PMVY: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಪಿಎಂ ವಿಶ್ವಕರ್ಮ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಮತ್ತು ತರಬೇತಿ! ಇಂದೇ ಅಪ್ಲೈ ಮಾಡಿ

ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ದೇಶದ ಲಕ್ಷಾಂತರ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರವನ್ನು ಹಾಗೂ ಉಚಿತ ತರಬೇತಿಯನ್ನು ನೀಡಲು ಮುಂದಾಗಿದ್ದು, ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನುಆಹ್ವಾನಿಸಲಾಗಿದೆ.

PMVY Scheme 2026


ದೇಶದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಾಗೂ ಸಮಾಜದಲ್ಲಿ ಅವರನ್ನು ಸ್ವಾವಲಂಬಿಯಾಗಿ ಮಾಡುವ ಉದ್ದೇಶದಿಂದ ಈ ಒಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಿದ್ದು, ಗ್ರಾಮೀಣ ಪ್ರದೇಶದ, ನಗರ ಪ್ರದೇಶದ ಮತ್ತು ಬಡ ವರ್ಗದ ಪ್ರತಿ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಪ್ರಸ್ತುತ ಲೇಖನದಲ್ಲಿ ಯೋಜನೆಯ ಸಂಪೂರ್ಣ ವಿವರ, ಯೋಜನೆಯಡಿಯಲ್ಲಿ ಸಿಗುವ ಸೌಲಭ್ಯಗಳು, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಯಾರು ಅರ್ಹರು? ಅಗತ್ಯ ದಾಖಲೆಗಳು ಯಾವುವು? ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

PMVY

ಯೋಜನೆಯ ಕಿರು ವಿಮರ್ಶೆ:

ಯೋಜನೆಯ ಹೆಸರು ಪಿಎಂ ವಿಶ್ವಕರ್ಮ ಯೋಜನೆ
ಅರ್ಹ ಫಲಾನುಭವಿಗಳು ಗ್ರಾಮೀಣ ಹಾಗೂ ನಗರ ಭಾಗದ ಹೊಲಿಗೆ ಕೆಲಸಗಾರರು ಹಾಗೂ ಹೊಲಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳೆಯರು
ಪ್ರಮುಖ ಸೌಲಭ್ಯಗಳು ಉಚಿತ ಹೊಲಿಗೆಯಂತ್ರ ಮತ್ತು ತರಬೇತಿ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ (ಬಯೋಮೆಟ್ರಿಕ್)
ತರಬೇತಿ ಅವಧಿ ಮೂಲ ತರಬೇತಿ 6-7 ದಿನಗಳು ಹಾಗೂ ಸುಧಾರಿತ ತರಬೇತಿ 15 ದಿನಗಳು

ಏನಿದು ಪಿಎಂ ವಿಶ್ವಕರ್ಮ ಯೋಜನೆ?

ಕೇಂದ್ರ ಸರ್ಕಾರವು ಭಾರತದ ಕುಶಲಕರ್ಮಿಗಳಿಗೆ, ಸಣ್ಣ ಕಸಬುಗಳಲ್ಲಿ ತೊಡಗಿರುವವರಿಗೆ ಪ್ರೋತ್ಸಾಹವನ್ನು ಒದಗಿಸುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಒಟ್ಟು 18 ರೀತಿಯ ಸಾಂಪ್ರದಾಯಿಕ ವೃತ್ತಿಗಳನ್ನು ಮಾಡುತ್ತಿರುವ ಕುಶಲಕರ್ಮಿಗಳಿಗೆ ಅವರ ವೃತ್ತಿಗೆ ಅನುಗುಣವಾಗಿ ಯಂತ್ರಗಳನ್ನು ಹಾಗೂ ತರಬೇತಿಗಳನ್ನು ನೀಡಲಾಗುತ್ತದೆ.

ಈ 18 ರೀತಿಯ ಸಾಂಪ್ರದಾಯಿಕ ವೃತ್ತಿಗಳಲ್ಲಿ ದರ್ಜಿ ಕೆಲಸವು ಒಂದಾಗಿದ್ದು, ಮಹಿಳೆಯರು ಮನೆಯಲ್ಲಿ ಕುಳಿತು ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರವನ್ನು ಹಾಗೂ ತರಬೇತಿಯನ್ನು ನೀಡಲಾಗುತ್ತದೆ.

ಯೋಜನೆಯ ಉದ್ದೇಶ:

  • ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವುದು:

ಈ ಯೋಜನೆಯ ಪ್ರಮುಖ ಗುರಿಯು ಮಹಿಳೆಯರು ತಮ್ಮದೇ ಆದ ಉದ್ಯೋಗವನ್ನು ಆರಂಭಿಸಿ ಆರ್ಥಿಕವಾಗಿ ಸ್ವತಂತ್ರರಾಗುವಂತೆ ಮಾಡುವುದು. ಹೊಲಿಗೆ ಯಂತ್ರ ಮತ್ತು ತರಬೇತಿಯ ನೆರವಿನಿಂದ ಅವರು ತಮ್ಮ ಕೌಶಲ್ಯವನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬಹುದು.

  • ಕೌಶಲ್ಯವನ್ನು ಅಭಿವೃದ್ಧಿ ಪಡಿಸುವುದು:

ಬಹಳಷ್ಟು ಮಹಿಳೆಯರಿಗೆ ಹೊಲಿಗೆ ಬಗ್ಗೆ ಮೂಲಭೂತ ಜ್ಞಾನವಿದ್ದರೂ ಅದನ್ನು ವೃತ್ತಿಯಾಗಿ ರೂಪಿಸಲು ಅವಕಾಶ ಸಿಗುವುದಿಲ್ಲ. ಈ ಯೋಜನೆಯ ಮೂಲಕ ಅವರಿಗೆ ವೃತ್ತಿಪರ ತರಬೇತಿ ನೀಡಿ ಕೌಶಲ್ಯವನ್ನು ಉದ್ಯೋಗವನ್ನಾಗಿ ರೂಪಿಸಲು ನೆರವಾಗುತ್ತದೆ.

  • ಬಡ ಮತ್ತು ದುರ್ಬಲ ವರ್ಗದ ಮಹಿಳೆಯರಿಗೆ ಬೆಂಬಲ:

ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಹೊಲಿಗೆ ಯಂತ್ರ ಖರೀದಿಸಲು ಸಾಧ್ಯವಾಗದ ಸಂದರ್ಭಗಳಿವೆ. ಅಂತಹವರಿಗೆ ಅಗತ್ಯ ನೆರವು ಒದಗಿಸಿ ಸ್ವಂತ ಉದ್ಯಮ ಆರಂಭಿಸಲು ಈ ಯೋಜನೆ ಸಹಕಾರಿಯಾಗುತ್ತದೆ.

  • ಮನೆಯಲ್ಲಿಯೇ ಕುಳಿತು ಸ್ವಂತ ಉದ್ಯೋಗ ಮಾಡಲು ಪ್ರೇರೇಪಿಸುವುದು:

ಮನೆಯ ಜವಾಬ್ದಾರಿಗಳಿಂದ ಹೊರಗಡೆ ಕೆಲಸ ಮಾಡಲು ಸಾಧ್ಯವಾಗದ ಮಹಿಳೆಯರು ಮನೆಯಲ್ಲಿಯೇ ಹೊಲಿಗೆ ಕೆಲಸ ಮಾಡಿ ಆದಾಯ ಗಳಿಸುವಂತೆ ಪ್ರೋತ್ಸಾಹಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಯೋಜನೆಯ ಪ್ರಯೋಜನ:

  • ದರ್ಜಿ ಕೆಲಸದಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರು ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತವಾಗಿ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಬಹುದು.
  • ತರಬೇತಿ ಪೂರ್ಣಗೊಂಡ ನಂತರ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ನೀಡುವುದರಿಂದ ಮಹಿಳೆಯರು ತಮ್ಮ ಮನೆಯಲ್ಲೇ ಕುಳಿತು ಹೊಲಿಗೆ ಕೆಲಸವನ್ನು ಮಾಡುವ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಬಹುದಾಗಿದೆ.
  • ಸರ್ಕಾರವೇ ಉಚಿತವಾಗಿ ಹೊಲಿಗೆ ಯಂತ್ರ ಹಾಗೂ ವೃತ್ತಿಪರ ತರಬೇತಿಯನ್ನು ನೀಡುವುದರಿಂದ ಮಹಿಳೆಯರು ಯಾವುದೇ ಬಂಡವಾಳದ ಅಗತ್ಯವಿಲ್ಲದೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಮಾಸಿಕ ಸ್ಥಿರ ಆದಾಯವನ್ನು ಗಳಿಸಬಹುದಾಗಿದೆ.

ಯೋಜನೆಯಡಿಯಲ್ಲಿ ಸಿಗುವ ಪ್ರಮುಖ ಸೌಲಭ್ಯಗಳು:

  • ಅರ್ಹ ಮಹಿಳೆಯರಿಗೆ ಈ ಯೋಜನೆಯಡಿಯಲ್ಲಿ ಉಚಿತವಾಗಿ ಹೊಲಿಗೆಯಂತ್ರವನ್ನು ನೀಡಲಾಗುತ್ತದೆ ಹಾಗೂ ವಿವಿಧ ಪರಿಕರಗಳನ್ನು ಕೊಳ್ಳಲು ರೂ. 15,000/- ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಉಚಿತ ಹೊಲಿಗೆಯಂತ್ರವನ್ನು ಪಡೆಯಬೇಕಾದರೆ ಈ ಎರಡು ರೀತಿಯ ಕೌಶಲ್ಯ ತರಬೇತಿಯನ್ನು ಪಡೆಯುವುದು ಕಡ್ಡಾಯವಾಗಿದೆ.

