KSRSS: ಸೈನಿಕ್ ಶಾಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ! 10th + ಡಿಗ್ರಿ ಪಾಸ್, ಏಪ್ರಿಲ್ 6 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹೆಮ್ಮೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ್ ಶಾಲೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಲು ನಿಮಗೊಂದು ಸುವರ್ಣಾವಕಾಶ ಒದಗಿಬಂದಿದೆ.

KSRSS Recruitment in Kannada

ದೇಶ ಪ್ರೇಮ, ಶಿಸ್ತು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ ಆಗಿರುವ ಸೈನಿಕ್ ಶಾಲೆಯಲ್ಲಿ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಜಸ್ಟ್ 10th ಪಾಸ್ ಆದವರು ಗೌರವಯುತ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಸೈನಿಕ್ ಶಾಲೆಯ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೋಧಕ ಹಾಗೂ ಬೋಧಕೇತರ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ನೀಡಲಾಗಿದ್ದು, ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡವನ್ನು ಪೂರೈಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

KSRSS

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ
ಹುದ್ದೆಯ ಹೆಸರು ಶಿಕ್ಷಕರು, ಗುಮಾಸ್ತ, ಗ್ರಂಥಪಾಲಕರು, ನರ್ಸ್, ಮಹಿಳಾ ವಾರ್ಡನ್ ಹಾಗೂ ಇನ್ನಿತರ ಹುದ್ದೆಗಳು
ಹುದ್ದೆಯ ಸಂಖ್ಯೆ ಒಟ್ಟು 23 ಹುದ್ದೆಗಳು
ಉದ್ಯೋಗ ಸ್ಥಳ ಬೆಳಗಾವಿ ಜಿಲ್ಲೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-04-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ್ ಶಾಲೆಯಲ್ಲಿ ಒಟ್ಟು 15 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, 8 ಬೋಧಕೇತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಕನ್ನಡ, ಇಂಗ್ಲಿಷ್, ಸಂಸ್ಕೃತ, ಗಣಿತ, ವಿಜ್ಞಾನ ಹಾಗೂ ಸಾಮಾಜಿಕ ಅಧ್ಯಯನ ಶಿಕ್ಷಕರು: ಒಟ್ಟು 15 ಹುದ್ದೆಗಳು
  • ದೈಹಿಕ ಶಿಕ್ಷಕರು: 2 ಹುದ್ದೆಗಳು
  • ಗುಮಾಸ್ತ: 2 ಹುದ್ದೆಗಳು
  • ಗ್ರಂಥಪಾಲಕರು: 1 ಹುದ್ದೆ
  • ನರ್ಸ್: 1 ಹುದ್ದೆ
  • ಕಲಾ ಶಿಕ್ಷಕರು: 1ಹುದ್ದೆ
  • ಮಹಿಳಾ ವಾರ್ಡನ್: 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸಂಬಂಧಿತ ವಿಷಯದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಮಾನ್ಯತೆ ಪಡೆದ ಮಂಡಳಿಯಲ್ಲಿ ಬಿ.ಎಡ್ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ನಲ್ಲಿ ಪದವಿಯನ್ನು ಅಥವಾ ಡಿಪ್ಲೊಮಾವನ್ನು ಪೂರೈಸಿರಬೇಕು. ಹಾಗೂ ಗ್ರಂಥ ನಿರ್ವಹಣೆಯಲ್ಲಿ ಕನಿಷ್ಠ 2 ವರ್ಷ ಅನುಭವವನ್ನು ಹೊಂದಿರಬೇಕು.
  • ದೈಹಿಕ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೂ ರಾಜ್ಯ ಹಾಗೂ ರಾಷ್ಟ ಮಟ್ಟದ ಕ್ರೆಡೆಗಳಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಮಹಿಳಾ ವಾರ್ಡನ್ ಹಾಗೂ ಗುಮಾಸ್ತ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  • ಕಾಲ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರಾಯಿಂಗ್ ಹಾಗೂ ಪೇಂಟಿಂಗ್ ನಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನರ್ಸಿಂಗ್ ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಹಾಗೂ ನರ್ಸಿಂಗ್ ಕೌಂಸಿಲ್ ನಲ್ಲಿ ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಂಡಿರಬೇಕು.

ವಯೋಮಿತಿ ವಿವರ:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಬೋಧಕ ಹಾಗೂ ಬೋಧಕೇತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ:

ಸರ್ಕಾರದ ಕೆಲವು ನಿಯಮಗಳು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕೆಲವು ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುವ ಸಾಧ್ಯತೆ ಇದೆ.

ಅರ್ಜಿ ಶುಲ್ಕ:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಗತ್ಯ ದಾಖಲೆಗಳು:

  • SSLC/ ಡಿಪ್ಲೊಮಾ/ ಪದವಿ ಅಂಕಪಟ್ಟಿ
  • ಪದವಿ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅನುಭವ ಪ್ರಮಾಣಪತ್ರ (ಅನ್ವಹಿಸಿದರೆ)
  • ವಯಸ್ಸಿನ ಪುರಾವೆ
  • ಜಾತಿ ಪ್ರಮಾಣಪತ್ರ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಅಧಿಕೃತ ವೆಬ್ಸೈಟ್ http://www.ksrss.com/ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರಗಳನ್ನು ಭರ್ತಿ ಮಾಡಿ.
  • ನಂತರ ನಿಮ್ಮ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಅಂಕಪಟ್ಟಿಗಳು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  • ದಾಖಲೆಗಳನ್ನು ಲಗತ್ತಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಲಕೋಟೆಗೆ ಹಾಗಿ ನಿಮ್ಮ ಆಯ್ಕೆಯ ಹುದ್ದೆಯನ್ನು ಲಕೋಟೆಯ ಮೇಲೆ ಬರೆದು ಸೈನಿಕ ಶಾಲಾ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಪೋಸ್ಟ್ ಮೂಲಕ ಕಳುಹಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಪರಿಶೀಲನೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಮುಂದಿನ ಹಂತಕ್ಕೆ ಆಯ್ಕೆಯಾಗುತ್ತಾರೆ.

  • ವೈಯಕ್ತಿಕ ಸಂದರ್ಶನ:

ಮೊದಲ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಹಂತದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡೆಮೋ ಕ್ಲಾಸ್ ಮಾಡಲು ತಿಳಿಸಲಾಗುತ್ತದೆ.

  • ದಾಖಲೆಗಳ ಪರಿಶೀಲನೆ:

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಅಂತಿಮವಾಗಿ ಪರಿಶೀಲನೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕಈಗಾಗಲೇ ಆರಂಭಗೊಂಡಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ06-04-2026

ಪ್ರಮುಖ ಲಿಂಕ್:

ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ 23 ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳ ಆದ್ಯತೆಯ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೋಂದಾಯಿತ ಅಂಚೆ ಮೂಲಕ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಲಗತ್ತಿಸಿದ ಅರ್ಜಿ ನಮೂನೆಯನ್ನು ಸೈನಿಕ ಶಾಲೆಯ ವಿಳಾಸಕ್ಕೆ ದಿನಾಂಕ 06-04-2026 ರ ಒಳಗೆ ಸಲ್ಲಿಸಿ. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುದಿಲ್ಲ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment