VA Application: 67,600/- ವೇತನ! ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಬೃಹತ್ ನೇಮಕಾತಿ । ಜುಲೈ 30 ಕೊನೆಯ ದಿನಾಂಕ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕಂದಾಯ ಇಲಾಖೆಯು ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮಾಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕಾ ಅರ್ಜಿ ಆಹ್ವಾನಿಸಲಾಗಿದೆ.

VA Recruitment 2026


ಕಂದಾಯ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 572 ಹುದ್ದೆಗಳಲ್ಲಿ 67 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದಕ್ಕೆ ಹಾಗೂ 505 ಹುದ್ದೆಗಳನ್ನು ಉಳಿಕೆ ಮೂಲ ವೃಂದಕ್ಕೆ ಮೀಸಲಿಟ್ಟಿದ್ದು, ದ್ವಿತೀಯ PUC ಅಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 11-07-2026 ರಿಂದ 30-07-2026 ವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ ವೇತನ ಶ್ರೇಣಿ ಸೇರಿದಂತೆ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VA

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರುಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆಯ ಹೆಸರು ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ಹೆಸರು ಗ್ರಾಮಾಡಳಿತ ಅಧಿಕಾರಿ
ಹುದ್ದೆಯ ಸಂಖ್ಯೆ ಒಟ್ಟು 572 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ PUC ಪೂರ್ಣಗೊಳಿಸಿದ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ರಾಜ್ಯದ ವಿವಿಧ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ವಿವಿಧ ಜಿಲ್ಲೆಗಳು ಹುದ್ದೆಗಳ ಸಂಖ್ಯೆ
ತುಮಕೂರು 50 ಹುದ್ದೆಗಳು
ಮಂಡ್ಯ 50 ಹುದ್ದೆಗಳು
ಬೆಳಗಾವಿ 48 ಹುದ್ದೆಗಳು
ಮೈಸೂರು 45 ಹುದ್ದೆಗಳು
ದಕ್ಷಿಣ ಕನ್ನಡ 37 ಹುದ್ದೆಗಳು
ಹಾಸನ 35 ಹುದ್ದೆಗಳು
ಕಲಬುರಗಿ 35 ಹುದ್ದೆಗಳು
ಚಾಮರಾಜನಗರ 31 ಹುದ್ದೆಗಳು
ಬೆಂಗಳೂರು ದಕ್ಷಿಣ (ರಾಮನಗರ)30 ಹುದ್ದೆಗಳು
ಬೆಂಗಳೂರು ಗ್ರಾಮಾಂತರ 29 ಹುದ್ದೆಗಳು
ಕೋಲಾರ 22 ಹುದ್ದೆಗಳು
ಚಿಕ್ಕಬಳ್ಳಾಪುರ 21 ಹುದ್ದೆಗಳು
ಬೆಂಗಳೂರು ನಗರ 20 ಹುದ್ದೆಗಳು
ಶಿವಮೊಗ್ಗ 18 ಹುದ್ದೆಗಳು
ಬಾಗಲಕೋಟೆ 16 ಹುದ್ದೆಗಳು
ಬೀದರ್ 16 ಹುದ್ದೆಗಳು
ಚಿತ್ರದುರ್ಗ 15 ಹುದ್ದೆಗಳು
ಹಾವೇರಿ 15 ಹುದ್ದೆಗಳು
ಗದಗ 14 ಹುದ್ದೆಗಳು
ಉಡುಪಿ 10 ಹುದ್ದೆಗಳು
ಚಿಕ್ಕಮಗಳೂರು 10 ಹುದ್ದೆಗಳು
ರಾಮನಗರ 5 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಅಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B)ಅಭ್ಯರ್ಥಿಗಳು ಗರಿಷ್ಟ 43 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ, ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂದಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

  • ಸಾಮಾನ್ಯ, ಇತರೆ ಹಿಂದುಳಿದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 750/- (500 + 250)
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ -I ಅಭ್ಯರ್ಥಿಗಳಿಗೆ: ರೂ. 500/- (ಅರ್ಜಿ ಶುಲ್ಕ 250/- +ಪ್ರಕ್ರಿಯೆ ಶುಲ್ಕ 250/-)
  • ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/- (ಪ್ರಕ್ರಿಯೆ ಶುಲ್ಕ ರೂ. 250/- ಮಾತ್ರ)

