BEML: ರೂ. 43,000/- ವೇತನ! ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ, ಏಪ್ರಿಲ್ 7 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೆಂಗಳೂರಿನಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದು ಆಸಕ್ತಿಯನ್ನು ಹೊಂದಿದ್ದೀರಾ? ನಿಮ್ಮದು ಇಂಜಿನಿಯರಿಂಗ್ ಪದವಿ ಪೂರ್ಣಗೊಂಡಿದೆಯಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ 2026 ರಲ್ಲಿ ಒಟ್ಟು 78 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BEML Recruitment in kannada

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಸ್ತುತ ಚಾಲ್ತಿಯಲ್ಲಿದ್ದು, ಏಪ್ರಿಲ್ 7, 2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಸಂಸ್ಥೆಯು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಪ್ರಸ್ತುತ ಈ ಒಂದು ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಿದ್ದು, ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಒಂದು ಮಾಹಿತಿಯನ್ನು ಓದಿಕೊಂಡು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಪೂರೈಸಿದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಇದೇ ರೀತಿಯ ಇನ್ನಷ್ಟು ಹೊಸ ಹೊಸ ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

BEML

ಹುದ್ದೆಯ ಪ್ರಮುಖ ಹೈಲೈಟ್ಸ್:

ನೇಮಕಾತಿ ಸಂಸ್ಥೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆಯ ಹೆಸರು ಜೂನಿಯರ್ ಎಕ್ಸಿಕ್ಯೂಟಿವ್ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಾಗೂ ಇನ್ನಿತರ ಹುದ್ದೆಗಳು)
ಹುದ್ದೆಗಳ ಸಂಖ್ಯೆ ಒಟ್ಟು 78 ಹುದ್ದೆಗಳು
ಉದ್ಯೋಗ ಸ್ಥಳ ರೈಲ್ವೆ ಮತ್ತು ಮೆಟ್ರೋ ಉತ್ಪಾದನಾ ಘಟಕ, ಬೆಂಗಳೂರು -ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ವಿಧಾನ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಒಟ್ಟು 78 ಜೂನಿಯರ್ ಎಕ್ಸಿಕ್ಯೂಟಿವ್ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಟೆಲಿಕಮ್ಯುನಿಕೇಷನ್ ಹಾಗೂ ಇತರೆ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಂಜಿನಿಯರಿಂಗ್ ನಲ್ಲಿ ಪದವಿ ಹೊಂದಿರುವ ಗರಿಷ್ಟ 29 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಭಾರತ್ ಅರ್ಥ್ ಮೂವರ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೆಳಕಂಡಂತೆ ವಿಂಗಡಣೆ ಮಾಡಲಾಗಿದೆ.

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ ಅಧಿಕಾರಾವಧಿ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್/ ಟೆಲಿ -ಕಮ್ಯುನಿಕೇಷನ್/ ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್)04 1 ವರ್ಷ
ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್/ ಪ್ರೊಡಕ್ಷನ್/ ಇಂಡಿಸ್ಟ್ರಿಯಾಲ್ ಇಂಜಿನಿಯರಿಂಗ್)061 ವರ್ಷ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್)061 ವರ್ಷ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್/ ಟೆಲಿ -ಕಮ್ಯುನಿಕೇಷನ್/ ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್)104 ವರ್ಷ
ಜೂನಿಯರ್ ಎಕ್ಸಿಕ್ಯೂಟಿವ್ (ಮೆಕ್ಯಾನಿಕಲ್/ ಪ್ರೊಡಕ್ಷನ್/ ಇಂಡಿಸ್ಟ್ರಿಯಾಲ್ ಇಂಜಿನಿಯರಿಂಗ್)254 ವರ್ಷ
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್)274 ವರ್ಷ

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ಶೈಕ್ಷಣಿಕ ಅರ್ಹತೆ:

ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ, ಮೆಕ್ಯಾನಿಕಲ್, ಪ್ರೊಡಕ್ಷನ್, ಇಂಡಸ್ಟ್ರಿಯಲ್ ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ಅಥವಾ ಇನ್ಸ್ಟ್ರುಮೆಂಟಲ್ ಇಂಜಿನಿಯರಿಂಗ್ ನಲ್ಲಿ ಕನಿಷ್ಠ 60% ಅಂಕಗಳೊಂದಿದೆ (SC/ ST ಹಾಗೂ PwBD ಅಭ್ಯರ್ಥಿಗಳಿಗೆ 55%) ಬಿ.ಇ ಅಥವಾ ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.

  • ಅನುಭವ:

ನಾಲ್ಕು ವರ್ಷದ ಅಧಿಕಾರ ಅವಧಿಯನ್ನು ಹೊಂದಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರೊಡಕ್ಷನ್, ಸಂಶೋಧನೆ ಮತ್ತು ಅಭಿವೃದ್ಧಿ, ಯೋಜನೆ, ಸಂಗ್ರಹಣೆ, ಪೀಠೋಪಕರಣ,ಗಳು / ಪರೀಕ್ಷೆ, ಗುಣಮಟ್ಟ ಹಾಗೂ ಪ್ರೊಡಕ್ಷನ್ ಕಂಟ್ರೋಲ್ ಕ್ಷೇತ್ರದಲ್ಲಿ ೦ – 2 ವರ್ಷದ ಅನುಭವವನ್ನು ಹೊಂದಿರಬೇಕು.

ಒಂದು ವರ್ಷದ ಅಧಿಕಾರ ಅವಧಿಯನ್ನು ಹೊಂದಿರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವೃತ್ತಿ ಅನುಭವವನ್ನು ಹೊಂದಿರುವ ಅಗತ್ಯ ಇರುವುದಿಲ್ಲ.

ವಯೋಮಿತಿ ವಿವರ:

ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 07-04-2026 ರಂತೆ ಗರಿಷ್ಟ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ ಅವುಗಳ ವಿವರ ಈ ಕೆಳಕಂಡಂತಿದೆ.

  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಾಗೂ NCL ಅಭ್ಯರ್ಥಿಗಳಿಗೆ: 3 ವರ್ಷ
  • ಪಿ.ಡಬ್ಲ್ಯೂ.ಬಿ.ಡಿ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

  • ಸಾಮಾನ್ಯ/ ಒಬಿಸಿ/ ಇ.ಡಬ್ಲ್ಯೂ.ಎಸ್ ಅಭ್ಯರ್ಥಿಗಳಿಗೆ: ರೂ. 500/-
  • SC/ ST ಹಾಗೂ ಪಿ.ಡಬ್ಲ್ಯೂ.ಬಿ.ಡಿ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ

ವೇತನ ಶ್ರೇಣಿ:

  • 4 ವರ್ಷ ಅಧಿಕಾರಾವಧಿ ಹೊಂದಿರುವ ಹುದ್ದೆಗೆ: ಮಾಸಿಕ ರೂ. 35,000/- ರಿಂದ ರೂ. 43,000/-
  • 1 ವರ್ಷ ಅಧಿಕಾರಾವಧಿ ಹೊಂದಿರುವ ಹುದ್ದೆಗಳಿಗೆ: ಮಾಸಿಕ ರೂ. 35,000/- ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

  • ಅಭ್ಯರ್ಥಿಗಳು ಮೊದಲು BEML ಅಧಿಕೃತ ವೆಬ್ಸೈಟ್ https://www.bemlindia.in/ ಗೆ ಭೇಟಿ ನೀಡಿ.
  • ರಿಕ್ರೂಟ್ಮೆಂಟ್ ವಿಭಾಗವನ್ನು ಆಯ್ಕೆ ಮಾಡಿ ನಂತರ ಅಲ್ಲಿರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಹಾಗೂ ಅನುಭವ ವಿವರಗಳನ್ನು ಭರ್ತಿ ಮಾಡಿ.
  • ನಂತರ ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಪರಿಶೀಲನೆ
  • ಲಿಖಿತ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ವೈದಕೀಯ ಪರೀಕ್ಷೆ

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 25-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 25-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಕೊನೆಯ ಮಾತು:

ನೀವೇನಾದರೂ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ದಿನಾಂಕ 07-04-2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:

Leave a Comment