ಯಾಸಕರು53 ಹುದ್ದೆಗಳು
ಲೆಕ್ಕ ಶಾಸ್ತ್ರ ಉಪನ್ಯಾಸಕರು53 ಹುದ್ದೆಗಳು
  • ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ:
ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಕನ್ನಡ ಭಾಷಾ ಶಿಕ್ಷಕರು 6 ಹುದ್ದೆಗಳು
ಇಂಗ್ಲಿಷ್ ಭಾಷಾ ಶಿಕ್ಷಕರು 7 ಹುದ್ದೆಗಳು
ಹಿಂದಿ ಭಾಷಾ ಶಿಕ್ಷಕರು 3 ಹುದ್ದೆಗಳು
ಉರ್ದು ಭಾಷಾ ಶಿಕ್ಷಕರು 4 ಹುದ್ದೆಗಳು
ಸಮಾಜ ವಿಜ್ಞಾನ ಶಿಕ್ಷಕರು 8 ಹುದ್ದೆಗಳು
ಗಣಿತ ಶಿಕ್ಷಕರು 10 ಹುದ್ದೆಗಳು
ಗಣಿತ ಶಾಸ್ತ್ರ ಶಿಕ್ಷಕರು 7 ಹುದ್ದೆಗಳು
ಭೌತಶಾಸ್ತ್ರ ಶಿಕ್ಷಕರು 7 ಹುದ್ದೆಗಳು
ರಸಾಯನ ಶಾಸ್ತ್ರ ಶಿಕ್ಷಕರು 6 ಹುದ್ದೆಗಳು
  • ಮೌಲಾನಾ ಅಜಾದ್ ಮಾದರಿ ವಸತಿ ಶಾಲೆ ಮತ್ತು ಕಾಲೇಜು:
ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಕನ್ನಡ ಭಾಷಾ ಶಿಕ್ಷಕರು 91 ಹುದ್ದೆಗಳು
ಇಂಗ್ಲಿಷ್ ಭಾಷಾ ಶಿಕ್ಷಕರು 88 ಹುದ್ದೆಗಳು
ಉರ್ದು ಭಾಷಾ ಶಿಕ್ಷಕರು 95 ಹುದ್ದೆಗಳು
ಸಮಾಜ ವಿಜ್ಞಾನ ಶಿಕ್ಷಕರು 86 ಹುದ್ದೆಗಳು
ಗಣಿತ ಶಿಕ್ಷಕರು 88 ಹುದ್ದೆಗಳು
ಸಾಮಾನ್ಯ ವಿಜ್ಞಾನ ಶಿಕ್ಷಕರು 84 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ರಾಜ್ಯದ ಪ್ರತಿಷ್ಠಿತ ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಯ ಸ್ವರೂಪಕ್ಕೆ ತಕ್ಕಂತೆ ಪದವಿ, ಸ್ನಾತಕೋತ್ತರ ಪದವಿ, ಬಿ.ಎಡ್ ಪೂರಣಗೊಳಿಸಿರಬೇಕು ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆಯ ಮಾನದಂಡಗಳನ್ನು ನಿಗದಿಪಡಿಸಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ:

ರಾಜ್ಯದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಗೆ ತಿಳಿಸಲಾದ ಮೂರು ಹಂತಗಳ ಮೂಲಕ ನೇರವಾಗಿ ನೇಮಕ ಮಾಡಿಕೊಳ್ಳುತ್ತದೆ.

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಮೆರಿಟ್ ಪಟ್ಟಿ ಹಾಗೂ ಮೀಸಲಾತಿ ನಿಯಮಗಳ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆಗಳ ಭರ್ತಿಗೆ ತನ್ನ ಅಧಿಕೃತ ವೆಬ್ಸೈಟ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಿದೆ. ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ನಂತರವೇ ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಹುದ್ದೆಯ ಕುರಿತು ಇನ್ನಿತರ ಅಗತ್ಯ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment