UCSL: ₹44,000 ವೇತನ! ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026 । ಡಿಪ್ಲೊಮಾ, ITI ಪಾಸ್

ಹಾಯ್ ಹಾಲೋ ನಮಸ್ಕಾರ ಸ್ನೇಹಿತರೆ, ನೀವೇನಾದರೂ ಡಿಪ್ಲೊಮಾ, ಐಟಿಐ ಮುಗಿಸಿ ಸರ್ಕಾರಿ ಸ್ವಾಮ್ಯದ ಸಂಸ್ಥೆಯಡಿಯಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ. ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನಲ್ಲಿ ಇನ್ನೊಮ್ಮೆ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 15 ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.

UCSL Recruitment in Kannada

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೂಪರ್ವೈಸರ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಿನ್ನೆ ಇಂದಲೇ ಅಂದರೆ 02-04-2026 ರಿಂದಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು 22-04-2026 ರ ವರೆಗೆಯೂ ಅವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಾಗಿದ್ದು, ಈ ಒಂದು ಸಂಸ್ಥೆಯಲ್ಲಿ ಖಾಲಿ ಇರುವ ಸೂಪರ್ವೈಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ.

UCSL

ಹುದ್ದೆಯ ಹೈಲೈಟ್ ಪಾಯಿಂಟ್ಸ್:

ನೇಮಕಾತಿ ಸಂಸ್ಥೆ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (UCSL)
ಹುದ್ದೆಯ ಹೆಸರು ಸೂಪರ್ವೈಸರ್
ಹುದ್ದೆಯ ಸಂಖ್ಯೆ 15 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಐಟಿಐ, ಡಿಪ್ಲೊಮಾ ಹಾಗೂ ಪದವಿ
ವಯೋಮಿತಿ ವಿವರ ಗರಿಷ್ಟ 45 ವರ್ಷ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಪೂರ್ಣ ವಿವರ:

ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯಲ್ಲಿ ಖಾಲಿ ಇರುವ ಸೂಪರ್ವೈಸರ್ ಹುದ್ದೆಗಳನ್ನು ವಿವಿಧ ವಿಭಾಗಗಳಾಗಿ ವಿಂಗಡಣೆ ಮಾಡಿದ್ದು, ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗೆ ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಸೂಪರ್ವೈಸರ್ (ಫೈನಾನ್ಸ್)01 ಹುದ್ದೆ
ಸೂಪರ್ವೈಸರ್ (ಎಲೆಕ್ಟ್ರಿಕಲ್)03 ಹುದ್ದೆಗಳು
ಸೂಪರ್ವೈಸರ್ (ಮೆಕ್ಯಾನಿಕಲ್)11 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಸೂಪರ್ವೈಸರ್ (ಫೈನಾನ್ಸ್):

  • ಸೂಪರ್ವೈಸರ್ ಫೈನಾನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಬಿಕಾಂ, ಬಿಬಿಎ ಅಥವಾ ಬಿಬಿಎಂ ಪದವಿಯನ್ನು ಹೊಂದಿರಬೇಕು.
  • ಫೈನಾನ್ಸ್ ಮತ್ತು ಲೆಕ್ಕಪತ್ರ ಕ್ಷೇತ್ರದಲ್ಲಿ 7 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಸೂಪರ್ವೈಸರ್ (ಎಲೆಕ್ಟ್ರಿಕಲ್):

  • ಸೂಪರ್ವೈಸರ್ (ಎಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಎಲೆಕ್ಟ್ರಿಕಲ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
    • ಹಡಗು ನಿರ್ವಹಣೆ, ಸಾಗರ ಸಂಬಂಧಿತ ಇಂಜಿನಿಯರಿಂಗ್ ಕಂಪನಿ, ಹಡಗು ದುರಸ್ತಿ, ಸರ್ಕಾರಿ ಅಥವಾ ಅರೆ ಸರ್ಕಾರಿ ಕಂಪನಿಗಳಲ್ಲಿ ಕನಿಷ್ಠ 7 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ವಿಶೇಷವಾಗಿ ಈ ಕೆಲಸದ ಅನುಭವದಲ್ಲಿ ಕನಿಷ್ಠ 2 ವರ್ಷಗಳ ಕಾಲ ಮೇಲ್ವಿಚಾರಕ ಜವಾಬ್ದಾರಿಯನ್ನು ನಿರ್ವಹಿಸಿರಬೇಕು.
  • ಮಾನ್ಯತೆ ಪಡೆದ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
    • ಹಡಗು ನಿರ್ವಹಣೆ, ಸಾಗರ ಸಂಬಂಧಿತ ಇಂಜಿನಿಯರಿಂಗ್ ಕಂಪನಿ, ಹಡಗು ದುರಸ್ತಿ, ಸರ್ಕಾರಿ ಅಥವಾ ಅರೆ ಸರ್ಕಾರಿ ಕಂಪನಿಗಳಲ್ಲಿ ಕನಿಷ್ಠ 15 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ವಿಶೇಷವಾಗಿ ಈ ಕೆಲಸದ ಅನುಭವದಲ್ಲಿ ಕನಿಷ್ಠ 3 ವರ್ಷಗಳ ಕಾಲ ಮೇಲ್ವಿಚಾರಕ ಜವಾಬ್ದಾರಿಯನ್ನು ನಿರ್ವಹಿಸಿರಬೇಕು.

ಸೂಪರ್ವೈಸರ್ (ಮೆಕ್ಯಾನಿಕಲ್):

  • ಸೂಪರ್ವೈಸರ್ (ಮೆಕ್ಯಾನಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
    • ಹಡಗು ನಿರ್ವಹಣೆ, ಸಾಗರ ಸಂಬಂಧಿತ ಇಂಜಿನಿಯರಿಂಗ್ ಕಂಪನಿ, ಹಡಗು ದುರಸ್ತಿ, ಸರ್ಕಾರಿ ಅಥವಾ ಅರೆ ಸರ್ಕಾರಿ ಕಂಪನಿಗಳಲ್ಲಿ ಕನಿಷ್ಠ 7 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ವಿಶೇಷವಾಗಿ ಈ ಕೆಲಸದ ಅನುಭವದಲ್ಲಿ ಕನಿಷ್ಠ 2 ವರ್ಷಗಳ ಕಾಲ ಮೇಲ್ವಿಚಾರಕ ಜವಾಬ್ದಾರಿಯನ್ನು ನಿರ್ವಹಿಸಿರಬೇಕು.
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಶೀಟ್ ಮೆಟಲ್ ವರ್ಕರ್ ಟ್ರೇಡ್ ಅಥವಾ ವೆಲ್ಡಿಂಗ್ ಟ್ರೇಡ್ ಅಥವಾ ಫಿಟ್ಟರ್ ಟ್ರೇಡ್ ಅಥವಾ ಬೆಂಚ್ ಫಿಟ್ಟರ್ ಅಥವಾ ಪ್ಲಂಬರ್ ಟ್ರೇಡ್ ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
    • ಹಡಗು ನಿರ್ವಹಣೆ, ಸಾಗರ ಸಂಬಂಧಿತ ಇಂಜಿನಿಯರಿಂಗ್ ಕಂಪನಿ, ಹಡಗು ದುರಸ್ತಿ, ಸರ್ಕಾರಿ ಅಥವಾ ಅರೆ ಸರ್ಕಾರಿ ಕಂಪನಿಗಳಲ್ಲಿ ಕನಿಷ್ಠ 15 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ವಿಶೇಷವಾಗಿ ಈ ಕೆಲಸದ ಅನುಭವದಲ್ಲಿ ಕನಿಷ್ಠ 3 ವರ್ಷಗಳ ಕಾಲ ಮೇಲ್ವಿಚಾರಕ ಜವಾಬ್ದಾರಿಯನ್ನು ನಿರ್ವಹಿಸಿರಬೇಕು.

ವಯೋಮಿತಿ ವಿವರ:

ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನ ನೇಮಕಾತಿ ಅಧಿಸೂಚನೆ ಪ್ರಕಾರ, ಸೂಪರ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
  • ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಅಭ್ಯರ್ಥಿಗಳಿಗೆ 5 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಸೂಪರ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಪ್ರಮುಖ ವರ್ಗಗಳು ಅರ್ಜಿ ಶುಲ್ಕದ ವಿವರ
ಸಾಮಾನ್ಯ/ ಒಬಿಸಿ/ ಇ.ಡಬ್ಲ್ಯೂ.ಎಸ್ ವರ್ಗಗಳ ಅಭ್ಯರ್ಥಿಗಳಿಗೆ ₹300/-
SC/ ST/ ಪಿ.ಡಬ್ಲ್ಯೂ.ಬಿ.ಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ವೇತನ ಶ್ರೇಣಿ:

ಸೂಪರ್ವೈಸರ್ ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳಿಗೆ ಪ್ರತಿ ವರ್ಷಕ್ಕೆ ಇಂತಿಷ್ಟು ವೇತನವನ್ನು ನಿಗದಿಪಡಿಸಲಾಗಿದೆ. ಅವುಗಳ ವಿವರ ಹೀಗಿದೆ,

  • ಮೊದಲ ವರ್ಷಕ್ಕೆ: ₹40,650/-
  • ಎರಡನೇ ವರ್ಷಕ್ಕೆ: ₹41,490/-
  • ಮೂರನೇ ವರ್ಷಕ್ಕೆ: ₹42,355/-
  • ನಾಲ್ಕನೇ ವರ್ಷಕ್ಕೆ: ₹43,246
  • ಐದನೇ ವರ್ಷಕ್ಕೆ: ₹44,164/-

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು UCSL ಅಧಿಕೃತ ವೆಬ್ಸೈಟ್ https://uidai.gov.in/ ಗೆ ಭೇಟಿ ನೀಡಿ.
  • ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ನಮೂದಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ರಿಜಿಸ್ಟ್ರೇಟಿವ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ನಿಮ್ಮ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಪರಿಶೀಲನೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ಆನ್ಲೈನ್ ಅರ್ಜಿಯನ್ನು ಪರಿಶೀಲನೆ ನಡೆಸಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ಕೆಲಸದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

  • ಲಿಖಿತ ಪರೀಕ್ಷೆ:

ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ 40 ಅಂಕಗಳ ವಸ್ತುನಿಷ್ಠ ಪರೀಕ್ಷೆಯನ್ನು ಹಾಗೂ 40 ಅಂಕಗಳ ವಿವರಣಾತ್ಮಕ ಪ್ರಕಾರ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ಪವರ್ ಪಾಯಿಂಟ್ ಪ್ರಸಂಟೇಷನ್:

ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಒಂದು ಹಂತಕ್ಕೆ ಆಯ್ಕೆಯಾಗುತ್ತಾರೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ತಾಂತ್ರಿಕ ಜ್ಞಾನ ಹಾಗೂ ಮೇಲ್ವಿಚಾರಕ ಸಾಮರ್ಥ್ಯವನ್ನು ಅಳೆಯಲಾಗುತ್ತದೆ.

  • ಅಂತಿಮ ಆಯ್ಕೆ:

ಅಭ್ಯರ್ಥಿಗಳು ಈ ಮೇಲಿನ ಎಲ್ಲಾ ಹಂತಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 02-04-2026
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ02-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22-04-2026

ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ವಿವಿಧ ವಿಭಾಗಗಳ ಅಡಿಯಲ್ಲಿ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

1 thought on “UCSL: ₹44,000 ವೇತನ! ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026 । ಡಿಪ್ಲೊಮಾ, ITI ಪಾಸ್”

Leave a Comment