  • ಮೂಲಭೂತ ಹೊಲಿಗೆ ತರಬೇತಿ: ಈ ತರಬೇತಿಯು 5 ರಿಂದ 7 ದಿನಗಳ ಅವಧಿಯಲ್ಲಿ ನಡೆಯಲಿದ್ದು, ಇಲ್ಲಿ ಹೊಲಿಗೆ ಯಂತ್ರದ ಬಳಕೆ, ಬಟ್ಟೆ ಕತ್ತರಿಸುವ ವಿಧಾನ, ಅಳತೆ ತೆಗೆದುಕೊಳ್ಳುವುದು ಮತ್ತು ಮೂಲ ಹೊಲಿಗೆ ತಂತ್ರಗಳನ್ನು ಕಲಿಸಲಾಗುತ್ತದೆ.
  • ಸುಧಾರಿತ ಹೊಲಿಗೆ ತರಬೇತಿ: ಆಸಕ್ತ ಫಲಾನುಭವಿಗಳಿಗೆ ಆಧುನಿಕ ಡಿಸೈನಿಂಗ್, ಹೊಸ ಮಾದರಿಯ ಉಡುಪು ತಯಾರಿಕೆ ಮತ್ತು ಸುಧಾರಿತ ಹೊಲಿಗೆ ತಂತ್ರಗಳ ಕುರಿತು ಹೆಚ್ಚಿನ ತರಬೇತಿ ನೀಡಲಾಗುತ್ತದೆ. ಇದು 15 ದಿನಗಳ ತರಬೇತಿ ಆಗಿರುತ್ತದೆ.

ತರಬೇತಿ ಪಡೆಯುವ ಅವಧಿಯಲ್ಲಿ ಫಲಾನುಭವಿಗಳಿಗೆ ಪ್ರತಿ ದಿನ ರೂ. 500/- ಸ್ಟೈಫಂಡ್ ನೀಡುವ ಮೂಲಕ ಆರ್ಥಿಕ ಸಹಾಯ ಒದಗಿಸಲಾಗುತ್ತದೆ.

ಅರ್ಹ ಫಲಾನುಭವಿಗಳು ಯಾರು?

  • ಅರ್ಜಿದಾರರು ಸಾಂಪ್ರದಾಯಿಕ ಹೊಲಿಗೆ ಕೆಲಸವನ್ನು ಮಾಡುತ್ತಿರಬೇಕು ಅಥವಾ ಹೊಲಿಗೆ ಕೆಲಸದಲ್ಲಿ ಆಸಕ್ತಿ ಹೊಂದಿರಬೇಕು.
  • ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರತಿ ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
  • ಕಳೆದ 5 ವರ್ಷಗಳಲ್ಲಿ ಯಾವುದೇ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡಿರಬಾರದು.
  • ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.

ಅಗತ್ಯವಿರುವ ದಾಖಲೆಗಳು:

  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಬ್ಯಾಂಕ್ ಖಾತೆ ವಿವರಗಳು
  • ಪಾಸ್‌ಪೋರ್ಟ್ ಗಾತ್ರದ ಫೋಟೋ
  • ವಿಳಾಸದ ಪುರಾವೆ
  • ಇತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಂ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.
  • ಆಧಾರ್‌ ನಂಬರ್ ಹಾಗೂ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ OTP ಮೂಲಕ ಪರಿಶೀಲನೆ ಮಾಡಲಾಗುತ್ತದೆ.
  • ಆಧಾರ್ ಸಂಖ್ಯೆ ಮತ್ತು ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
  • ನಂತರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾಗಿರುವ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
  • ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹಾಗೂ ನಿಮ್ಮ ಆಯ್ಕೆಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ನೀವು ಸಲ್ಲಿಸಿದ ಅರ್ಜಿಯನ್ನು ಸಂಬಂಧಿತ ಅಧಿಕಾರಿಗಳು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಕೌಶಲ್ಯ ತರಬೇತಿಗೆ ಕರೆಯಲಾಗುತ್ತದೆ.

ಅಂತಿಮ ತೀರ್ಮಾನ:

ಪಿಎಂ ವಿಶ್ವಕರ್ಮ ಯೋಜನೆಯು ಕುಶಲಕರ್ಮಿಗಳ ಕೌಶಲ್ಯಕ್ಕೆ ಪ್ರೋತ್ಸಾಹ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಹೊಂದಿರುವ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ತರಬೇತಿ, ಅಗತ್ಯ ಉಪಕರಣಗಳ ನೆರವು ಮತ್ತು ಆರ್ಥಿಕ ಸಹಾಯ ದೊರೆಯುವುದರಿಂದ ಫಲಾನುಭವಿಗಳು ತಮ್ಮ ವೃತ್ತಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೊಲಿಗೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಬಳಸಿಕೊಂಡು ಹೊಸ ಕೌಶಲ್ಯಗಳನ್ನು ಕಲಿತು ಸ್ವಂತ ಉದ್ಯೋಗ ಆರಂಭಿಸಿ ಸಮಾಜದಲ್ಲಿ ಗೌರವಯುತವಾಗಿ ಹಾಗೂ ಸ್ವಾವಲಂಬಿಗಳಾಗಿ ಜೀವನವನ್ನು ನಡೆಸಿ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

Leave a Comment