ವೇತನ ಶ್ರೇಣಿ:

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100/- ದಿಂದ ರೂ. 67,600/- ವರೆಗೆ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಮೊದಲು ವೆಬ್ಸೈಟ್ ಗೆ ಭೇಟಿ ನೀಡುತ್ತಿದ್ದರೆ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಮೀಸಲಾತಿ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೊದಲು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯು ಒಟ್ಟು 150 ಅಂಕಗಳನ್ನು ಒಳಗೊಂಡಿರುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ 50 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. SSLC ಅಥವಾ PUC ಕನ್ನಡ ಒಂದು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಓದಿದ್ದರೆ ಈ ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗುತ್ತದೆ.

  • ಸ್ಪರ್ಧಾತ್ಮಕ ಪರೀಕ್ಷೆ:

ಅಭ್ಯರ್ಥಿಗಳಿಗೆ ಈ ಹಂತದಲ್ಲಿ ಒಟ್ಟು 200 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು OMR ಮೂಲಕ ನಡೆಸಲಿದ್ದು, ಒಟ್ಟು ಎರಡು ಪತ್ರಿಕೆಯನ್ನು ಒಳಗೊಂಡಿರುತ್ತದೆ. ಮೊದಲ ಪತ್ರಿಕೆಯಲ್ಲಿ ಸಾಮಾನ್ಯ ಜ್ಞಾನದ ಕುರಿತು ಪ್ರಶ್ನೆ ಕೇಳಲಿದ್ದು, ಇದು ಒಟ್ಟು 100 ಅಂಕಗಳನ್ನು ಒಳಗೊಂಡಿರುತ್ತದೆ. ಹಾಗೂ ಎರಡನೇ ಪತ್ರಿಕೆಯು ಕನ್ನಡ, ಇಂಗ್ಲಿಷ್, ಕಂಪ್ಯೂಟರ್ ಜ್ಞಾನದ ಕುರಿತು ಇರಲಿದ್ದು ಈ ಪರೀಕ್ಷೆಯು ಕೂಡ ಒಟ್ಟು 100 ಅಂಕಗಳನ್ನು ಒಳಗೊಂಡಿರುತ್ತದ. ಪ್ರತಿ ತಪ್ಪು ಉತ್ತರಕ್ಕೆ 0.25 ಋಣಾತ್ಮಕ ಅಂಕಗಳಿರುತ್ತದೆ. ಹಾಗೂ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಕನಿಷ್ಠ 35% ಅಂಕವನ್ನು ಗಳಿಸಿದರೆ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ.

  • ದಾಖಲೆಗಳ ಪರಿಶೀಲನೆ:

ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿ ನಿಯಮಗಳ ಪ್ರಕಾರ 1:2 ಅನುಪಾತದಲ್ಲಿ ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ.

  • ಅಂತಿಮ ಮೆರಿಟ್ ಪಟ್ಟಿ:

ದಾಖಲೆಗಳ ಪರೀಶೀಲನೆ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಜಿಲ್ಲಾ ಹಾಗೂ ವರ್ಗವಾರು ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 11-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-07-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 31-07-2026
ಸ್ಪರ್ಧಾತ್ಮಕ ಪರೀಕ್ಷೆ (ಪತ್ರಿಕೆ -I) ನಡೆಯುವ ದಿನಾಂಕ 04-10-2026 ಬೆಳಿಗ್ಗೆ 10:30 ರಿಂದ 12:30 ವರೆಗೆ
ಸ್ಪರ್ಧಾತ್ಮಕ ಪರೀಕ್ಷೆ (ಪತ್ರಿಕೆ -II) ನಡೆಯುವ ದಿನಾಂಕ 04-10-2026 ಮಧ್ಯಾಹ್ನ 2:30 ರಿಂದ 4:30 ವರೆಗೆ
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ ಶೀಘ್ರದಲ್ಲಿ ತಿಳಿಸಲಾಗುತ್ತದೆ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, PUC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಉದ್ಯೋಗದ ನೀರಿಕ್ಷೆಯಲಿರುವ ಸಾವಿರಾರು ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment