Fireman: ರೂ. 2,20,000/- ವೇತನ! ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2026! ಕೊನೆಯ ದಿನ 20 ಜುಲೈ

ಸರ್ಕಾರಿ ಉದ್ಯೋಗದ ನೀರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಜೂನಿಯರ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

HPCL Recruitment 2026


ಡಿಪ್ಲೊಮಾ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗುರುತ್ತಾರೆ. ಅತ್ಯಾಕರ್ಷಕ ವೇತನದೊಂದಿಗೆ ಗೌರವಯುತ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸಂಪೂರ್ಣ ಆನ್ಲೈನ್ ಮೂಲಕ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 20-07-2026 ರ ಒಳಗೆ HPCL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

HPCL

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು ಜೂನಿಯರ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಆಫೀಸರ್, ಚೀಫ್ ಎಕ್ಸಿಕ್ಯೂಟಿವ್ ಹಾಗೂ ಇನ್ನು ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 116 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 116 ಜೂನಿಯರ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಆಫೀಸರ್, ಚೀಫ್ ಎಕ್ಸಿಕ್ಯೂಟಿವ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಪದವಿ, ಇಂಜಿನಿಯರಿಂಗ್ ಪದವಿ ಹಾಗೂ ಎಂಬಿಎ ಪದವಿ ಪೂರ್ಣಗೊಳಿಸಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 2,20,000/- ವರೆಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಜನರಲ್ ಮ್ಯಾನೇಜರ್ 1 ಹುದ್ದೆ
ಚೀಫ್ ಮ್ಯಾನೇಜರ್ (ಎಕಾನಾಮಿಸ್ಟ್)1 ಹುದ್ದೆ
ಚೀಫ್ ಮ್ಯಾನೇಜರ್ (ಟೆಕ್ನಿಕಲ್ ಸರ್ವಿಸಸ್)1 ಹುದ್ದೆ
ಅಸಿಸ್ಟೆಂಟ್ ಮ್ಯಾನೇಜರ್ (ಪ್ರಾಜೆಕ್ಟ್ಸ್)5 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಅಂಡ್ ಸೇಫ್ಟಿ)17 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಕೆಮಿಕಲ್)37 ಹುದ್ದೆಗಳು
ಸೀನಿಯರ್ ಆಫೀಸರ್ (ಸೇಲ್ಸ್) (ಚಿಲ್ಲರೆ ಮಾರಾಟ, ನೇರ ಮಾರಾಟ, LPG)52 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಜನರಲ್ ಮ್ಯಾನೇಜರ್ ಹಾಗೂ ಇತರೆ ಮ್ಯಾನೇಜರ್ ಹುದ್ದೆಗಳು:

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ವೃತ್ತಿಪರ ಅನುಭವವನ್ನು ಸಹ ಹೊಂದಿರಬೇಕು.

  • ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಅಂಡ್ ಸೇಫ್ಟಿ):

ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಅಂಡ್ ಸೇಫ್ಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸೈನ್ಸ್ ಪದವಿ ಜೊತೆಗೆ ಫೈರ್ ಮತ್ತು ಸೇಫ್ಟಿ ವಿಷಯದಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು ಜೊತೆಗೆ ಚಾಲ್ತಿಯಲ್ಲಿರುವ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

  • ಜೂನಿಯರ್ ಎಕ್ಸಿಕ್ಯೂಟಿವ್ (ಕೆಮಿಕಲ್):

ಜೂನಿಯರ್ ಎಕ್ಸಿಕ್ಯೂಟಿವ್ ಕೆಮಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಸಾಯನಿಕ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

  • ಸೀನಿಯರ್ ಆಫೀಸರ್ (ಸೇಲ್ಸ್):

ಸೀನಿಯರ್ ಆಫೀಸರ್ (ಸೇಲ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್, ಇನ್ಸ್ಟ್ರುಮೆಂಟೇಷನ್ ಅಥವಾ ಸಿವಿಲ್ ವಿಷಯಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಕೋರ್ಸ್ ಪೂರ್ಣಗೊಳಿಸಿರಬೇಕು ಹಾಗೂ ಇದರ ಜೊತೆಗೆ ಎರಡು ವರ್ಷಗಳ ಎಂಬಿಎ ಅಥವಾ ಪಿಜಿಡಿಎಮ್ ಪದವಿ ಹೊಂದಿರಬೇಕು.

ವಯೋಮಿತಿ ವಿವರ:

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನ ನೇಮಕಾತಿ ನಿಯಮಾವಳಿಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ವಿವರ ಈ ಕೆಳಕಂಡಂತಿದೆ.

  • ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು
  • ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 31 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಸೀನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಸರ್ಕಾರದ ನಿಯಮಾವಳಿಗಳ ಪ್ರಕಾರ, ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
  • PwBDಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 1000 + 18% GST
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ UPI ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

  • ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 80,000/- ದಿಂದ ರೂ. 2,20,000/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 70,000/- ದಿಂದ ರೂ. 2,00,000/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ದಿಂದ ರೂ. 1,20,000/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಸೀನಿಯರ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000/- ದಿಂದ ರೂ. 1,80,000/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು HPCL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಇಮೇಲ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಸಹಿಯನ್ನು, ಶೈಕ್ಷಣಿಕ ಪ್ರಮಾಣಪತ್ರವನ್ನು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ವಿವರಗಳು ಸರಿ ಇದಿಯೇ ಎಂದು ಖಚಿತಪಡಿಸಿಕೊಂಡು ಪೇಮೆಂಟ್ ಆಯ್ಕೆಗೆ ಹೋಗಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಗ್ರೂಪ್ ಟಾಸ್ಕ್
  • ವೈಯಕ್ತಿಕ ಸಂದರ್ಶನ
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ01-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-07-2026
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ ಆಗಸ್ಟ್/ ಸೆಪ್ಟೆಂಬರ್ 2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಅಸ್ಸಿಸ್ಟಂಟ್ ಮ್ಯಾನೇಜರ್, ಜೂನಿಯರ್ ಎಕ್ಸಿಕ್ಯೂಟಿವ್, ಸೀನಿಯರ್ ಆಫೀಸರ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕಾ ಅರ್ಜಿ ಸಲ್ಲಿಸಿ ಅತ್ಯಾಕರ್ಷಕ ವೇತನವಿರುವ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment