Teachers: ರೂ. 99,400/- ವೇತನ! ಕರ್ನಾಟಕ ವಸತಿ ಶಾಲೆಗಳಲ್ಲಿ 1087 ಶಿಕ್ಷಕರ ನೇಮಕಾತಿ 2026 | ಆಗಸ್ಟ್ 13 ಕೊನೆಯ ದಿನಾಂಕ

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ಪ್ರತಿಷ್ಠಿತ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಿಪೇಯಿ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ -ಸಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ.

Teachers Recruitment 2026


ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ವೃಂದಗಳಲ್ಲಿನ ಹುದ್ದೆಗಳನ್ನು ಹಾಗೂ ಕಲ್ಯಾಣ ಕರ್ನಾಟಕೇತರ ವೃಂದಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಜುಲೈ 15 ರಿಂದ ಆನ್ಲೈನ್ ಅರ್ಜಿಯನ್ನು ಆರಂಭ ಮಾಡಲಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ, ಗಣಕಯಂತ್ರ ಸೇರಿದಂತೆ ಇನ್ನಿತರ ವಿಷಯಗಳ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಸಂಬಂಧಿತ ವಿಷಯದಲ್ಲಿ ಪದವಿ ಹಾಗೂ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಿದ್ದರೆ ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

Teachers

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು ವಿವಿಧ ಗ್ರೂಪ್ -ಸಿ ವಿಭಾಗಗಳ ಶಿಕ್ಷಕರು
ಹುದ್ದೆಗಳ ಸಂಖ್ಯೆ ಒಟ್ಟು 1087 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-08-2026

ಹುದ್ದೆಯ ವಿಶ್ಲೇಷಣೆ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ -ಸಿ ಶಿಕ್ಷಕರು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಗಣಕಯಂತ್ರ ಸೇರಿದಂತೆ ಇನ್ನಿತರ ವಿಭಾಗಗಳ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಂಬಂಧಿತ ವಿಷಯದಲ್ಲಿ ಡಿಗ್ರಿ ಹಾಗೂ ಬಿ. ಎಡ್ ಪೂರ್ಣಗೊಳಿಸಿದ ಕನಿಷ್ಠ 18 ವರ್ಷದಿಂದ ಗರಿಷ್ಟ 50 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ 1087 ಶಿಕ್ಷಕರು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳಿಗೆ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು
ಕನ್ನಡ ಭಾಷಾ ಶಿಕ್ಷಕರು 62 ಹುದ್ದೆಗಳು 103 ಹುದ್ದೆಗಳು
ಇಂಗ್ಲಿಷ್ ಭಾಷಾ ಶಿಕ್ಷಕರು 69 ಹುದ್ದೆಗಳು108 ಹುದ್ದೆಗಳು
ಹಿಂದಿ ಭಾಷಾ ಶಿಕ್ಷಕರು 31 ಹುದ್ದೆಗಳು55 ಹುದ್ದೆಗಳು
ವಿಜ್ಞಾನ ಶಿಕ್ಷಕರು 32 ಹುದ್ದೆಗಳು106 ಹುದ್ದೆಗಳು
ಗಣಿತ ಶಿಕ್ಷಕರು 35 ಹುದ್ದೆಗಳು103 ಹುದ್ದೆಗಳು
ಸಮಾಜ ವಿಜ್ಞಾನ ಶಿಕ್ಷಕರು 24 ಹುದ್ದೆಗಳು154 ಹುದ್ದೆಗಳು
ದೈಹಿಕ ಶಿಕ್ಷಣ ಶಿಕ್ಷಕರು 33 ಹುದ್ದೆಗಳು81 ಹುದ್ದೆಗಳು
ಗಣಕಯಂತ್ರ ಶಿಕ್ಷಕರು 57 ಹುದ್ದೆಗಳು
ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು 17 ಹುದ್ದೆಗಳು
ಪದವೀಧರ ಚಿತ್ರಕಲಾ ಶಿಕ್ಷಕರು 17 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಕನ್ನಡ ಭಾಷಾ ಶಿಕ್ಷಕರು:

ಕನ್ನಡ ಭಾಷಾ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನ್ನಡವನ್ನು ಒಂದು ಐಚ್ಚಿಕ ವಿಷಯವಾಗಿ ಓದಿ ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಅಥವಾ ಕನ್ನಡ ಬಿಎಡ್ ಪದವಿಯನ್ನು ಪಡೆದಿರಬೇಕು ಅಥವಾ ನಾಲ್ಕು ವರ್ಷಗಳ ಕನ್ನಡ ಪಂಡಿತ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

  • ಇಂಗ್ಲಿಷ್ ಭಾಷಾ ಶಿಕ್ಷಕರು:

ಇಂಗ್ಲಿಷ್ ಭಾಷಾ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಅನ್ನು ಒಂದು ಐಚ್ಚಿಕ ವಿಷಯವಾಗಿ ಓದಿ ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಅಥವಾ ಇಂಗ್ಲಿಷ್ ಬಿಎಡ್ ಪದವಿಯನ್ನು ಪಡೆದಿರಬೇಕು. ಅಥವಾ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪ್ರಮಾಣಪತ್ರ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು

  • ಹಿಂದಿ ಭಾಷಾ ಶಿಕ್ಷಕರು:

ಹಿಂದಿ ಭಾಷಾ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿಯನ್ನು ಒಂದು ಐಚ್ಚಿಕ ವಿಷಯವಾಗಿ ಓದಿ ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಅಥವಾ ಹಿಂದಿಯಲ್ಲಿ ಬಿಎಡ್ ಪದವಿಯನ್ನು ಪಡೆದಿರಬೇಕು.

  • ವಿಜ್ಞಾನ ಶಿಕ್ಷಕರು:

ವಿಜ್ಞಾನ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಸಾಯನ ಶಾಸ್ತ್ರದೊಂದಿಗೆ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಅಥವಾ ಬಿಎಡ್ ಪದವಿ ಪಡೆದಿರಬೇಕು.

  • ಗಣಿತ ಶಿಕ್ಷಕರು:

ಗಣಿತ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ವಿಜ್ಞಾನವನ್ನು ಒಂದು ಐಚ್ಚಿಕ ವಿಷಯವಾಗಿ ಓದಿ ಸ್ನಾತಕೋತ್ತರ ಪದವಿಯನ್ನು ಹಾಗೂ ಬಿಎಡ್ ಪದವಿಯನ್ನು ಹೊಂದಿರಬೇಕು.

  • ಸಮಾಜ ವಿಜ್ಞಾನ ಶಿಕ್ಷಕರು:

ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತಿಹಾಸ, ಅರ್ಥಶಾಸ್ತ್ರ, ಸಮಾಜ ಶಾಸ್ತ್ರ, ಭೂಗೋಳ ಶಾಸ್ತ್ರ, ರಾಜ್ಯ ಶಾಸ್ತ್ರಇವುಗಳಲ್ಲಿ ಯಾವುದೇ ಎರಡು ವಿಷಯಗಳೊಂದಿಗೆ ಕಲಾ ವಿಭಾಗದಲ್ಲಿಯೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

  • ಗಣಕಯಂತ್ರ ಶಿಕ್ಷಕರು:

ಗಣಕಯಂತ್ರ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಣಕ ವಿಜ್ಞಾನ ಮತ್ತು ಮಾಹಿತಿ ವಿಜ್ಞಾನ ಇಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಅಥವಾ ಸಂಬಂಧಿತ ವಿಷಯದಲ್ಲಿ ಬಿಸಿಎ ಹಾಗೂ ಬಿಎಸ್ಸಿ ಪದವಿಯನ್ನು ಹೊಂದಿರಬೇಕು.

  • ದೈಹಿಕ ಶಿಕ್ಷಣ ಶಿಕ್ಷಕರು:

ದೈಹಿಕ ಶಿಕ್ಷಣ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಅಥವಾ ದೈಹಿಕ ಶಿಕ್ಷಣದಲ್ಲಿ ಬಿಎಡ್ ಪದವಿಯನ್ನು ಹೊಂದಿರಬೇಕು.

  • ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು:

ಡಿಪ್ಲೊಮಾ ಚಿತ್ರಕಲಾ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೇಖಾ ಚಿತ್ರ ಅಥವಾ ಚಿತ್ರಕಲೆ ಡಿಪ್ಲೊಮಾ ಅಥವಾ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಆರ್ಟ್ ಮಾಸ್ಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.

  • ಪದವೀಧರ ಚಿತ್ರಕಲಾ ಶಿಕ್ಷಕರು

ಪದವೀಧರ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೃಶ್ಯಕಲೆ ಅಥವಾ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಇತರೆ ಅರ್ಹತೆ:

1 ರಿಂದ 6 ನೇ ತರಗತಿಯ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಅಥವಾ CTET ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.

ವಯೋಮಿತಿ ವಿವರ:

ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳು ಗರಿಷ್ಟ 48 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾನುಸಾರ ಅಂಗವಿಕಲ ಅಭ್ಯರ್ಥಿಗಳಿಗೆ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಹಾಗೂ ವಿಧವಾ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ:

ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ವರ್ಗಗಳು ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗಗಳ ಹಾಗೂ ಇತರೆ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳಿಗೆ ರೂ. 750/- (ರೂ. 500/- ಅರ್ಜಿ ಶುಲ್ಕ ಮತ್ತು ರೂ. 250/- ಪ್ರಕ್ರಿಯೆ ಶುಲ್ಕ)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಹಾಗೂ ಪ್ರವರ್ಗ -I ಅಭ್ಯರ್ಥಿಗಳಿಗೆ ರೂ. 500/- (ರೂ. 250/- ಅರ್ಜಿ ಶುಲ್ಕ ಮತ್ತು ರೂ. 250/- ಪ್ರಕ್ರಿಯೆ ಶುಲ್ಕ)
ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- (ಪ್ರಕ್ರಿಯೆ ಶುಲ್ಕ ಮಾತ್ರ)

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹೆಚ್ಚುವರಿ ಹುದ್ದೆಗೆ ರೂ. 100/- ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 2024 ಪರೀಷ್ಕೃತ ರಾಜ್ಯ ವೇತನ ಶ್ರೇಣಿಯ ಅನ್ವಯ ಮಾಸಿಕ ವೇತನವನ್ನು ನೀಡಲಾಗುತ್ತದೆ.

  • ವಿವಿಧ ವಿಷಯಗಳ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 54,175/- ದಿಂದ ರೂ. 99,400/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಡಿಪ್ಲೊಮಾ ಹಾಗೂ ಪದವೀಧರ ಚಿತ್ರಕಲಾ ಶಿಕ್ಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 49,050/- ರೂ. 92,500/- ವರೆಗೆ ವೇತನವನ್ನು ಪಡೆದುಕೊಳಬಹುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಿಕ್ಷಕರ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಮೀಸಲಾತಿ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಸ್ಪರ್ಧಾತ್ಮಕ ಪರೀಕ್ಷೆ:

ಶಿಕ್ಷಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸ್ವರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ಪರೀಕ್ಷೆಯು ಆಫ್ಲೈನ್ ಮೂಲಕ ನಡೆಯಲಿದ್ದು, ಪತ್ರಿಕೆ -I ಸಾಮಾನ್ಯ ಜ್ಞಾನ ಹಾಗೂ ಪತ್ರಿಕೆ -II ಆಯಾ ವಿಷಯಕ್ಕೆ ಸಂಬಂಧಿಸಿದ ನಿರ್ದಿಷ್ಟ ವಿಷಯಗಳ ಪರೀಕ್ಷೆ ಸೇರಿ ಒಟ್ಟು ಎರಡು ಪತ್ರಿಕೆ ಇರುತ್ತದೆ. ಈ ಎರಡು ಪತ್ರಿಕೆಗಳು ತಲಾ 100 ಅಂಕಗಳನ್ನು ಒಳಗೊಂಡಿದ್ದು, ಒಟ್ಟು 2 ಗಂಟೆಗಳ ಕಾಲ ಕಾಲಾವಕಾಶ ನೀಡಲಾಗುತ್ತದೆ. ಜೊತೆಗೆ ಪ್ರತಿ ತಪ್ಪು ಉತ್ತರಕ್ಕೆ 0.25 ಋಣಾತ್ಮಕ ಅಂಕಗಳನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ 35% ಅಂಕಗಳನ್ನು ಕಡ್ಡಾಯವಾಗಿ ಗಳಿಸಿರಬೇಕು.

  • ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:

ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಹಂತದಲ್ಲಿ ಕನ್ನಡವನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡದಿದ್ದರೆ, ಕಡ್ಡಾಯವಾಗಿ ಕನ್ನಡ ಭಾಷಾ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಕಡ್ಡಾಯವಾಗಿ 50% ಅಂಕಗಳನ್ನು ಗಳಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-08-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 14-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (KK)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (RPC)ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತಿಷ್ಠಿತ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ -ಸಿ ಶಿಕ್ಷಕರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ವಲಯದಲ್ಲಿ ಶಿಕ್ಷಕರಾಗಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ KEA ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment