Court Application: ರೂ. 63,100/- ವೇತನ! ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಹತ್ತನೇ ತರಗತಿ ಮುಗಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಪಿಯೂನ್ ಹಾಗೂ ಪೊರ್ಸೆಸ್ ಸರ್ವರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

District Court Recruitment 2026


ಇಲ್ಲಿ ಒಟ್ಟು 56 ಪಿಯೂನ್ ಹುದ್ದೆಗಳು ಹಾಗೂ 6 ಪ್ರೋಸೆಸ್ ಸರ್ವರ್ ಹುದ್ದೆಗಳು ಖಾಲಿ ಇದ್ದು, ಕನಿಷ್ಠ SSLC ಅಲ್ಲಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿಶೇಷವಾಗಿ, ಈ ಒಂದು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಕಠಿಣ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ನೇರ ಸಂದರ್ಶನ ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇಲ್ಲಿ ಖಾಲಿ ಇರುವ ಪ್ಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 23-07-2026 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು 24-08-2026 ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

Court

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಹುದ್ದೆಯ ಹೆಸರು ಪಿಯೂನ್ ಹಾಗೂ ಪೊರ್ಸೆಸ್ ಸರ್ವರ್ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 62 ಹುದ್ದೆಗಳು
ಉದ್ಯೋಗ ಸ್ಥಳ ಶಿವಮೊಗ್ಗ- ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-08-2026
ಅಧಿಕೃತ ವೆಬ್ಸೈಟ್ ಲಿಂಕ್ https://shivamogga.dcourts.gov.in/

ಹುದ್ದೆಯ ಸಂಪೂರ್ಣ ಮಾಹಿತಿ:

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026 ನೇ ಸಾಲಿನಲ್ಲಿ ಪಿಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 27,000/- ದಿಂದ 63,000/- ವರೆಗೆ ವೇತನವನ್ನು ಸಹ ನೀಡಲಾಗುತ್ತದೆ.

ಹುದ್ದೆಯ ವಿವರ:

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ವಿವರ ಹುದ್ದೆಗಳ ಸಂಖ್ಯೆ
ಪಿಯೂನ್ 56 ಹುದ್ದೆಗಳು
ಪ್ರೋಸೆಸ್ ಸರ್ವರ್ 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಪಿಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು

ವಯೋಮಿತಿ ವಿವರ:

ಪಿಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಟ ವಯೋಮಿತಿಯ ವಿವರ ಈ ಕೆಳಕಂಡಂತಿದೆ.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: ಗರಿಷ್ಟ 35 ವರ್ಷ
  • ಇತರೆ ಹಿಂದುಳಿದ ವರ್ಗಗಳ 2A, 2B, 3A, 3B ಅಭ್ಯರ್ಥಿಗಳು: ಗರಿಷ್ಟ 38 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -I ಅಭ್ಯರ್ಥಿಗಳು: ಗರಿಷ್ಟ 40 ವರ್ಷ

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾವಳಿಗಳ ಪ್ರಕಾರ, ಎಲ್ಲ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: ₹200/-
  • ಇತರೆ ಹಿಂದುಳಿದ 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ: ₹100/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -I ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ ಶ್ರೇಣಿ
ಪಿಯೂನ್ ₹27,000/- ದಿಂದ ₹46,675
ಪ್ರೋಸೆಸ್ ಸರ್ವರ್ ₹31,775/- ದಿಂದ ₹63,100/-

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಪಿಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಮುಖಪುಟದಲ್ಲಿ ಕಾಣುವ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಮೊದಲ ಹಂತದಲ್ಲಿ ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
  • ನಂತರ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಅಂಕಗಳ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
  • ನಂತರ ಸಂದರ್ಶನದಲ್ಲಿ ಹಾಗೂ SSLC ನಿಗದಿತ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 23-07-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಪಿಯೂನ್)ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ (ಪ್ರೋಸೆಸ್ ಸರ್ವರ್)ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಪಿಯೂನ್ ಹಾಗೂ ಪ್ರೋಸೆಸ್ ಸರ್ವರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:

Leave a Comment