KED: 58,250/- ವೇತನ! ಅಬಕಾರಿ ಇಲಾಖೆಯಲ್ಲಿ 1207 ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕರ್ನಾಟಕ ಸರ್ಕಾರದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಕ್ಸೈಸ್ ಕಾನ್ಸ್ಟೇಬಲ್ ಹಾಗೂ ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಸರ್ಕಾರವು ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಲೋಕ ಸೇವಾ ಆಯೋಗವು ಈ ವಿಷಯಕ್ಕೆ ಸಂಬಂಧಿಸಿದಂತೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಿದೆ.

KED Recruitment 2026


ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಡಿಯಲ್ಲಿ ನಡೆಯಲಿದ್ದು, ಮಾನ್ಯತೆ ಪ್ಯಾಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪದವಿ ಹಾಗೂ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಹುದ್ದೆಯ ಸಂಪೂರ್ಣ ವಿವರವನ್ನು ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ.

KED

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರುಕರ್ನಾಟಕ ಅಬಕಾರಿ ಇಲಾಖೆ
ಆಯ್ಕೆ ಪ್ರಾಧಿಕಾರಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಯ ಹೆಸರು ಎಕ್ಸೈಸ್ ಕಾನ್ಸ್ಟೇಬಲ್ ಹಾಗೂ ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 1207 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಎಕ್ಸೈಸ್ ಕಾನ್ಸ್ಟೇಬಲ್ ಹಾಗೂ ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದ್ದು, ಅತೀ ಶೀಘ್ರದಲ್ಲೇ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಹೊರ ಬೀಳಲಿದೆ. ಇಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ದ್ವಿತೀಯ ಪಿಯುಸಿ ಅಲ್ಲಿ ಆಗೂ ಯಾವುದೇ ಪದವಿಯಲ್ಲಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ 18 ವರ್ಷದಿಂದ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಹುದ್ದೆಯ ವಿವರ:

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ, ಈ ಹುದ್ದೆಗಳನ್ನು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ ಎಂದು ಹಂಚಿಕೆ ಮಾಡಲಾಗಿದೆ.

ವಿವಿಧ ವಲಯಗಳು ಹುದ್ದೆಗಳ ಸಂಖ್ಯೆ
ಎಕ್ಸೈಸ್ ಕಾನ್ಸ್ಟೇಬಲ್ 942 ಹುದ್ದೆಗಳು
ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ 265 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಅಬಕಾರಿ ಕಾನ್ಸ್ಟೇಬಲ್:

ಅಬಕಾರಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಬ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಅಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಅಬಕಾರಿ ಸಬ್ ಇನ್ಸ್ಪೆಕ್ಟರ್:

ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ವಿವರ:

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಕ್ಸೈಸ್ ಕಾನ್ಸ್ಟೇಬಲ್ ಹಾಗೂ ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
  • PwBD ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹಾಗೂ ಅಬಕಾರಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.

ವೇತನ ಶ್ರೇಣಿ:

ನೇಮಕಾತಿ ಸಂಸ್ಥೆಯು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಎಕ್ಸೈಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400/- ದಿಂದ ರೂ. 42,000/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಎಕ್ಸೈಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,350/- ದಿಂದ ರೂ. 58,250/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗವನ್ನು ತೆರೆದು ಅಬಕಾರಿ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಮೊದಲು ವೆಬ್ಸೈಟ್ ಗೆ ಭೇಟಿ ನೀಡುತ್ತಿದ್ದರೆ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಶುಲ್ಕ ನಿಗದಿಪಡಿಸಿದ್ದರೆ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನುಆನ್ಲೈನ್ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಹಿಂದೆ ಇದ್ದ ಅನುವಾದ ಹಾಗೂ ಪ್ರಬಂಧ ಪತ್ರವನ್ನು ಕೈಬಿಟ್ಟು, ಈಗ ಕೇವಲ ಸಾಮಾನ್ಯ ಅಧ್ಯಯನ -I ಪತ್ರಿಕೆಯ ಪರೀಕ್ಷೆಯನ್ನು ನಡೆಸುತ್ತದೆ. ಈ ಒಂದು ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿದ್ದು, 2 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ ಹಾಗೂ ಈ ಪರೀಕ್ಷೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಬಹು ಆಯ್ಕೆ ಪ್ರಶ್ನೆಗಳ ಮಾದರಿಯಲ್ಲಿ ಇರಲಿದೆ. ಈ ಒಂದು ಪರೀಕ್ಷೆಯು ಸಾಮಾನ್ಯ ಜ್ಞಾನ, ಭೂಗೋಳ, ವಿಜ್ಞಾನ, ಮಾನಸಿಕ ಸಾಮರ್ಥ್ಯ, ಇತಿಹಾಸ, ಭಾರತೀಯ ಸಂವಿಧಾನ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

  • ದೈಹಿಕ ಸಮರ್ಥ್ಯ ಪರೀಕ್ಷೆ:

ಲಿಖಿತ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದೈಹಿಕ ಪರೀಕ್ಷೆಗೆ ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳ ದೇಹದಾರ್ಢ್ಯತೆ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ವೈದ್ಯಕೀಯ ಪರೀಕ್ಷೆ:

ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆಯಲಾಗುತ್ತದೆ. ಸಂಸ್ಥೆಯ ವೈದ್ಯಕೀಯ ಮಂಡಳಿಯು ಈ ಒಂದು ವೈದ್ಯಕೀಯ ತಪಾಸಣೆಯನ್ನು ನಡೆಸಲಿದ್ದು, ಈ ಹಂತದಲ್ಲಿ ಅಭ್ಯರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಪರಿಶೀಲಿಸಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಈ ಎಲ್ಲ ಹಂತಗಳಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ. ಅಭ್ಯರ್ಥಿಗಳು ಎಲ್ಲ ಹಂತದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಶೀಘ್ರದಲ್ಲೇ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಕಾನ್ಸ್ಟೇಬಲ್ ಹಾಗೂ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೋಟಿಫಿಕೇಶನ್ ಬಿಡುಗಡೆ ಅಗಲಿದ್ದು, PUC ಹಾಗೂ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಿನಿಂದಲೇ ಹುದ್ದೆಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ತಯಾರಿ ನಡೆಸಿಕೊಂಡು ನೇಮಕಾತಿ ಅಧಿಸೂಚನೆ ಹೊರಬಿದ್ದ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment